ಫೆ.17 ರಂದು ಮಣಿಪಾಲ ಕೌಶಲ್ಯಾಭಿವೃದ್ದಿ ಕೇಂದ್ರದ ವತಿಯಿಂದ ಉಚಿತ ಛಾಯಾಗ್ರಹಣ ಕಾರ್ಯಾಗಾರ
ಮಣಿಪಾಲ: ಮಣಿಪಾಲ ಕೌಶಲ್ಯಾಭಿವೃದ್ದಿ ಕೇಂದ್ರದ ವತಿಯಿಂದ ಛಾಯಾಗ್ರಹಣದಲ್ಲಿ ಆಸಕ್ತಿ ಇರುವ 12 ವರ್ಷ ಮೇಲ್ಪಟ್ಟವರಿಗೆ ಫೆ.17 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರ ವರೆಗೆ ಈಶ್ವರ ನಗರದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಕ್ಯಾಂಪಸ್ ನಲ್ಲಿ ಪ್ರಖ್ಯಾತ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರಿಂದ ಉಚಿತ ಛಾಯಾಗ್ರಹಣ ಹಾಗೂ ವೀಡಿಯೋಗ್ರಫಿ ಕಾರ್ಯಾಗಾರ ಜರುಗಲಿರುವುದು. ಆಸಕ್ತರು ಈ ಕೂಡಲೇ ನೋಂದಣಿ ಮಾಡಲು ಪ್ರಕಟಣೆ ತಿಳಿಸಿದೆ. ಸಂಪರ್ಕ: 8296615560, 9164062211
ಮಣಿಪುರ: ಫೆ.24 ರಂದು ಅಂತರ್ ರಾಜ್ಯಮಟ್ಟದ ಹೊನಲು ಬೆಳಕಿನ ದಫ್ ಸ್ಪರ್ಧೆ
ಮಣಿಪುರ: ರಹ್ಮಾನಿಯ್ಯಾ ಜುಮಾ ಮಸೀದಿ ಮಣಿಪುರ ಇದರ ಅಧೀನದಲ್ಲಿರುವ ಖಲಂದರ್ ಷಾ ದಫ್ ಸಮಿತಿ ಮಣಿಪುರ ಇದರ ಆಶ್ರಯದಲ್ಲಿ ಇಲ್ಲಿನ ಆರ್.ಜಿ.ಎಂ ವಠಾರದಲ್ಲಿ ಫೆ. 23 ರಂದು ಬೃಹತ್ ಜಲಾಲಿಯ್ಯಾ ದ್ಸಿಕ್ರ್ ಮಜ್ಲಿಸ್ ಮತ್ತು ಫೆ.24 ರಂದು ಅಂತರ್ ರಾಜ್ಯಮಟ್ಟದ ಹೊನಲು ಬೆಳಕಿನ ದಫ್ ಸ್ಪರ್ಧೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಭರತನಾಟ್ಯ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹೆಮ್ಮಾಡಿ ಜನತಾ ಕಾಲೇಜಿನ ಅಲಕಾ ಹೆಬ್ಬಾರ್.
ಹೆಮ್ಮಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಧಾರವಾಡದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಪದವಿ ಪೂರ್ವ ವಿಭಾಗದಿಂದ ಭರತನಾಟ್ಯ ಸ್ಪರ್ಧೆಗೆ ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿಯಾಗಿದ್ದು,ಅಲಕಾ ಹೆಬ್ಬಾರ್ ಕಾಲೇಜಿನ ಸಾಂಸ್ಕೃತಿಕ ತಂಡದ ಉದಯೋನ್ಮುಖ ಪ್ರತಿಭೆ ಇದುವರೆಗೆ ನಡೆದ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭರತನಾಟ್ಯ ಪ್ರದರ್ಶನ ಮಾಡಿರುತ್ತಾಳೆ ಹಾಗೂ ಸಾಕಷ್ಟು ಬಹುಮಾನಗಳನ್ನು ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ […]
ಪಿ.ಎಂ ಉದ್ಯೋಗ ಸೃಜನಾ ಯೋಜನೆಯಡಿ 40.18 ಕೋಟಿ ರೂ. ಸಾಲ ವಿತರಣೆ: ಸ್ವ-ನಿಧಿ ಯೋಜನೆಯಲ್ಲಿ ಉಡುಪಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ
ಉಡುಪಿ: ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ ಜಿಲ್ಲೆಯ ಉದ್ಯಮಿಗಳನ್ನು ಬೆಂಬಲಿಸುವುದರೊಂದಿಗೆ ಉದ್ಯೋಗಾವಕಾಶ ಸೃಷ್ಠಿಸಲು 173 ಫಲಾನುಭವಿಗಳಿಗೆ 40.18 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು. ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇನ್ನುಳಿದ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ, ಅರ್ಹ ಫಲಾನುಭವಿ ಉದ್ಯಮಿಗಳಿಗೆ ಸಬ್ಸಿಡಿಯನ್ನು ಶೀಘ್ರವಾಗಿ ವಿತರಿಸುವಂತೆ ಸೂಚನೆ […]
ಧಾರಾವಾಹಿಯಲ್ಲಿ ದೈವಾರಾಧನೆಯ ದೃಶ್ಯ: ಪ್ರಕರಣ ದಾಖಲಿಸಲು ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಒತ್ತಾಯ
ಮಂಗಳೂರು: ತುಳುನಾಡಿನ ಕಟ್ಟುಕಟ್ಟಳೆಯಾದ ದೈವಾರಾಧನೆಯ ಹಿನ್ನೆಲೆಯಿರುವ ಚಿತ್ರಗಳು, ಕಿರುಚಿತ್ರಗಳು ಒಂದರ ಹಿಂದೆ ಒಂದು ಬಿಡುಗಡೆಯಾಗುತ್ತಿದ್ದು ಇದೀಗ ಧಾರಾವಾಹಿಯಲ್ಲೂ ದೈವಾರಾಧನೆಯ ದೃಶ್ಯಗಳನ್ನು ಅಳವಡಿಸಿಕೊಂಡಿರುವುದು ತುಳುವರ ಕೆಂಗಣ್ಣಿಗೆ ಗುರಿಯಾಗಿದೆ. ಕನ್ನಡದ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುವ ಕಾವೇರಿ ಕನ್ನಡ ಮಿಡಿಯಂ ಧಾರವಾಹಿಯ ಪ್ರೋಮೋ ರೀಲಿಸ್ ಆಗಿದ್ದು, ಅದರಲ್ಲಿ ದೈವಾರಾಧನೆಯ ಕುರಿತ ವಿಡಿಯೋ ಶೂಟಿಂಗ್ ಆಗಿದೆ. ಇದಕ್ಕೆ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯಿಂದ ವಿರೋಧ ವ್ಯಕ್ತವಾಗಿದೆ. ದೈವಾರಾಧನೆ ಪ್ರದರ್ಶನ ಬೆನ್ನಲ್ಲೇ ದೈವಾರಾಧಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ದೈವದ ಪಾತ್ರ ನಿರ್ವಹಿಸಿದ ಕಲಾವಿದನ […]