ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ. ಸುಮಾರು ಒಂದೂವರೆ ತಿಂಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದು, ಫೆ.14 ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಆದ್ರೆ ವಾಪಸ್ಸು ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಂದುಬಂದಿದೆ. ಈತ ಯಾವುದೋ ಕಾರಣದಿಂದ ಮಾನಸಿಕ […]

ಚುನಾವಣಾ ಬಾಂಡ್ ಯೋಜನೆ ರದ್ದು: ಅಸಂವಿಧಾನಿಕ ಮತ್ತು ಅನಿಯಂತ್ರಿತ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಐತಿಹಾಸಿಕ ತೀರ್ಪಿನಲ್ಲಿ, ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂಬ ಕಾರಣಕ್ಕಾಗಿ ಸುಪ್ರೀಂ ಕೋರ್ಟ್(Supreme Court) ಇಂದು ಚುನಾವಣಾ ಬಾಂಡ್ (Electoral Bond Scheme) ಯೋಜನೆಯನ್ನು ರದ್ದುಗೊಳಿಸಿದೆ. ಚುನಾವಣಾ ಬಾಂಡ್‌ಗಳ ಯೋಜನೆಯು ಅಸಂವಿಧಾನಿಕ ಮತ್ತು ಅನಿಯಂತ್ರಿತವಾಗಿದೆ ಮತ್ತು ರಾಜಕೀಯ ಪಕ್ಷಗಳು ಮತ್ತು ದಾನಿಗಳ ನಡುವೆ ವಿನಿಮಯ ವ್ಯವಸ್ಥೆಗೆ ಕಾರಣವಾಗಬಹುದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. ಕಪ್ಪು ಹಣದ ವಿರುದ್ಧ ಹೋರಾಡುವ ಮತ್ತು ದಾನಿಗಳ ಗೌಪ್ಯತೆಯನ್ನು ಕಾಪಾಡುವ ಉದ್ದೇಶಿತ ಉದ್ದೇಶವು ಯೋಜನೆಯನ್ನು ರಕ್ಷಿಸಲು ಸಾಧ್ಯವಿಲ್ಲ. […]

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು: ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅಪ್ರತಿಮ ಸಾಧನೆ

ಹೆಮ್ಮಾಡಿ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2024 ಪರೀಕ್ಷೆಯಲ್ಲಿ ಕ್ರಮವಾಗಿ ಪ್ರಣವ್ ಅಡಿಗ 95.33 ಪರ್ಸಂಟೈಲ್ ( 97.12) ಪರ್ಸಂಟೈಲ್ (ಭೌತಶಾಸ್ತ್ರ) ಆದಿತ್ಯ ಸಿ.ಚಂದನ್ 90.42 ಪರ್ಸಂಟೈಲ್, ಲಲನ್ ಪಿ. 90.21 […]

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಸಭೆ: ಗೆಲುವಿಗೆ ಪಣ ತೊಡಲು ಯಶ್ ಪಾಲ್ ಸುವರ್ಣ ಕರೆ

ಬೆಂಗಳೂರು: ಬಿಜೆಪಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಸಭೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಭಾಗವಹಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಾದ್ಯಂತ ಮೋರ್ಚಾದ ಮೂಲಕ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಪಕ್ಷದ ಗೆಲುವಿಗೆ ಪಣ ತೊಡುವಂತೆ ಕರೆ ನೀಡಿದರು. ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಧ್ಯಕ್ಷ ರಘು ಕೌಟಿಲ್ಯ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಾರ್ಚ್ 1 ರಿಂದ ಕಪ್ಪು ಬಟ್ಟೆ ಧರಿಸಿ ಸೇವೆ ನೀಡಲಿರುವ ಗ್ರಾಮ ಪಂಚಾಯತ್ ನೌಕರರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಂತಿಯುತ ಪ್ರತಿಭಟನೆ

ಬೆಂಗಳೂರು: ರಾಜ್ಯಮಟ್ಟದಲ್ಲಿ ಪಂಚಾಯತ್ ನೌಕರರು ಮಾರ್ಚ್ 1 ರಿಂದ ತಮಗಾದ ನೋವು, ಶೋಷಣೆ ಮತ್ತು ಸಮಸ್ಯೆಗಳ ವಿರುದ್ದ ಸಾರ್ವಜನಿಕ ಸೇವೆಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕಚೇರಿಯಲ್ಲಿ ಸಾರ್ವಜನಿಕವಾಗಿ ಕಪ್ಪು ಬಟ್ಟೆ/ ಕಪ್ಪು ಪಟ್ಟಿ ಧರಿಸಿ ಇಲಾಖೆಯಿಂದ ಬೇಡಿಕೆ ಈಡೇರುವವರೆಗೂ ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೋಭಿವೃದ್ದಿ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮ ತಿಳಿಸಿದ್ದಾರೆ. ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿಗಳು ಹಲವಾರು ವರ್ಷಗಳಿಂದ ಸಂಘಟನೆಯ […]