ಕ್ರಿಕೆಟಿಗ ಸರ್ಫರಾಜ್ ಖಾನ್ ತಂದೆಗೆ ಥಾರ್ ಉಡುಗೊರೆ ನೀಡುವ ಬಯಕೆ ವ್ಯಕ್ತಪಡಿಸಿದ ಉದ್ಯಮಿ ಆನಂದ್ ಮಹೀಂದ್ರಾ!!

ಕ್ರಿಕೆಟಿಗ ಸರ್ಫರಾಜ್ ಖಾನ್ ಅವರ ತಂದೆಯನ್ನು ಉದ್ದೇಶಿಸಿ ಭಾವನಾತ್ಮಕ ಸಂದೇಶ ಬರೆದಿರುವ ಉದ್ಯಮಿ ಆನಂದ್ ಮಹೀಂದ್ರಾ ನೌಶಾದ್ ಖಾನ್‌ಗೆ ಹೊಚ್ಚ ಹೊಸ ಥಾರ್ ಅನ್ನು ಉಡುಗೊರೆಯಾಗಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. “ಸ್ಫೂರ್ತಿದಾಯಕ ಪೋಷಕರಾಗಿರುವುದಕ್ಕಾಗಿ, ನೌಶಾದ್ ಖಾನ್ ಅವರು ಥಾರ್ ಉಡುಗೊರೆಯನ್ನು ಸ್ವೀಕರಿಸಿದರೆ ಅದು ನನ್ನ ಸೌಭಾಗ್ಯ ಮತ್ತು ಗೌರವವಾಗಿದೆ” X ನಲ್ಲಿನ ಪೋಸ್ಟ್‌ನಲ್ಲಿ ಆನಂದ್ ಮಹೀಂದ್ರಾ ಹೇಳಿದ್ದಾರೆ. ಅನಿಲ್ ಕುಂಬ್ಳೆ ಅವರಿಂದ ಸರ್ಫರಾಜ್ ಕ್ಯಾಪ್ ಅನ್ನು ಉಡುಗೊರೆಯಾಗಿ ನೀಡಿದ ನಂತರ ನೌಶಾದ್ ಹೇಗೆ ಭಾವುಕರಾದರು ಎಂಬುದನ್ನು ತೋರಿಸಿರುವ […]

ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿ ಹೊಂದಿರುವ ಬಜೆಟ್: ರಮೇಶ್ ಕಾಂಚನ್

ಉಡುಪಿ: ಭಾರತದ ಇತಿಹಾಸದಲ್ಲೇ ದಾಖಲೆಯ 15ನೇ ಬಜೆಟ್ ಮಂಡಿಸಿರುವ ಕರ್ನಾಟಕ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಜನಪರ 5 ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸುವುದರ ಜೊತೆಗೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿಯನ್ನು ಹೊಂದಿರುವ ಹೊಸ ಯೋಜನೆಗಳನ್ನು ನೀಡಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹರ್ಷ ವ್ಯಕ್ತಪಡಿಸಿದ್ದಾರೆ. ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ, ಅನಾರೋಗ್ಯಕ್ಕೆ ತುತ್ತಾದ ಮೀನುಗಾರರ ರಕ್ಷಣೆಗೆ 7 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ ಪ್ರಪ್ರಥಮ […]

15ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ: ಪ್ರವಾಸೋದ್ಯಮ, ಕೃಷಿ ಮಹಿಳೆಯರ ಸಬಲೀಕರಣ, ಶಿಕ್ಷಣ, ಆರೋಗ್ಯ; ಯಾವ ಇಲಾಖೆಗೆ ಎಷ್ಟು ಅನುದಾನ?

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. 15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿ ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಸತತ 3 ಗಂಟೆ 15 ನಿಮಿಷ ಬಜೆಟ್ ಪ್ರತಿಯನ್ನು ಓದಿ ಮುಕ್ತಾಯಗೊಳಿಸಿದ್ದಾರೆ. ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್‌ […]

ಫೆ. 24ರಂದು ಉಡುಪಿಗೆ ಡಾ. ಸಂದೀಪ್ ಮಹಿಂದ್, ಅಜಿತ್ ಹನುಮಕ್ಕನವರ್

ಉಡುಪಿ: ಉಡುಪಿಯ ಕೂರ್ಮ ಫೌಂಡೇಶನ್ ಆಶ್ರಯದಲ್ಲಿ ಫೆ.24ರಂದು ‘ಆಜಾದ್ ಹಿಂದ್ – ಶಿವಾಜಿಯಿಂದ ನೇತಾಜಿವರೆಗೆ’ ಕಾರ್ಯಕ್ರಮ ನಡೆಯಲಿದ್ದು, ಮಹಾರಾಷ್ಟ್ರದ ಪ್ರಖ್ಯಾತ ವಾಗ್ಮಿ ಸಂದೀಪ್ ಮಹಿಂದ್ ಹಾಗೂ ರಾಷ್ಟ್ರೀಯವಾದಿ ಪತ್ರಕರ್ತರಾದ ಅಜಿತ್ ಹನುಮಕ್ಕನವರ್ ಅವರು ಭಾಗವಹಿಸಲಿದ್ದಾರೆ. ಉಡುಪಿ ಅಜ್ಜರಕಾಡು ಪುರಭವನದಲ್ಲಿ ಅಂದು ಸಂಜೆ 5 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ. ಗಾಯಕ ರಜತ್ ಮಯ್ಯ ಮತ್ತು ತಂಡದಿಂದ ರಾಷ್ಟ್ರಗೀತೆಗಳು ಸ್ವರಭಾರತಿ ಹಾಗೂ ಮಂಜರಿಚಂದ್ರ ಮತ್ತು ಕಲಾವಿದರಿಂದ ನೃತ್ಯರೂಪಕಗಳು ನಮೋ ನಮೋ ಭಾರತಾಂಬೆ ಕಾರ್ಯಕ್ರಮ ನಡೆಯಲಿದೆ. ಛತ್ರಪತಿ ಶಿವಾಜಿ ಕಂಡ ಹಿಂದವಿ […]

ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ: ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಭರದ ಸಿದ್ಧತೆ

ಮುಲ್ಕಿ: ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಜ. 17ರಂದು ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶಕ್ಕೆ ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು 14 ಪಂಚಾಯತ್ ಹಾಗೂ ಎರಡು ಪಟ್ಟಣ ಪಂಚಾಯತ್ ಹಾಗೂ ಒಂದು ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಸದಸ್ಯರನ್ನು, ಪ್ರತಿಯೊಬ್ಬ ಕಾರ್ಯಕರ್ತರನ್ನು ಭಾಗವಹಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಸಮಾವೇಶ ನಡೆಯುತ್ತಿದ್ದು ಮುಖ್ಯಮಂತ್ರಿ […]