2022ರ ರಸ್ತೆ ತಡೆ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಹಿತ ಕಾಂಗ್ರೆಸ್ ನಾಯಕರಿಗೆ 10 ಸಾವಿರ ದಂಡ; ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಹೈಕೋರ್ಟ್ ಆದೇಶ

ಬೆಂಗಳೂರು: 2022ರಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಸಿಎಂ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ ಎಂದು ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ. ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 […]

ಉಡುಪಿ ಶ್ರೀ ಕೃಷ್ಣ ಮಠ ರಾಜಾಂಗಣದಲ್ಲಿ ಶತಕಂಠ ಗಾಯನ

ಉಡುಪಿ: ಪರ್ಯಾಯ ಶ್ರೀಪುತ್ತಿಗೆ ಮಠ ಮತ್ತು ಸುಗುಣಶ್ರೀ ಭಜನಾ ಮಂಡಳಿ, ಮಣಿಪಾಲ ಹಾಗೂ ರತ್ನಸಂಜೀವ ಕಲಾಮಂಡಲ ಸರಳೇಬೆಟ್ಟು ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಮತ್ತು ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳವರ ಪರಮಾನುಗ್ರಹದಿಂದ ಫೆ.9 ರಂದು ಮಧ್ಯಾಹ್ನ 3 ಗಂಟೆಯಿಂದ ದಾಸಶ್ರೇಷ್ಠರಾದ ಶ್ರೀ ಪುರಂದರ ದಾಸರ ಆರಾಧನಾಂಗವಾಗಿ ಶತಕಂಠ ಗಾಯನ ಶ್ರೀ ಕೃಷ್ಣ ಮಠ ರಾಜಾಂಗಣದಲ್ಲಿ ನಡೆಯಲಿದೆ. ರಾಜಾಂಗಣದಲ್ಲಿ 100ಕ್ಕೂ ಮಿಕ್ಕಿ ಗಾಯಕರು ಗಾಯನವನ್ನು ಪ್ರಸ್ತುತ ಪಡಿಸಲಿದ್ದಾರೆ […]

ನಿಟ್ಟೆ: ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟನೆ

ಕಾರ್ಕಳ: ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಆಫ್-ಕ್ಯಾಂಪಸ್ ಕೇಂದ್ರವಾದ ಎನ್.ಎಂ.ಎ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು ಬೆಂಗಳೂರಿನ WIPRO3D ಬೆಂಬಲದೊಂದಿಗೆ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಸೆಂಟರ್ ಆಫ್ ಎಕ್ಸಲೆನ್ಸ್ ನ್ನು ಫೆ.೫ ರಂದು ಉದ್ಘಾಟನೆಗೈಯ್ಯಲಾಯಿತು. ನಿಟ್ಟೆ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗವು ರಾಷ್ಟ್ರೀಯ ಸಂಯೋಜಿತ ಉತ್ಪಾದನಾ ಕೇಂದ್ರ (ಎನ್.ಸಿ.ಎ.ಎಂ) ಪ್ರಾಯೋಜಕತ್ವದಲ್ಲಿ “ಸ್ಟ್ರಾಟಜೀಸ್ ಫಾರ್ ಎನ್ಹ್ಯಾನ್ಸಿಂಗ್ ಸರ್ಫೇಸ್ ಇಂಟಗ್ರಿಟಿ, ಮೆಕ್ಯಾನಿಕಲ್ ಪ್ರಾಪರ್ಟೀಸ್ ಆಂಡ್ ಮಿನಿಮೈಸಿಂಗ್ ರೆಸಿಡುಯೆಲ್ ಸ್ಟ್ರೆಸ್ ಇನ್ ಎಡಿಟಿವ್ಲಿ ಮ್ಯಾನುಫ್ಯಾಕ್ಚರ್ಡ್ ಕಾಂಪೋನೆಂಟ್ಸ್” ಎಂಬ ವಿಷಯದ ಕುರಿತು ಐದು ದಿನಗಳ […]

ನವೆಂಬರ್ ನಿಂದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು: ಮಧು ಬಂಗಾರಪ್ಪ

ಮೈಸೂರು: ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ನೀರಿನ ಸಂಪರ್ಕವನ್ನು ನವೆಂಬರ್​ನಿಂದ ಪೂರೈಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಅವರು ಮಂಗಳವಾರ ಮೈಸೂರಿನಲ್ಲಿ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮಕ್ಕೆ‌ ಚಾಲನೆ ನೀಡಿ ಮಾತನಾಡಿದರು. ಶಾಲೆಗಳಲ್ಲಿ ಮುಕ್ತವಾಗಿ ಎಲ್ಲಾ ವ್ಯವಸ್ಥೆ ಬಳಸಿಕೊಳ್ಳಬಹುದು. ಹಲವು ಶಾಲೆಗಳಿಗೆ ವಿದ್ಯುತ್ ಬಿಲ್ ಕಟ್ಟಲು ಸಾಧ್ಯವಾಗುತ್ತಿಲ್ಲ, ಉಚಿತವಾಗಿ ವಿದ್ಯುತ್​ ಹಾಗೂ ನೀರು ನೀಡಿದರೆ ಎಲ್ಲಾ ಸರ್ಕಾರಿ ಶಾಲೆಗಳಿಗೆ […]

ಮಣಿಪಾಲ ಪೊಲೀಸ್​ ಠಾಣೆಯಲ್ಲಿ ಕೋಳಿ ಹರಾಜು; ಖರೀದಿಸಲು ಮುಗಿಬಿದ್ದ ಜನ

ಮಣಿಪಾಲ: ಇಲಾಖೆಯ ಅನುಮತಿ ಇಲ್ಲದೆ ನಡೆಸುತ್ತಿದ್ದ ಕೋಳಿ ಅಂಕ (ಕೋರ್ದಟ್ಟ) ಬೆಟ್ಟಿಂಗ್​ ಅಡ್ಡೆ ಮೇಲೆ ಮಣಿಪಾಲ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಸುಮಾರು 25 ಕೋಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಸೋಮವಾರದಂದು ಈ ಕೋಳಿಗಳನ್ನು ಪೊಲೀಸರು ಹರಾಜು ಹಾಕಿದ್ದು, ಅಂಕದ ಕೋಳಿಗಳನ್ನು ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಒಂದು ಕೋಳಿಗೆ 400 ರೂ. ಒಂದು ವಾರ್, ಎರಡು ವಾರ್, ಮೂರು ವಾರ್ ಅಂತ ಹರಾಜು ಪ್ರಕ್ರಿಯೆ ನಡೆದಿದೆ. ಈ ಕೋಳಿಗಳನ್ನು ಖರೀದಿಸಲು ಕೋಳಿಪ್ರಿಯ ನಾ ಮುಂದು ತಾ ಉಂದು ಎಂದು […]