ವಿಶ್ವ ಕ್ಯಾನ್ಸರ್ ದಿನ ನಿಮಿತ್ತ ಕೆ.ಎಂ.ಸಿ ಆಸ್ಪತ್ರೆಯಿಂದ ಮಾನವ ಕ್ಯಾನ್ಸರ್ ಜಾಗೃತಿ ರಿಬ್ಬನ್ ಪ್ರದರ್ಶನ
ಮಣಿಪಾಲ: ವಿಶ್ವ ಕ್ಯಾನ್ಸರ್ ದಿನದ ಸಂದರ್ಭದಲ್ಲಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಮಣಿಪಾಲ್ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಹಯೋಗದೊಂದಿಗೆ ಒಗ್ಗಟ್ಟಿನ ಮತ್ತು ಜಾಗೃತಿಯ ಪ್ರಬಲ ಪ್ರದರ್ಶನವನ್ನು ಆಯೋಜಿಸಿ ಬೃಹತ್ ಮಾನವ ಸರಪಳಿಯ ಮೂಲಕ ಕ್ಯಾನ್ಸರ್ ಜಾಗೃತಿ ರಿಬ್ಬನ್ ಅನ್ನು ರೂಪಿಸಿತು. ಆಸ್ಪತ್ರೆಯ ವೈದ್ಯರು, ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಗಳು ಕ್ಯಾನ್ಸರ್ ಸುತ್ತಲಿನ ಮೂಢನಂಬಿಕೆಗಳು ಮತ್ತು ತಪ್ಪುಗ್ರಹಿಕೆಗಳನ್ನು ಹೋಗಲಾಡಿಸುವ ಮತ್ತು ಕ್ಯಾನ್ಸರ್ ಕಾಯಿಲೆಯ ಚಿಹ್ನೆಗಳು, ಲಕ್ಷಣಗಳು ಮತ್ತು ಅಪಾಯಕಾರಿ ಅಂಶಗಳ ಬಗ್ಗೆ ಸಮುದಾಯಕ್ಕೆ ಶಿಕ್ಷಣ ನೀಡುವ ಗುರಿಯನ್ನು ಹೊಂದಿರುವ […]
ರಾಜ್ಯದಲ್ಲಿ ಪ್ರಸ್ತುತ ವಿದ್ಯುತ್ ಕೊರತೆ ಇಲ್ಲ; ಅನ್ಯ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ಪೂರೈಕೆ: ಕೆ.ಜೆ.ಜಾರ್ಜ್
ಉಡುಪಿ: ರಾಜ್ಯದಲ್ಲಿ ಪ್ರಸ್ತುತ ವಿದ್ಯುತ್ ಕೊರತೆ ಕಂಡುಬರುತ್ತಿಲ್ಲ. ವಾಣಿಜ್ಯ ಸೇರಿದಂತೆ ಕೈಗಾರಿಕಾ ಪ್ರದೇಶಗಳಿಗೆ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ದುರಸ್ಥಿ ಸೇರಿದಂತೆ ನಿರ್ವಹಣಾ ಕಾರ್ಯಗಳನ್ನು ಕೈಗೊಂಡಾಗ ಮಾತ್ರ ವಿದ್ಯುತ್ ಸಂಪರ್ಕಗಳನ್ನು ಕಡಿತಗೊಳಿಸಲಾಗುತ್ತಿದೆ. ಆದರೆ ಅದನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು. ಅವರು ಮಂಗಳವಾರ ರಜತಾದ್ರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮೆಸ್ಕಾಂ ಹಾಗೂ ಕೆ.ಪಿ.ಸಿ.ಟಿ.ಎಲ್ ನ ಪ್ರಗತಿ ಪರೀಶಿಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದಲ್ಲಿ ಉತ್ಪಾದನೆಯಲ್ಲಿ ಕೊರತೆ ಇರುವ ಹಿನ್ನಲೆ ವಿದ್ಯುತ್‌ಚ್ಛಕ್ತಿಯನ್ನು […]
ಕೇಂದ್ರದ ವಿರುದ್ದ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ದ ರಾಜಧಾನಿಯಲ್ಲಿ ಬಿಜೆಪಿ ಪ್ರತಿಭಟನೆ
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ವ್ಯಯಿಸುತ್ತಿದೆ. ರಾಜ್ಯದ ಬರ ಪರಿಸ್ಥಿತಿಗೆ ಸ್ಪಂದಿಸದೇ ಇರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಶಾಸಕರು ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ದೆಹಲಿಯಲ್ಲಿ ಸಿದ್ದರಾಮಯ್ಯ ಸರ್ಕಾರ ಪ್ರತಿಭಟನೆ ಶುರುಮಾಡುವ 11 ಗಂಟೆ ಹೊತ್ತಿಗೆ ಬೆಂಗಳೂರಿನಲ್ಲಿ ವಿಧಾನಸೌಧದ ಆವರಣದಲ್ಲಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ ನಡೆಯಲಿದೆ. “ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222 ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ […]
ಫೆ. 11 ರಂದು ಬ್ರಹ್ಮಕುಮಾರಿ ರಾಜಯೋಗಿನಿ ಬಿ.ಕೆ.ಶಿವಾನಿ ಅವರಿಂದ ಪ್ರವಚನ
ಮಣಿಪಾಲ: ಫೆ. 11 ರಂದು ಸಂಜೆ 6 ರಿಂದ 8 ಗಂಟೆವರೆಗೆ ಎಂಜೆಸಿ ಗ್ರೌಂಡ್ ನಲ್ಲಿ ಬ್ರಹ್ಮಕುಮಾರಿ ರಾಜಯೋಗಿನಿ ಬಿಕೆ.ಶಿವಾನಿ ಅವರಿಂದ ಪ್ರೇರಣಾದಾಯಿ ಪ್ರವಚನ ಕಾರ್ಯಕ್ರಮ ನಡೆಯಲಿದ್ದು, ಪ್ರವೇಶ ಉಚಿತವಾಗಿದೆ. ಪ್ರವೇಶ ಪಾಸ್ ಕಡ್ಡಾಯವಾಗಿದ್ದು ಪಾಸ್ ಗಾಗಿ ಪೆರಂಪಳ್ಳಿ ಓಂಶಾಂತಿ ರಸ್ತೆ, ಗ್ರೀನ್ ಫಾರ್ಚೂನ್ ಅಪಾರ್ಟ್ಮೆಂಟ್ ನಲ್ಲಿರುವ ಬ್ರಹ್ಮ ಕುಮಾರಿ ಕಚೇರಿಯನ್ನು ಸಂಪರ್ಕಿಸಬಹುದು. ಕರೆ: 9496501161/9986211034