ರಾಮಲಲ್ಲಾನಿಗೆ ಕಾಷ್ಠ ಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲ ಸೇವೆ: ರಘುಪತಿ ಭಟ್ ಅವರಿಂದ ಅರ್ಪಣೆ
ಉಡುಪಿ: ಇಲ್ಲಿನ ನಿಕಟಪೂರ್ವ ಶಾಸಕ ಕೆ . ರಘುಪತಿ ಭಟ್ , ಅಯೋಧ್ಯೆಯ ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠ ಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸಲಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಬೀಟಿ ಮರದಿಂದ ನಿರ್ಮಿಸಲಾದ ಅತ್ಯಂತ ಸುಂದರ ಕಾಷ್ಠ ರಚನೆಗಳುಳ್ಳ ತೊಟ್ಟಿಲನ್ನು ರಘುಪತಿ ಭಟ್ ಖರೀದಿಸಿದ್ದು, ಫೆ .7 ರಂದು ಸಂಜೆ ನಡೆಯುವ ಉತ್ಸವದಲ್ಲಿ ಅರ್ಪಣೆಯಾಗಲಿದ್ದು, ಈ ವೇಳೆ ನೂತನ ತೊಟ್ಟಿಲಲ್ಲಿ ಬಾಲ ರಾಮ ದೇವರಿಗೆ ತೊಟ್ಟಿಲು ಸೇವೆ ನಡೆಸಲಾಗುವುದು ಎಂದು ರಘುಪತಿ ಭಟ್ ತಿಳಿಸಿದ್ದಾರೆ. ಪೇಜಾವರ ಮಠಾಧೀಶರಾದ ಶ್ರೀ […]
ಉಪಲೋಕಾಯುಕ್ತರಿಂದ ಶ್ರೀಕೃಷ್ಣ ಮಠ ಭೇಟಿ
ಉಡುಪಿ: ಕರ್ನಾಟಕ ಉಪಲೋಕಾಯುಕ್ತ, ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಸಂಜೆ ಶ್ರೀಕೃಷ್ಣನ ಪೂಜೆ ಮತ್ತು ಉತ್ಸವದಲ್ಲಿ ಭಾಗವಹಿಸಿ ಪರ್ಯಾಯ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥರಿಗೆ ನಮನ ಸಲ್ಲಿಸಿದರು.
ಪುತ್ತಿಗೆ ಮಠ ಕಿರಿಯ ಶ್ರೀಗಳಿಂದ ಶ್ರೀ ಕೃಷ್ಣನಿಗೆ ವಿದ್ಯುಕ್ತ ಪೂಜೆ
ಉಡುಪಿ: ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿಗಳಾದ ಸುಶ್ರೀಂದ್ರತೀರ್ಥರು ಶ್ರೀಕೃಷ್ಣ ಮೂರ್ತಿಯನ್ನು ಸ್ಪರ್ಶಿಸಿ ಪೂಜೆ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ ಪುತ್ತಿಗೆ ಮಠದ ಹಿರಿಯ ಶ್ರೀಗಳು ಕಿರಿಯ ಶ್ರೀಗಳಿಗೆ ಶ್ರೀಕೃಷ್ಣನ ಮೂರ್ತಿಯನ್ನು ಮುಟ್ಟಿಸಿ, ಪೂಜಾಧಿಕಾರ ನೀಡಿದ್ದರು ಎನ್ನಲಾಗಿದ್ದು, ಭಾನುವಾರ ಕಿರಿಯ ಯತಿಗಳೇ ಪೂಜೆ ನಡೆಸಿದ್ದಾರೆ. ಆ ಮೂಲಕ ಕಳೆದ ಕೆಲವು ದಿನಗಳಿಂದ ಇದ್ದ ಕೃಷ್ಣ ಪೂಜಾಧಿಕಾರದ ಬಗೆಗಿನ ಸಂದೇಹಗಳಿಗೆ ತೆರೆ ಎಳೆದಿದ್ದಾರೆ.
ಸುಳ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ? ಪಕ್ಷದ ಕಚೇರಿಗೆ ಬೀಗ!
ಸುಳ್ಯ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಎಸ್ ಅಂಗಾರಗೆ ಟಿಕೆಟ್ ನೀಡದೆ ಭಾಗೀರಥಿ ಮುರುಳ್ಯಗೆ ಟಿಕೆಟ್ ನೀಡಿದ್ದಕ್ಕೆ ಸುಳ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದು ಜಗಳ ನಡೆದಿತ್ತು. ಅಂದಿನಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಜಗಳ ಮತ್ತೆ ಮುನ್ನೆಲೆಗೆ ಬಂದಿದೆ ಎನ್ನಲಾಗಿದೆ. ಎರಡು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬಿಜೆಪಿ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಈ ವೇಳೆ ಸುಳ್ಯ ಬಿಜೆಪಿ ಮಂಡಲ ಸಮಿತಿಗೆ ನೂತನ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಅವರನ್ನು ನೇಮಕ ಮಾಡಲಾಗಿದೆ. ವೆಂಕಟ್ […]
ಇಂದಿನಿಂದ ರಸ್ತೆಗಳಲ್ಲಿ ಓಡಾಡಲಿದೆ ಕ.ರಾ. ರ.ಸಾ.ಸಂಸ್ಥೆಯ ಅಶ್ವಮೇಧ ಕ್ಲಾಸಿಕ್ ಹೈ ಟೆಕ್ ಬಸ್ಸುಗಳು
ಬೆಂಗಳೂರು: ಇಂದಿನಿಂದ ರಾಜ್ಯದ ರಸ್ತೆಗಳಲ್ಲಿ ನೂತನ 100 ಅಶ್ವಮೇಧ ಕ್ಲಾಸಿಕ್ (Ashvamedha Classic) ಬಸ್‌ಗಳು ಕಾರ್ಯಾರಂಭ ಮಾಡಲಿದ್ದು, ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ಬಸ್‌ಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಅಶ್ವಮೇಧ ಬಸ್‌ಗಳು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಒಟ್ಟು 800 ಬಸ್‌ಗಳ ಪೈಕಿ ಇಂದು 100 ಬಸ್‌ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮುಂದಿನ ಹಂತದಲ್ಲಿ ಇನ್ನುಳಿದ ಬಸ್‌ಗಳು ಸೇರ್ಪಡೆಗೊಳ್ಳಲಿವೆ. […]