ಮಾಹೆ ವತಿಯಿಂದ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ. ದೇಣಿಗೆ ಹಸ್ತಾಂತರ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್(MAHE) ವತಿಯಿಂದ 5 ಲಕ್ಷ ರೂ. ದೇಣಿಗೆಯನ್ನು ಬುಧವಾರ ಹಸ್ತಾಂತರಿಸಲಾಯಿತು. ಮಣಿಪಾಲ ಮಾಹೆಯ ಎಜ್ಯು ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಉಪ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಅವರು ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ 5 ಲಕ್ಷ ರೂ. […]

ಭಟ್ಕಳ: ಫೆ. 11ರಂದು ಬ್ರೌನ್ ವುಡ್ ಫರ್ನಿಚರ್ ಮಳಿಗೆ ಶುಭಾರಂಭ

ಭಟ್ಕಳ: ಜಿಲ್ಲೆಯ ಮನೆಮಾತಾಗಿರುವ ಪೀಠೋಪಕರಣ ಮಳಿಗೆ ಬ್ರೌನ್ ವುಡ್ ಫರ್ನಿಚರ್ ನ ನೂತನ ಮಳಿಗೆಯು ಭಟ್ಕಳ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಹತ್ತಿರ ಇರುವ ಎಸ್.ಆರ್.ಎಸ್ ಶಾಪಿಂಗ್ ಕಾಂಪ್ಲೆಕ್ಸಿನ ಮೊದಲನೆ ಮಹಡಿಯಲ್ಲಿ ಫೆ. 11ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮಳಿಗೆಯನ್ನು ಭಟ್ಕಳ ನಾಗಯಕ್ಷಿ ದೇವಸ್ಥಾನದ ಧರ್ಮದರ್ಶಿ ರಾಮದಾಸ ಪ್ರಭು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕಿನ ರೀಜನಲ್ ಆಫೀಸ್ ಡಿಜಿಎಂ ಶೀಬಾ ಸಹಜನ್, ನಾಮಧಾರಿ ಸಮಾಜ ಸಂಘದ ಅಧ್ಯಕ್ಷ ಅರುಣ ನಾಯ್ಕ, ಭಟ್ಕಳ ತಾಲೂಕು ಆಸ್ಪತ್ರೆ ಮುಖ್ಯ […]

ಬೆಂಗಳೂರು: ಬಾರ್ಕೂರು ರುಕ್ಮಿಣಿ ಶೆಡ್ತಿ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಭೆ

ಬೆಂಗಳೂರು: ಬೆಂಗಳೂರಿನಲ್ಲಿ ನೆಲೆಸಿರುವ ಬಾರ್ಕೂರು ರುಕ್ಮಿಣಿ ಶೆಡ್ತಿ ಕಾಲೇಜಿನ ಹಳೆವಿದ್ಯಾರ್ಥಿಗಳ ಸಭೆಯು ಮಂಗಳವಾರ ನೆರವೇರಿತು. ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕಎ.ಕಿರಣ್ ಕೊಡ್ಗಿ ಭಾಗವಹಿಸಿದರು. ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಗೌರವ ಅದ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಶಜಿತ್ ಶೆಟ್ಟಿ , ಸ್ವಾಗತ ಸಮಿತಿ ಸಂಚಾಲಕ ಶ್ರೀನಿವಾಸ ಶೆಟ್ಟಿ ಆವರ್ಸೆ, ಉಪಾಧ್ಯಕ್ಷ ದಿವಾಕರ ಶೆಟ್ಟಿ ಬೆಳ್ತಾಡಿ, ಬೆಂಗಳೂರು ವಲಯ ಸಂಚಾಲಕರಂಜಿತ್ ಶಿರಿಯಾರ ಹಾಗೂ ಇನ್ನಿತರು ಉಪಸ್ಥಿತರಿದ್ದರು.

ಕುಂದಾಪುರ: ಕೆನರಾ ಬ್ಯಾಂಕ್ ವತಿಯಿಂದ ಶ್ರೀ ವೆಂಕಟರಮಣ ಸಮೂಹ ಸಂಸ್ಥೆಗೆ ಜನರೇಟರ್ ಕೊಡುಗೆ

ಕುಂದಾಪುರ: ಕೆನರಾ ಬ್ಯಾಂಕ್ ವತಿಯಿಂದ ಶ್ರೀ ವೆಂಕಟರಮಣ ಸಮೂಹ ಸಂಸ್ಥೆಗೆ ನೂತನ ಜನರೇಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಕೆನರಾ ಬ್ಯಾಂಕ್ ಮಣಿಪಾಲ ಇಲ್ಲಿನ ಪ್ರಧಾನ ವ್ಯವಸ್ಥಾಪಕರಾದ ಎಂ. ಜಿ. ಪಂಡಿತ್ ನೂತನ ಜನರೇಟರ್ ಅನ್ನು ಉದ್ಘಾಟಿಸಿ, ಸಂಸ್ಥೆಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕುಂದಾಪುರ ಕೆನರಾ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕಿ ಭಾರತಿ ವಸಂತ್, ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ, ವೆಂಕಟರಮಣ ಸಂಸ್ಥೆಯ ಖಜಾಂಚಿ ಕೆ. ಲಕ್ಷ್ಮೀ ನಾರಾಯಣ ಶೆಣೈ, ವೆಂಕಟರಮಣ ಪದವಿ ಪೂರ್ವ ಕಾಲೇಜಿನ […]

ಯೂನಿಯನ್ ಬ್ಯಾಂಕಿನ ಸಿಬ್ಬಂದಿಗೆ ಬೀಳ್ಕೊಡುಗೆ ಸನ್ಮಾನ

ಉಡುಪಿ: ಯೂನಿಯನ್ ಬ್ಯಾಂಕ್ ನಲ್ಲಿ ಸುಮಾರು 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚಿಗೆ ನಿವೃತ್ತಿಯಾದ ಚಂದ್ರಕಾಂತ ಪಡಿಯಾರ್ ಇವರನ್ನು ಸನ್ಮಾನಿಸಲಾಯಿತು. ಇವರು ಉಡುಪಿ , ಹೇರಾಡಿ , ಕಾರ್ಕಳ , ಶಿರ್ವ , ಕುರ್ಕಾಲು , ಅಂಬಲಪಾಡಿ ಮತ್ತು ಅಲೆವೂರುಗಳಲ್ಲಿ ಶಾಖೆ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದು, ಅಲೆವೂರು ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ಸೌರಬ್ ಸುಮನ್ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರ . ಪ್ರವೀಣ ಪ್ರಕಾಶ್ , ರಂಜನಿ , ಸುರೇಂದ್ರ , ದಿನೇಶ್ […]