ಫೆ‌.11: ಪೆರ್ಡೂರು ಬಂಟರ ಸಂಘದ ಸಮುದಾಯ ಭವನ ಉದ್ಘಾಟನೆ

ಉಡುಪಿ: ಪೆರ್ಡೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಬಂಟರ ಸಮುದಾಯ ಭವನದ ಉದ್ಘಾಟನಾ‌ ಕಾರ್ಯಕ್ರಮ ಫೆ.11ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಬಂಟರ ಸಂಘ ಪೆರ್ಡೂರು ವಲಯ ಇದರ ಅಧ್ಯಕ್ಷ ಶಾಂತಾರಾಮ ಸೂಡ ಕೆ.‌ ತಿಳಿಸಿದ್ದಾರೆ. ಗುರುವಾರ ಪೆರ್ಡೂರಿನ ಬಂಟರ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30ರಿಂದ ಬಂಟರ ಭವನದ ಉದ್ಘಾಟನಾ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ಬಂಟರ ಸಮುದಾಯದ ರಾಮಕೃಷ್ಣ ಗ್ರೂಪ್ ಆಫ್ ಹೊಟೇಲ್ ನ ಸುಬ್ಬಯ್ಯ ಶೆಟ್ಟಿ, ಮಾಹೆ […]

ಬೊಮ್ಮರಬೆಟ್ಟು ಗ್ರಾ.ಪಂ ಪ.ಜಾತಿ ಪ.ಪಂಗಡದ ನಿಧಿಯಿಂದ ವಿದ್ಯಾರ್ಥಿ ವೇತನ ಹಾಗೂ ವೈದ್ಯಕೀಯ ವೆಚ್ಚದ ಚೆಕ್ ವಿತರಣೆ

ಹಿರಿಯಡಕ: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 20 ಫಲಾನುಭವಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಿಧಿಯಿಂದ ಮಂಜೂರಾದ ವಿದ್ಯಾರ್ಥಿ ವೇತನ ಚೆಕ್ ಹಾಗೂ ವೈದ್ಯಕೀಯ ವೆಚ್ಚದ ಚೆಕ್ಕನ್ನು ಫೆ.8 ರಂದು ಹಿರಿಯಡಕ ಶಾಸಕರ ಕಚೇರಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿವರಿಸಿದರು. ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಸದಸ್ಯರಾದ ಗೀತಾ, ಸುನೀಲ್ ಶೆಟ್ಟಿ, ರಾಘು, ದಿನೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪರಶುರಾಮ ಥೀಂ ಪಾರ್ಕ್ ವಿಚಾರ: ರಾಜ್ಯ ಸರ್ಕಾರ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದು ಸ್ವಾಗತ – ಶಾಸಕ ಸುನಿಲ್ ಕುಮಾರ್

ಉಡುಪಿ: ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಈ ಬಗ್ಗೆ ತನಿಖೆ ನಡೆಯಬೇಕೆಂದು ಆರು ತಿಂಗಳು ಹಿಂದೆಯೇ ನಾನು ಆಗ್ರಹಿಸಿದ್ದೆ. ಸರ್ಕಾರ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸುವ ಜತೆಗೆ ಥೀಂ ಪಾರ್ಕ್ ಅಭಿವೃದ್ಧಿಗೆ […]

ಪರಶುರಾಮ ಥೀಂ ಪಾರ್ಕ್ ಅವ್ಯವಹಾರ ಆರೋಪ: ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿದ ಸಿಎಂ ಸಿದ್ದರಾಮಯ್ಯ

ಕಾರ್ಕಳ : ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ತನಿಖೆ ನಡಸುವಂತೆ ಕಾರ್ಯಕರ್ತರ ಒತ್ತಡ ಹೆಚ್ಚಿದ್ದರಿಂದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸಿನಂತೆ ಮುಖ್ಯಮಂತ್ರಿ ಈ ಆದೇಶ ಹೊರಡಿಸಿದ್ದಾರೆ. ಹಿಂದಿನ […]

ತ್ರಿಶಾ ಕ್ಲಾಸಸ್: ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಉತ್ತಮ ಫಲಿತಾಂಶ

ಉಡುಪಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟಂಟ್ಸ್ ಆಫ್ ಇಂಡಿಯಾ (ಐ.ಸಿ.ಎ.ಐ) ಕೊಡಮಾಡುವ ಸಿ.ಎ ಪದವಿಯ ಮೊದಲ ಹಂತವಾದ ಸಿ.ಎ ಫೌಂಡೇಶನ್ ನ ಡಿಸೆಂಬರ್ ತಿಂಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ತ್ರಿಶಾ ಕ್ಲಾಸಸ್ ನ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ತೋರಿದ್ದಾರೆ. ಪರೀಕ್ಷೆಯಲ್ಲಿ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಎಲ್. ಗೌತಮ್ (321), ರೋಹನ್ ಶಾನ್ ಮಾರ್ಟಿಸ್ (315), ನಾಗೇಂದ್ರ ಶೆಣೈ (309), ಧನುಷ್ ದಿನೇಶ್ ಶೆಣೈ(308) , ಶ್ರೇಯ ಆರ್ ವರ್ಣೇಕರ್ (307), ಅಂಶಿ ಎಸ್ ಶೆಟ್ಟಿ (303), […]