ಐದು ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಮಾರ್ಚ್ 3 ರಂದು ಜಿಲ್ಲೆಯಾದ್ಯಂತ 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆಯನ್ನು ನೀಡಲಾಗುತ್ತಿದ್ದು, ಜಿಲ್ಲೆಯ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ಹಾಕಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ನಮ್ಮ ದೇಶದಲ್ಲಿ ಪಲ್ಸ್ ಪೊಲಿಯೋ ಪ್ರಕರಣಗಳು ಶೂನ್ಯವಿದ್ದರೂ ಸಹ, ಯಾವುದೇ ಮಕ್ಕಳಿಗೆ ಬರಬಾರದು […]

ಮಧ್ಯಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: 10 ಕ್ಕೂ ಹೆಚ್ಚು ಸಾವು, 50 ಜನರಿಗೆ ಗಾಯ, ಮನೆ-ವಾಹನಗಳಿಗೆ ಹಾನಿ

ಭೋಪಾಲ್: ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗಢ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 10 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಜನರು ಗಾಯಗೊಂಡಿದ್ದಾರೆ. ಸ್ಫೋಟವು ಸಮೀಪದ ಅರವತ್ತು ಮನೆಗಳು ಹಾನಿಗೀಡಾಗಿವೆ. ಮೂರು ಡಜನ್‌ಗಿಂತಲೂ ಹೆಚ್ಚು ಪ್ರಯಾಣಿಕರು ಸ್ಫೋಟದಿಂದ ಪ್ರಭಾವಿತರಾಗಿದ್ದಾರೆ. ಕಾರ್ಖಾನೆಯಲ್ಲಿ ನಿರಂತರ ಸ್ಫೋಟಗಳು ಸಂಭವಿಸಿದ ಕಾರಣ 100 ಕ್ಕೂ ಹೆಚ್ಚು ಮನೆಗಳನ್ನು ಅಧಿಕಾರಿಗಳು ಸ್ಥಳಾಂತರಿಸಿದ್ದಾರೆ. ಸ್ಫೋಟದಿಂದಾಗಿ ಗಮನಾರ್ಹ ಸಂಖ್ಯೆಯ ದ್ವಿಚಕ್ರ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ […]

ಬಿಜೆಪಿ ನಾಯಕ ಸೋಮಶೇಖರ್ ಭಟ್ ಅವರಿಗೆ ಅಂತಿಮ ವಿದಾಯ ಸಲ್ಲಿಸಿದ ಗಣ್ಯರು

ಉಡುಪಿ: ಹಿರಿಯ ಬಿಜೆಪಿ ನಾಯಕ ಸೋಮಶೇಖರ್ ಭಟ್ ಅವರ ಅಂತ್ಯ ಸಂಸ್ಕಾರವನ್ನು ಸೋಮವಾರ ಬೀಡಿನಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು. ಬೆಳಗ್ಗೆ ಕಾಡುಬೆಟ್ಟುವಿನಲ್ಲಿರುವ ಭಟ್ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ರಾಷ್ಟ್ರೀಯ ಸ್ವಯಂಸೇವಕ ಸಂಘದ […]

ಶ್ರೀ ಕೃಷ್ಣ ಮಠಕ್ಕೆ ಇಂಧನ ಸಚಿವರ ಭೇಟಿ

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಇಂಧನ ಸಚಿವರಾದ ಕೆ. ಜೆ.ಜಾರ್ಜ್ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ನಂತರ ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಭೇಟಿ ಮಾಡಿ ಅವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀಪಾದರು ವಿಶ್ವ ಗೀತಾ ಪರ್ಯಾಯ ಬಗ್ಗೆ ತಿಳಿಸಿ ಭಗವದ್ಗೀತೆಯ ವ್ಯಾಪಕ ಪ್ರಚಾರದ ಬಗ್ಗೆ ಮಾಹಿತಿ ನೀಡಿ ಸಚಿವರಿಗೆ ಭಗವದ್ಗೀತೆಯ ಪುಸ್ತಕವನ್ನು ನೀಡಿ ಹರಸಿದರು.

ನವವಿವಾಹಿತೆ ಆತ್ಮಹತ್ಯೆಗೆ ಶರಣು

ಪುತ್ತೂರು: ನವವಿವಾಹಿತೆಯೊಬ್ಬರು ನೇಣು ಬಿಗಿದು ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ಸಂಭವಿಸಿದೆ. ಆತ್ಮಹತ್ಯೆಗೆ ಶರಣಾದವರು ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಷ್ಪ ದಂಪತಿ ಪುತ್ರಿ ಶೋಭಾ (26) ಎಂದು ತಿಳಿದು ಬಂದಿದೆ. ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ […]