ಕೃಷಿ ಯಂತ್ರ- ಹೈಟೆಕ್ ಹಾರ್ವೇಸ್ಟರ್ ಹಬ್ ಸ್ಥಾಪನೆಗೆ ಸಹಾಯಧನ ಲಭ್ಯ
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸಲು ಸ್ಥಾಪಿಸಲಾಗಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೇಸ್ಟರ್ ಹಬ್‌ಗಳನ್ನು ಹಂತಹಂತವಾಗಿ ಸ್ಥಾಪಿಸುವ ಸಲುವಾಗಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಜಬ್ಬ ಪ್ರಯತ್ನಕ್ಕೆ ಫಲ: ಹರೇಕಳಕ್ಕೆ ಪದವಿಪೂರ್ವ ಕಾಲೇಜಿಗೆ ಶಿಕ್ಷಣ ಇಲಾಖೆ ಅಸ್ತು
ಮಂಗಳೂರು: ಕಿತ್ತಳೆ ಹಣ್ಣು ವ್ಯಾಪಾರಿ ಹರೇಕಳ ಹಾಜಬ್ಬ ಪರಿಶ್ರಮಕ್ಕೆ ಯಶಸ್ಸು ದೊರೆತಿದ್ದು, ಉಳ್ಳಾಲ ತಾಲ್ಲೂಕಿನ ಹರೇಕಳದಲ್ಲಿ ಹಾಜಬ್ಬ ನಿರ್ಮಿಸಿದ್ದ ಪ್ರೌಢಶಾಲೆಯು ಪದವಿಪೂರ್ವ ಕಾಲೇಜಾಗಿ ಮೇಲ್ದರ್ಜೆಗೇರಲಿದೆ. ಹರೇಕಳ ಪರಿಸರದಲ್ಲಿ ಪದವಿಪೂರ್ವ ಕಾಲೇಜು ಇಲ್ಲದ ಕಾರಣ ಇಲ್ಲಿನ ವಿದ್ಯಾರ್ಥಿಗಳು ಪದವಿಪೂರ್ವ ವಿದ್ಯಾಭ್ಯಾಸಕ್ಕಾಗಿ ದೂರದ ಪಟ್ಟಣದ ಕಾಲೇಜುಗಳಿಗೆ ಹೋಗಬೇಕಾದ ಸ್ಥಿತಿ ಇದೆ. ಹಾಗಾಗಿ ಇಲ್ಲಿನ ಪ್ರೌಢ ಶಾಲೆಯನ್ನು ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಬೇಕು ಎಂದು ಹರೇಕಳ ಹಾಜಬ್ಬ ಅನೇಕ ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದರು. ಹಾಜಬ್ಬ ಅವರ ಮನವಿಗೆ ಸ್ಪಂದಿಸಿದ […]
ನಿಟ್ಟೆ ಆಡ್ಯಂತಾಯ ಸ್ಮಾರಕ ತಾಂತ್ರಿಕ ವಿದ್ಯಾಲಯದಲ್ಲಿ ಇಂಡಸ್ಟ್ರಿ-ಅಕಾಡೆಮಿಯಾ ಕಾನ್ಕ್ಲೇವ್ 2024
ನಿಟ್ಟೆ: ಶಿಕ್ಷಣ ಮತ್ತು ಉದ್ಯಮದ ನಡುವಿನ ಬಾಂಧವ್ಯವನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಫೆಬ್ರವರಿ 2 ಮತ್ತು 3 ರಂದು ಎರಡು ದಿನಗಳ ಉದ್ಯಮ-ಶೈಕ್ಷಣಿಕ ಸಮಾವೇಶ 2024 ನ್ನು ಆಯೋಜಿಸಿತ್ತು. ನವದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸಸ್ಟೈನಬಲ್ ಡೆವಲಪ್ಮೆಂಟ್ನ ಮಹಾನಿರ್ದೇಶಕ ಮತ್ತು ಭಾರತ ಸರ್ಕಾರದ ರಾಷ್ಟ್ರೀಯ ಹವಾಮಾನ ಬದಲಾವಣೆ ಮಿಷನ್ ಗಳ ಸದಸ್ಯ ಡಾ. ಶ್ರೀಕಾಂತ್ ಕೆ. ಪಾಣಿಗ್ರಾಹಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ […]