ಭಾರತದ ಪ್ರಯತ್ನಕ್ಕೆ ಸಂದ ಜಯ: ಬೇಹುಗಾರಿಕೆ ಆರೋಪದ ಮೇಲೆ ಬಂಧಿಯಾಗಿದ್ದ ನೌಕಾಪಡೆ ಅಧಿಕಾರಿಗಳನ್ನು ಬಿಡುಗಡೆಗೊಳಿಸಿದ ಕತಾರ್

ಹೊಸದಿಲ್ಲಿ: ಆಪಾದಿತ ಬೇಹುಗಾರಿಕೆ ಪ್ರಕರಣದಲ್ಲಿ ಒಂದು ವರ್ಷದ ಬಳಿಕ ಕತಾರ್‌ನಿಂದ (Qatar) ಬಿಡುಗಡೆಗೊಂಡ ನೌಕಾಪಡೆಯ ಯೋಧರು (Indian Navy) ತಮ್ಮನ್ನು ಬಿಡುಗಡೆಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸರಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ದೇಶಕ್ಕೆ ಮರಳಿದ ಎಂಟು ಯೋಧರಲ್ಲಿ ಏಳು ಮಂದಿ ದೆಹಲಿ ವಿಮಾನ ನಿಲ್ದಾಣದಿಂದ ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗುತ್ತಾ ಹೊರನಡೆದಿದ್ದಾರೆ. ಕತಾರ್‌ನಿಂದ ಹಿಂದಿರುಗಿದ ನೌಕಾಪಡೆಯ ಯೋಧರಲ್ಲೊಬ್ಬರು, “ಪ್ರಧಾನಿ ಮೋದಿಯವರ ಹಸ್ತಕ್ಷೇಪವಿಲ್ಲದೆ ನಾವು ಇಲ್ಲಿ ನಿಲ್ಲಲು ಸಾಧ್ಯವಾಗುತ್ತಿರಲಿಲ್ಲ. ಭಾರತ ಸರ್ಕಾರದ ನಿರಂತರ ಪ್ರಯತ್ನದಿಂದ […]

ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿ, ಧರ್ಮಶಿಕ್ಷಣ ವರ್ಗ ಪ್ರಾರಂಭ: ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ನಿರ್ಣಯ

ಉಡುಪಿ: ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ರವಿವಾರ ಜಿಲ್ಲಾ ಮಟ್ಟದ ದೇವಸ್ಥಾನ ಪರಿಷತ್ತಿನ ಸಭೆ ನಡೆಯಿತು. ಉಡುಪಿ ಜಿಲ್ಲೆಯಾದ್ಯಂತ 100ಕ್ಕೂ ಅಧಿಕ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವುದು, ದೇವಸ್ಥಾನಗಳಲ್ಲಿ ಧರ್ಮಶಿಕ್ಷಣ ವರ್ಗ ಪ್ರಾರಂಭಿಸುವುದು ಇತ್ಯಾದಿ ವಿಷಯಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ದೇವಸ್ಥಾನಗಳ ನಿರ್ವಹಣೆಯಲ್ಲಿ ಬರುವ ಕಾನೂನು ಸಮಸ್ಯೆಗಳಿಗೆ ನುರಿತ ವಕೀಲರು ಕಾನೂನು ಸಲಹೆ ನೀಡಿದರು. ಸುಮಾರು 160ಕ್ಕೂ ಹೆಚ್ಚು ದೇವಸ್ಥಾನದ ಪ್ರತಿನಿಧಿಗಳು ಭಾಗವಹಿಸಿದ್ದರು. ಪರಿಷತ್ತಿನ […]

ಬನ್ನಂಜೆ ಮಹಾಲಿಗೇಶ್ವರ ದೇವಸ್ಥಾನದಲ್ಲಿ ಯೋಗ ಸತ್ಸಂಗ ಕಾರ್ಯಕ್ರಮ

ಉಡುಪಿ: ಬೆಂಗಳೂರು ಮಹರ್ಷಿ ರಾಮದಾಸ್ ಆಶ್ರಮ ಶ್ರೀಧರ್ಮಶಾಸ್ತ್ರಗಿರಿ ಶ್ರೀ ಶಕ್ತಿ ಶಾಂತಾನಂದ ಸ್ವಾಮಿಗಳು ಆದಿತ್ಯವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀಪಾದರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಶ್ರೀಗಳು ಶ್ರೀದೇವರ ದರ್ಶನ ಮಾಡಿ ಆರತಿ ಬೆಳಗಿಸಿ ಬಳಿಕ ಸಭಾಂಗಣಕ್ಕೆ ಆಗಮಿಸಿ ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ ಬನ್ನಂಜೆ ಉಡುಪಿ ವತಿಯಿಂದ ಆಯೋಜಿಸಿದ್ದ ಯೋಗ ಸತ್ಸಂಗವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ವತಿಯಿಂದ ಶ್ರೀಪಾದರನ್ನು ಫಲಪುಷ್ಪ ನೀಡಿ ಗೌರವಿಸಲಾಯಿತು. ಶ್ರೀಗಳು ಮಾತನಾಡಿ, ನಿತ್ಯ ನಿರಂತರ ಯೋಗ ಸತ್ಸಂಗದಿಂದ ಉತ್ತಮ ಅರೋಗ್ಯ, […]

ಶ್ರೀ ಕ್ಷೇತ್ರ ಪರ್ಪಲೆಗಿರಿಯ ಪುನರುತ್ಥಾನ ಕಾರ್ಕಳದ ಇತಿಹಾಸದಲ್ಲಿ ಹೊಸ ಅಧ್ಯಾಯ: ಕಾಳಹಸ್ತೇಂದ್ರ ಮಹಾಸ್ವಾಮೀಜಿ

ಕಾರ್ಕಳ : ಶ್ರೀ ಕ್ಷೇತ್ರ ಪರ್ಪಲೆಗಿರಿಯ ಪುನರುತ್ಥಾನದೊಂದಿಗೆ ಕಾರ್ಕಳದ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭಗೊಂಡು ಹಿಂದೂ‌ ಸಮಾಜದ ಅಭಿಯಾನಕ್ಕೆ ಹೊಸ ದಿಕ್ಕು ನೀಡಿದಂತಾಗಿದೆ ಎಂದು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮೀಜಿ ನುಡಿದರು. ಅವರು ಫೆ. 11ರಂದು ಶ್ರೀ ಕ್ಷೇತ್ರ ಪರ್ಪಲೆಗಿರಿಯಲ್ಲಿ ಕಲ್ಕುಡ ಸ-ಪರಿವಾರ ದೈವಗಳ ನೂತನ ಗರ್ಭಗುಡಿಯ ಶಿಲಾನ್ಯಾಸ ವಿಧಿ ನೆರವೇರಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಮಕ್ಕಳಿಗೆ ಎಳವೆಯಲ್ಲೇ ಧಾರ್ಮಿಕ ಪ್ರಜ್ಞೆ, ನಮ್ಮ ಸಂಸ್ಕೃತಿ ಕುರಿತು ಅರಿವು […]

ಸಕಾರಾತ್ಮಕ ಭಾವನೆಗಳಿಂದ ಸಕಾರಾತ್ಮಕ ಕುಟುಂಬ ಹಾಗೂ ಸಮಾಜ ರೂಪಿಸಿ: ಬಿ.ಕೆ. ಶಿವಾನಿ

ಮಣಿಪಾಲ: ನಮ್ಮೊಳಗಿನ ಭಾವನೆಗಳನ್ನು ನಮ್ಮ ಮನಸ್ಸನ್ನು ನಾವೇ ನಿಯಂತ್ರಿಸಬೇಕು. ಮನಸ್ಸಿನ ಕೀಲಿ ಕೈ ಇನ್ನೊಬ್ಬರಿಗೆ ಕೊಡಬಾರದು. ಪ್ರತಿ ವಿಷಯದಲ್ಲೂ ವೈಯಕ್ತಿಕವಾಗಿ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳುವ ಮೂಲಕ ಕುಟುಂಬದಲ್ಲೂ ಸಕಾರಾತ್ಮಕತೆ ರೂಪಿಸುತ್ತ ಹೋಗಬೇಕು. ಈ ಪ್ರಕ್ರಿಯೆ ಮುಂದುವರಿದಂತೆ ಸಮಾಜದಲ್ಲೂ ಸಕಾರಾತ್ಮಕ ಚಿಂತನೆಗಳು ಹೆಚ್ಚಾಗುತ್ತವೆ ಎಂದು ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ವಾಗ್ಮಿ ಬಿ.ಕೆ. ಶಿವಾನಿ ಅವರು ಹೇಳಿದರು. ಅವರು ಮಣಿಪಾಲ ಶಾಖೆಯ ವತಿಯಿಂದ ರವಿವಾರ ಮಣಿಪಾಲದ ಎಂಜೆಸಿ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಅಪರಿಮಿತ ಸಂತೋಷಕ್ಕಾಗಿ ಪರಮಾತ್ಮನೊಂದಿಗೆ ಮನಸ್ಸನ್ನು ಜೋಡಿಸಿ” […]