ಮಂಗಳೂರು: ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಡಾ. ಜೆರಾಲ್ಡ್ ಪಿಂಟೊ ಆಯ್ಕೆ

ಮಂಗಳೂರು: ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿ ಆರಂಭಗೊಂಡಿತು. 2022 ರಲ್ಲಿ ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರನ್ನು ಆಯ್ಕೆ ಮಾಡಿ ಗೌರವಿಸಲು ಕೊಂಕಣಿ ಲೇಖಕ್ ಸಂಘ್ ನಿರ್ಧರಿಸಿತು. 2024 ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಸಾಹಿತಿ ಡಾ| ಜೆರಾಲ್ಡ್ ಪಿಂಟೊ (ಜೆರಿ, ನಿಡ್ಡೋಡಿ) ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕ ರಿಚರ್ಡ್ ಮೊರಾಸ್ ಹೇಳಿದರು. ಅವರು ಶುಕ್ರವಾರ […]

ಮಾಲ್ಡೀವ್ಸ್‌ಗೆ ನೀಡುವ ಆರ್ಥಿಕ ಸಹಾಯ ಶೇಕಡಾ 22 ರಷ್ಟು ಕಡಿತ; ಲಕ್ಷದ್ವೀಪ ಅಭಿವೃದ್ದಿಯತ್ತ ಭಾರತ ಚಿತ್ತ

ನವದೆಹಲಿ: ಗುರುವಾರ ಸರ್ಕಾರ ಬಿಡುಗಡೆ ಮಾಡಿದ ಮಧ್ಯಂತರ ಬಜೆಟ್ ದಾಖಲೆಯ ಪ್ರಕಾರ, 2024-25 ರ ಆರ್ಥಿಕ ವರ್ಷಕ್ಕೆ ಮಾಲ್ಡೀವ್ಸ್‌ಗೆ ನೀಡುವ ಆರ್ಥಿಕ ಸಹಾಯವನ್ನು ಶೇಕಡಾ 22 ರಷ್ಟು ಕಡಿತಗೊಳಿಸಲು ಭಾರತ ಪ್ರಸ್ತಾಪಿಸಿದೆ. ಕಳೆದ ಕೆಲವು ವರ್ಷಗಳಿಂದ, ಭಾರತವು ಮಾಲ್ಡೀವ್ಸ್‌ಗೆ ಪ್ರಮುಖ ನೆರವು ಮತ್ತು ಸಹಾಯ ಪಾಲುದಾರನಾಗಿದೆ. ದ್ವೀಪ ರಾಷ್ಟ್ರಕ್ಕೆ ಭಾರತದ ನೆರವು ರಕ್ಷಣೆ, ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯದಂತಹ ಕ್ಷೇತ್ರಗಳನ್ನು ಒಳಗೊಂಡಿರುತ್ತದೆ. ಮಾಲ್ಡೀವ್ಸ್‌ಗೆ ಅಭಿವೃದ್ಧಿ ಸಹಾಯಕ್ಕಾಗಿ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. 2023-24ರಲ್ಲಿ ಮಾಲ್ಡೀವ್ಸ್‌ಗೆ 770.90 ಕೋಟಿ […]

ಹೆಬ್ರಿ: ಚಾಣಕ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಅವರಿಗೆ ಸನ್ಮಾನ

ಹೆಬ್ರಿ: ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನದ ಆಚರಣೆ ಸೀಮಿತವಾಗಿರಬಾರದು ಎಂಬ ಉದ್ದೇಶದಿಂದ ಶಾಲೆ ಕಾಲೇಜಿಗೆ ತೆರಳಿ ನಿರಂತರವಾಗಿ ಕನ್ನಡ ಕಂಪನ್ನು ವಷ೯ ಪೂತಿ೯ ಕನ್ನಡ ಗೀತೆಗಳ ಗಾಯನ, ಗಾನಯಾನ ಕಾಯ೯ಕ್ರಮ ಮೂಲಕ ರಾಜ್ಯಕ್ಕೆ ಮಾದರಿಯಾದ ಹೆಬ್ರಿಯ ಚಾಣಕ್ಯ ಸಂಸ್ಥೆಯ ಕನ್ನಡ ಅಭಿಮಾನ ಶ್ಲಾಘನೀಯ ಎಂದು ನೆಲ್ಲಿಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಹೆಗ್ಡೆ ಹೇಳಿದರು. ಮುದ್ರಾಡಿ ನೆಲ್ಲಿಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಚಿಣ್ಣರ ಕಲರವ ಮಕ್ಕಳ ಪ್ರತಿಭಾ ಪುರಸ್ಕಾರ […]

ಕಾಪು: ಖಾಯಂ ಶಿಕ್ಷಕರ ಬೇಡಿಕೆಯೊಡ್ಡಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕಾಪು: ತಾಲೂಕಿನ ಬೆಳ್ಳಂಪಲ್ಲಿಯಲ್ಲಿರುವ ಜೈ ಹಿಂದ್ ಸರಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 55 ವಿದ್ಯಾರ್ಥಿಗಳು, ಅವರ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳು ಸೇರಿ ಶಾಲೆಗೆ ಖಾಯಂ ಶಿಕ್ಷಕರನ್ನು ನೀಡಬೇಕು ಎಂದು ಆಗ್ರಹಿಸಿ ಗುರುವಾರ ಶಾಲೆಯ ಎದುರು ಪ್ರತಿಭಟನೆ ನಡೆಸಿದರು. 1947 ರಲ್ಲಿ ಪ್ರಾರಂಭವಾದಾಗಿನಿಂದ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಿಸಲಾಗಿಲ್ಲ ಎಂದು ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಹೇಳಿದರು. ಕಳೆದ ಆರು ವರ್ಷಗಳಿಂದ, ತರಗತಿಗಳನ್ನು ನಡೆಸಲು ಹತ್ತಿರದ ಅನುದಾನಿತ ಶಾಲೆಯ ಶಿಕ್ಷಕರನ್ನು ವಾರಕೊಮ್ಮೆ ನಿಯೋಜಿಸಲಾಗುತ್ತಿದೆ. ಹದಿನೈದು ದಿನಗಳ […]

ಬೆಂಗಳೂರು: ಅಖಿಲ ಭಾರತೀಯ ಕಲಾಸಾಧಕ ಸಂಗಮ ಕಾರ್ಯಕ್ರಮ ಉದ್ಘಾಟನೆ

ಬೆಂಗಳೂರು: ಸಂಸ್ಕಾರ ಭಾರತಿ ವತಿಯಿಂದ ಆರ್ಟ್ ಆಫ್ ಲಿವಿಂಗ್ ಆವರಣದಲ್ಲಿ ಫೆಬ್ರವರಿ 1 ರಿಂದ 4 ವರೆಗೆ‌ ಆಯೋಜಿಸಲಾಗಿರುವ ಅಖಿಲ ಭಾರತೀಯ ಕಲಾಸಾಧಕ ಸಂಗಮ ಕಾರ್ಯಕ್ರಮ ಗುರುವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ವಿಜಯನಗರ ರಾಜವಂಶಸ್ಥ ಕೃಷ್ಣದೇವರಾಯ, ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿ, ಕಲಾವಿದ ರವೀಂದ್ರ ಯಾವಗಲ್, ಸಂಸ್ಕಾರ ಭಾರತಿಯ ಅಖಿಲ ಭಾರತೀಯ ಅಧ್ಯಕ್ಷ ವಾಸುದೇವ ಕಾಮತ್, ಉಪಾಧ್ಯಕ್ಷ ಮೈಸೂರು ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಅಶ್ವಿನ್ ದಳ್ವಿ, ಕರ್ನಾಟಕ […]