ಮಲ್ಪೆ: ಮೈಗೆ ಬೆಂಕಿ ತಗುಲಿ ಮಹಿಳೆ ಮೃತ್ಯು

ಉಡುಪಿ: ಕಸಕ್ಕೆ ಬೆಂಕಿಯಿಡಲು ಹೋಗಿದ್ದ ವೇಳೆ ಮೈಗೆ ಬೆಂಕಿ ತಗುಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಲ್ಪೆ ಕೊಡವೂರಿನಲ್ಲಿ ನಡೆದಿದೆ.ಮೃತರನ್ನು ಕೊಡವೂರು ನಿವಾಸಿ ಸಾರಾ ದೇವದಾಸ (63) ಎಂದು ಗುರುತಿಸಲಾಗಿದೆ. ಇವರು ಫೆ.13ರಂದು ಮನೆಯ ವಠಾರದ ಕಸದ ರಾಶಿಗೆ ಸೀಮೆ ಎಣ್ಣೆ ಹಾಕಿ ಬೆಂಕಿ ಹಚ್ಚಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಸಕ್ಕೆ ಸೀಮೆ ಎಣ್ಣೆ ಹಾಕುವಾಗ ಆಕಸ್ಮಿಕವಾಗಿ ಸೀಮೆಎಣ್ಣೆ ನೈಟಿಗೆ ತಾಗಿ ಸಾರಾ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಮನೆಯವರು ಹೊರಗೆ ಬಂದು ಬೆಂಕಿ ಆರಿಸಿ ನೋಡಿದಾಗ ಸಾರಾ ಅವರ […]

ಬೆಳಗಾವಿಯನ್ನು ಚಿಕ್ಕೋಡಿ, ಗೋಕಾಕ್ ಮೂರು ಜಿಲ್ಲೆಗಳಾಗಿ ವಿಂಗಡಿಸಲು ಒತ್ತಾಯ: ಫೆ.16 ರಂದು ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದ ಅತಿದೊಡ್ಡ ಜಿಲ್ಲೆಯ ಬೆಳಗಾವಿ ಭಾಗದ ವಿವಿಧ ಸಂಘಟನೆಗಳು ಮತ್ತು ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸುವ ಸಾಧ್ಯತೆಗಳಿವೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ಬಜೆಟ್ ಮಂಡಿಸಲಿದ್ದು, ಈ ವೇಳೆ ಚಿಕ್ಕೋಡಿ ಮತ್ತು ಗೋಕಾಕ್ ಅನ್ನು ಹೊಸ ಜಿಲ್ಲೆಗಳೆಂದು ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಜೆಟ್ ಮಂಡನೆಗೂ ಮುನ್ನ ಈ ಬಗ್ಗೆ ಎಲ್ಲ ವಿವರಗಳನ್ನು ನೀಡುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ವರದಿಗಳು ತಿಳಿಸಿವೆ. ಚಿಕ್ಕೋಡಿ […]

ಬೇಸಿಗೆಯಲ್ಲಿ ನೀರಿನ ಲಭ್ಯತೆ ಬಗ್ಗೆ ಗಮನಹರಿಸಿ: ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ನೀರನ್ನು ಒದಗಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ನಿರ್ಮಿಸಿರುವ ಪ್ರತಿಯೊಂದು ಕಿಂಡಿ ಆಣೆಕಟ್ಟುಗಳಿಗೆ ಹಲಗೆಗಳನ್ನು ಅಳವಡಿಸಬೇಕು. ಇದರಿಂದ ನೀರು ನಿಂತು […]

ಕುಂದಾಪುರ: ಕರ್ನಾಟಕ ಒನ್ ಕೇಂದ್ರಗಳನ್ನು ಫ್ರಾಂಚೈಸಿ ತೆರೆಯಲು ಅರ್ಜಿ ಆಹ್ವಾನ

ಕುಂದಾಪುರ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಒನ್ ಕೇಂದ್ರಗಳನ್ನು ಫ್ರಾಂಚೈಸಿಗಳ ಮೂಲಕ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಕುಂದಾಪುರ ಪುರಸಭೆಯ ವ್ಯಾಪ್ತಿಯಲ್ಲಿ 2 ಫ್ರಾಂಚೈಸಿ ಕೇಂದ್ರಗಳನ್ನು ತೆರೆಯಲು ವೆಬ್ ಪೋರ್ಟಲ್ https://www.karnatakaone.gov.in/Public/FranchiseeTerms ನಲ್ಲಿ ಅರ್ಹ ಹಾಗೂ ಆಸಕ್ತ ಸಾರ್ವಜನಿಕರು ಫೆಬ್ರವರಿ 15 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಕಾರ್ಕಳ: ಸಾರಸ್ವತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯ ಉದ್ಘಾಟನೆ

ಕಾರ್ಕಳ: ವಿಪ್ರ ಸಂಘಟನೆಯು ತನ್ನ ಮೂಲ ಧ್ಯೇಯೋದ್ದೇಶಗಳನ್ನುಅನುಸರಿಸುತ್ತಾ ತಮಗಿರುವ ಗುರುತರ ಜವಾಬ್ದಾರಿಗಳಾದ ಸಮಾಜದಲ್ಲಿನ ಸಂಸ್ಕಾರ, ಸಂಸ್ಕೃತಿಯ ರಕ್ಷಣೆ ಮತ್ತು ಬೆಳವಣಿಗೆಯನ್ನು ಮಾಡುವಲ್ಲಿ ಯಶಸ್ಸನ್ನು ಸಾಧಿಸಲಿ ಎಂದು ಹಿರಿಯ ವೈದಿಕರಾದ ವೇದಮೂರ್ತಿ ಹರಿ ಭಟ್ ಸಗ್ರಿ ಹೇಳಿದರು. ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗಿದ ಸಾರಸ್ಬತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯನ್ನುಉದ್ಘಾಟಿಸಿ ಅವರು ಮಾತನಾಡಿದರು. ಗೌಡಪಾದಾಚಾರ್ಯ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿಯವರ ಆಶೀರ್ವಾದದಿಂದ ಕಾರ್ಕಳದ ಲಕ್ಷ್ಮೀಪುರದ ಪಾವನ ಕ್ಷೇತ್ರದಲ್ಲಿ ಸಾರಸ್ವತ ವೈದಿಕರ ಸಂಘಟನೆಯ ಶುಭಾರಂಭವಾಗಿದ್ದು ಈ ಸಂಸ್ಥೆಯನ್ನು […]