ಪೆರ್ಡೂರಿನಲ್ಲಿ ಸಂವಿಧಾನ ಜಾಗೃತಿ ಜಾಥಾ
ಉಡುಪಿ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರವತಿಯಿಂದ ಸಂವಿಧಾನ ದಿನಾಚರಣೆ ಪ್ರಯುಕ್ತ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರವಿವಾರ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ ನೆರವೇರಿತು. ಈ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವು ಪೆರ್ಡೂರು ಪ್ರೌಢಶಾಲೆಯಿಂದ ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್, ಬೈಕ್ ರ‍್ಯಾಲಿ ಮತ್ತು ಚಂಡೆವಾದನದೊಂದಿಗೆ ಆಗಮಿಸಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷೆ ಚೇತನಾ ಶೆಟ್ಟಿ ಹಾಗೂ ಸದಸ್ಯರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ […]
ವಚನ ಸಾಹಿತ್ಯದ ವಿಚಾರ ಕ್ರಾಂತಿಯಿಂದ ಸಮಾಜ ಸುಧಾರಣೆ: ಕೆ.ವಿದ್ಯಾಕುಮಾರಿ
ಉಡುಪಿ: 12 ನೇ ಶತಮಾನದಲ್ಲಿ ಶಿವಶರಣೆಯರು ರಚಿಸಿದ ವಚನ ಸಾಹಿತ್ಯಗಳು ವಿಚಾರ ಕ್ರಾಂತಿಯನ್ನುಮೂಡಿಸುವುದರೊಂದಿಗೆ ಸಮಾಜ ಸುಧಾರಣೆಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಕಾಯಕ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಮಾದರ ಚೆನ್ನಯ್ಯ, ಡೋಹರ ಕಕ್ಕಯ್ಯ, ಮಾದರ ಧೂಳಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಅವರುಗಳ ಭಾವಚಿತ್ರöಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. 12 ನೇ ಶತಮಾನ […]
ಸಿ.ಎ ಫೌಂಡೇಶನ್ ಪರೀಕ್ಷೆ: ಆಳ್ವಾಸ್ ಕಾಲೇಜಿಗೆ 69% ಫಲಿತಾಂಶ
ಮೂಡಬಿದ್ರೆ: ಸಿ.ಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಕಾಲೇಜು ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. 2023-24ಡಿಸೆಂಬರ್- ಜನವರಿಯಲ್ಲಿ ಪರೀಕ್ಷೆ ನಡೆದಿತ್ತು. ರಾಷ್ಟ್ರಮಟ್ಟದಲ್ಲಿ ಶೇಕಡ 29.99 ಫಲಿತಾಂಶ ದಾಖಲಾಗಿದ್ದರೆ, ಆಳ್ವಾಸ್ 69% ಫಲಿತಾಂಶ ಗಳಿಸಿದೆ. ಆಳ್ವಾಸ್ ಕಾಲೇಜಿನ 74 ವಿದ್ಯಾರ್ಥಿಗಳಲ್ಲಿ 51 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಶಿವಪ್ರಸಾದ್, ಕನ್ಯಾ ಪ್ರಭು, ಆಕಾಶ್ ಜೆ. ಭಟ್, ಹಿತೇಶ್ ಎಂ.ಎಸ್, ವೈಷ್ಣವಿ ಯು.ಕೆ., ನಿಧಿ ಆರ್.ಕೆ., ಅನಿಷಾ ಮತ್ತು ತಿಲಕ್ ರಾಜ್ ಒಟ್ಟು 400ರಲ್ಲಿ 250ಕ್ಕೂ ಹೆಚ್ಚು ಅಂಕ ಪಡೆದಿದ್ದಾರೆ. […]
ಮಾ.17 – ಎ. 2 ರವರೆಗೆ 1500 ವರ್ಷಗಳ ಐತಿಹ್ಯದ ಪೆರ್ಣಂಕಿಲ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು
ಹಿರಿಯಡ್ಕ: ಪೆರ್ಣಂಕಿಲ ಗ್ರಾಮದ ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಸುಮಾರು 1500 ವರ್ಷಗಳ ಐತಿಹ್ಯವಿರುವ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿದ್ದು, ಮಾ.17 ರಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆರಂಭವಾಗಿ ಎ. 2 ರಂದು ಜಾತ್ರೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ. ಈ ಬಗ್ಗೆ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿದ್ವಾನ್ ಪೆರ್ಣಂಕಿಲ ಹರಿದಾಸ್ ಭಟ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀಶ ನಾಯಕ್ ಪೆರ್ಣಂಕಿಲ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪೇಜಾವರ ಮಠದ ಕೀರ್ತಿಶೇಷ ವಿಶ್ವೇಶತೀರ್ಥ ಶ್ರೀಪಾದರ ಆಶಯದಂತೆ ಅವರ […]