SMVITM ಕಾಲೇಜಿನ ವಿಘ್ನೇಶ್ ಶೆಣೈ ಇವರಿಗೆ ಪಿಎಚ್‌ಡಿ

ಬಂಟಕಲ್: ಶ್ರೀ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಡ್ ಮ್ಯಾನೇಜ್ಮೆಂಟ್ ಕಾಲೇಜಿನ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆಯ ಸಹಾಯಕ ಪ್ರಾಧ್ಯಾಪಕ ವಿಘ್ನೇಶ್ ಶೆಣೈ ಇವರಿಗೆ ಪಿಎಚ್‌ಡಿ ದೊರೆತಿದೆ. “SOFT SENSING OF MULTIVARIABLE MEASUREMENTS IN A LEVEL PROCESS USING CHAOTIC OBSERVE” ಪ್ರಬಂಧಕ್ಕೆ ಪಿಎಚ್‌ಡಿ ನೀಡಲಾಗಿದೆ. ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರಿಂಗ್, ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕ ಡಾ. ಸಂತೋಷ್ ಕೆ ವಿ, ಇವರ ಮಾರ್ಗದರ್ಶನದಲ್ಲಿ ಪ್ರಬಂಧ ಸಲ್ಲಿಸಲಾಗಿದೆ. SMVITM […]

ಯುವಕ-ಯುವತಿಯರಿಗೆ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ

ಉಡುಪಿ: ನೆಹರು ಯುವ ಕೇಂದ್ರ ವತಿಯಿಂದ ಜಿಲ್ಲೆಯ 18 ರಿಂದ 25 ವರ್ಷ ಒಳಗಿನ ಯುವಕ-ಯುವತಿಯರಿಗೆ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ಸಂಸತ್ ಉತ್ಸವ (National Youth Parliament Festival-2024) ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಭಾಷಣ ಮಾಡಲು 5 ನಿಮಿಷಕ್ಕೆ ಕಾಲಾವಕಾಶವಿದ್ದು, ಹಿಂದಿ, ಇಂಗ್ಲಿಷ್ ಹಾಗೂ ಕನ್ನಡ ಭಾಷೆಗಳಲ್ಲಿ ಬಾಷಣ ಮಾಡಬಹುದಾಗಿದೆ. ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಯು ಆನ್ಲೈನ್, ವರ್ಚುವಲ್ ಮೂಲಕ ನಡೆಯಲಿದೆ. ರಾಷ್ಟ್ರಮಟ್ಟದಲ್ಲಿ ಅಗ್ರ ಮೂರು ವಿಜೇತರಿಗೆ ಕ್ರಮವಾಗಿ ರೂ.2 ಲಕ್ಷ, […]

ಜೆ.ಇ.ಇ ಮೈನ್ಸ್ ನಲ್ಲಿ BASE ವಿದ್ಯಾರ್ಥಿಗಳ ಅಮೋಘ ಸಾಧನೆ: 9 ವಿದ್ಯಾರ್ಥಿಗಳಿಗೆ 100 ಪರ್ಸೆಂಟೈಲ್

ಉಡುಪಿ: ಜೆ.ಇ.ಇ ಮೈನ್ಸ್ ಸೆಷನ್ 1 ನಲ್ಲಿ BASE ಸಂಸ್ಥೆಯ 9 ವಿದ್ಯಾರ್ಥಿಗಳು ಭೌತಶಾಸ್ತ್ರ,ರಸಾಯನಶಾಸ್ತ್ರ ಹಾಗೂ ಗಣಿತದಲ್ಲಿ 100 ಪರ್ಸೆಂಟೈಲ್ ಅಂಕಗಳಿಸಿದ್ದಾರೆ. 70 ವಿದ್ಯಾರ್ಥಿಗಳು 99% ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದ್ದರೆ, 266 ವಿದ್ಯಾರ್ಥಿಗಳು 95% ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕ, ಅಧ್ಯಾಪಕ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿ ಕ್ಲಾಸ್ ರೂಮ್‌ನಿಂದ ಜಿಗಿದು ಆತ್ಮಹತ್ಯೆ..!

ಮಣಿಪಾಲ: ಪರೀಕ್ಷೆ ಬರೆಯುವ ವೇಳೆ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿಯೋರ್ವ ಮನನೊಂದು ಕ್ಲಾಸ್ ರೂಮ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲ ಮಾಹೆಯ ಎಂಸಿಎಚ್‌ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ, ಬಿಹಾರ ಮೂಲದ ಸತ್ಯಂ ಸುಮನ್ (20) ಮೃತದುರ್ದೈವಿ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್, ಮೊಬೈಲ್ ಬಳಕೆ ಮಾಡಿದ್ದಾನೆ. ಇದನ್ನು ಕಂಡ ಶಿಕ್ಷಕರು ಆತನನ್ನು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ […]

ಕರಾವಳಿ, ಬಂಟ, ಬಿಲ್ಲವ ಸಮುದಾಯದ ಕಾಳಜಿ ಇಲ್ಲದ ಬೋಗಸ್ ಬಜೆಟ್: ಸುನಿಲ್ ಕುಮಾರ್

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಕಂಡ ಕೆಟ್ಟ ಬಜೆಟ್ ಆಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿಲ್ಲ. ಬಜೆಟ್ ಪೂರ್ತಿ ಸುಳ್ಳುಗಳೇ ತುಂಬಿದ್ದು, ಮುಗ್ಗರಿಸುತ್ತಿರುವ ರಾಜ್ಯದ ಆರ್ಥಿಕತೆಯ ಪ್ರತಿಬಿಂಬ ಇದಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ. ಬಂಟ ಅಭಿವೃದ್ಧಿ ನಿಗಮ ಸ್ಥಾಪನೆಗೆ ಬಜೆಟ್ ನಲ್ಲಿ ಅವಕಾಶ ಕಲ್ಪಿಸುತ್ತೇನೆ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಕೈ ಕೊಟ್ಟಿದ್ದಾರೆ. ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 1 ರೂ.ಅನುದಾನವನ್ನೂ ನೀಡಿಲ್ಲ. ಪಶ್ಚಿಮ ವಾಹಿನಿ […]