ಕೊಡವೂರು: ಚಿಕ್ಕ ಮಕ್ಕಳಿಂದ ಚೊಕ್ಕ ಗ್ರಾಮ ಅಭಿಯಾನ

ಕೊಡವೂರು: ಕೊಡವೂರು ವಾರ್ಡ್ ಅನ್ನು ಸುಂದರವಾಗಿಸುವ ನಿಟ್ಟಿನಲ್ಲಿ ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠೆಯ ನಿಮಿತ್ತ ಗೋಡೆಯಲ್ಲಿ ರಾಮ ಹಾಗೂ ರಾಮಾಯಣಕ್ಕೆ ಸಂಬಂಧ ಪಟ್ಟ ಚಿತ್ರಗಳನ್ನು ಬಿಡಿಸಲಾಗಿತ್ತು. ಇದೀಗ ಕೊಡವೂರಿನ ಕಲಾಕಾರರನ್ನು ಗುರುತಿಸಿ ಹಾಗೂ ಚಿಕ್ಕ ಚಿಕ್ಕ ಮಕ್ಕಳನ್ನು ಕರೆದು ಉಳಿದ ಗೋಡೆಳ ಮೇಲೆ ಚಿತ್ರ ಬಿಡಿಸಲು ಅವಕಾಶವನ್ನು ನೀಡುತ್ತಿದೆ. ಕೊಡವೂರು ಗ್ರಾಮದ ಪುಟಾಣಿ ಮಕ್ಕಳು ಚೊಕ್ಕ ಗ್ರಾಮದ ಸಂಕಲ್ಪವನ್ನು ತೊಟ್ಟಿದ್ದಾರೆ. ಈ ಕಾರ್ಯಕ್ರಮಕ್ಕೆ ಉಡುಪಿಯ ಖ್ಯಾತ ಚಿತ್ರ ಕಲಾವಿದರಾದ ಚಂದ್ರ ಚಿತ್ರ ಕಡೆಕಾರ್ ಸಹಕಾರ ನೀಡಿದ್ದು, ಇವರ […]

ಕಾರ್ಕಳ: ಕ್ರಿಯೇಟಿವ್‌ ಪುಸ್ತಕ ಮನೆಯ “ಮೊಬೈಲ್‌ ಬಿಡಿ ಪುಸ್ತಕ ಹಿಡಿ” ಯೋಜನೆಗೆ ಅಭೂತಪೂರ್ವ ಬೆಂಬಲ

ಕಾರ್ಕಳ: ಯುವಜನರು ಮತ್ತು ವಿದ್ಯಾರ್ಥಿಗಳನ್ನು ಓದಿನ ಕಡೆಗೆ ಸೆಳೆಯಬೇಕು, ಮೊಬೈಲ್‌ ನ ಬಳಕೆಯನ್ನು ಹಿತಮಿತವಾಗಿ ಮಾಡಬೇಕೆಂಬ ಉದ್ದೇಶದಿಂದ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಯೋಜನೆಯಾದ “ಮೊಬೈಲ್‌ ಬಿಡಿ, ಪುಸ್ತಕ ಹಿಡಿ” ಅಭಿಯಾನವನ್ನು ಕಾರ್ಕಳ, ಉಡುಪಿ, ಪುತ್ತೂರು, ಸುಳ್ಯದ ಶಾಲೆಗಳಿಗೆ ಮತ್ತು ಆಸಕ್ತ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸುವ ಮೂಲಕ ಯಶಸ್ವಿಗೊಳಿಸಲಾಯಿತು. ಸಾಹಿತ್ಯ ಕ್ಷೇತ್ರ ಓದುಗರ ಬರ ಎದುರಿಸುತ್ತಿದೆ ಎಂಬ ಮಾತಿನ ನಡುವೆಯೂ “ದಿನಕ್ಕೊಂದು ಪುಸ್ತಕ”ವನ್ನು ಶಾಲೆಗಳಿಗೆ ತಲುಪಿಸುವ ಕಾರ್ಯ ಮಾಡಲಾಯಿತು. ಕಾರ್ಕಳ ತಾಲೂಕಿನ ಸ್ಥಳೀಯ ಶಾಲೆಗಳನ್ನು ಸಂದರ್ಶಿಸಿ ಪುಸ್ತಕವನ್ನು […]