ರೈತ ಪ್ರತಿಭಟನೆ: ಕೇಂದ್ರ ಸರ್ಕಾರದಿಂದ ಪಂಚವಾರ್ಷಿಕ ಯೋಜನೆ ಪ್ರಸ್ತಾವ; ಕಾಲಾವಕಾಶ ಬೇಡಿದ ರೈತರು
ಚಂಡೀಗಢ: ಕಳೆದ ವಾರ ಪಂಜಾಬ್-ಹರಿಯಾಣ ಗಡಿಯಲ್ಲಿ ಭಾರೀ ಮುಖಾಮುಖಿಯಾಗಿದ್ದ ಬಿಕ್ಕಟ್ಟಿನಲ್ಲಿ ನಿನ್ನೆ ತಡರಾತ್ರಿ ಪ್ರತಿಭಟನಾ ನಿರತ ರೈತರು ಮತ್ತು ಸರ್ಕಾರಿ ನಿಯೋಗದ ನಡುವಿನ ನಾಲ್ಕನೇ ಸಭೆಯು ನಡೆದಿದೆ. ಮುಂದಿನ ಐದು ವರ್ಷಗಳವರೆಗೆ ಪಂಜಾಬ್‌ನ ರೈತರಿಂದ ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಕನಿಷ್ಠ ಸುರಕ್ಷತಾ ಬೆಲೆಯಲ್ಲಿ (ಎಂಎಸ್‌ಪಿ) ಖರೀದಿಸಲು ಸರ್ಕಾರ ಉದ್ದೇಶಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮಧ್ಯರಾತ್ರಿಯ ನಂತರ ನಡೆದ ಚಂಡೀಗಢ ಸಭೆಯ ಬಳಿಕ ತಿಳಿಸಿದ್ದಾರೆ. ಪ್ರತಿಭಟನಾನಿರತ ರೈತರು ತಮ್ಮ ವೇದಿಕೆಗಳಲ್ಲಿ […]
ಡಾ. ಜೆರಿ ನಿಡ್ಡೊಡಿಯವರಿಗೆ ಕೊಂಕಣಿ ಲೇಖಕ್ ಸಂಘ್‌ನ ಪ್ರಶಸ್ತಿ ಪ್ರದಾನ
ಮಂಗಳೂರು: ಪ್ರತಿಯೊಂದು ಸಮುದಾಯಕ್ಕೂ ಅದರದ್ದೆ ಆದ ಸಂಸ್ಕೃತಿ ಇರುವಂತೆ ನಮಗೆ ಕೊಂಕಣಿ ಭಾಷಿಕರಿಗೂ ಒಂದು ಸಂಸ್ಕೃತಿ ಇದೆ. ಇದು ತಲೆತಲಾಂತರದಿಂದ ಹರಿದು ಬಂದಿದ್ದು ಪರಿವರ್ತನಾಶೀಲಾ ವಾಗಿದೆ. ಬದಲಾವಣೆ ಪ್ರಕೃತಿ ನಿಯಮ. ಹಾಗಿರುವಾಗ ಸಮಾಜದೊಡಗಿನ ಮಧುರ ಬಾಂಧವ್ಯಕ್ಕಾಗಿ ಸಮಾನತೆಯನ್ನು ಗುರುತಿಸಿಕೊಳ್ಳುವುದು ಅಗತ್ಯ. ಬದಲಾವಣೆಯ ಬಿರುಗಾಳಿಯಲ್ಲಿನಮ್ಮ ಸಂಸ್ಕೃತಿ-ಸಂಪ್ರದಾಯದ ಉತ್ತಮ ಅಂಶಗಳನ್ನು ಉಳಿಸಿಕೊಂಡು, ಭಾಷೆ-ನಾಡು-ನುಡಿಯ ಸಂಸ್ಕೃತಿಯ ಬೇರುಗಳೊಂದಿಗೆ ಅಭಿನ್ನವಾಗಿ ಉಳಿಯುವುದು ನಮ್ಮ ಜವಾಬ್ದಾರಿಯಾಗಿದೆ. ಸಾಹಿತಿಗಳು ಇದಕ್ಕೆ ಮಹತ್ತರ ಕೊಡುಗೆ ನೀಡುತ್ತಾರೆ. ತಮ್ಮ ಲೇಖನಿಯಿಂದ ಕೊಂಕಣಿ ಲೇಖಕ ಸಮುದಾಯದಲ್ಲಿ ತಮ್ಮದೇ ಛಾಪನ್ನು ಒತ್ತಿದ […]
ಮಂಗಳೂರು: ಪೂರ್ವಾನುಮತಿ ಇಲ್ಲದೆ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಕೆ; ತೆರವಿಗೆ ಸೂಚನೆ
ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟಿನಲ್ಲಿ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿದ್ದು, ಹರೇಕಳ ಕಚೇರಿ ಬಳಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಲಾಗಿದೆ. ಇದೀಗ ಅದನ್ನು ತೆರವುಗೊಳಿಸಲು ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ನ್ಯೂಸ್ 18 ವರದಿ ಹೇಳಿದೆ. ಬ್ಯಾನರ್ ಹಾಕಲು ಅನುಮತಿ ಪಡೆಯದೇ ಇರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಪ್ರತಿಮೆ ಮತ್ತು ಬ್ಯಾನರ್ ತೆರವುಗೊಳಿಸಲು ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ. ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ […]
ಶಂಕಿತ ನಕ್ಸಲ್ ಬಂಧನ: ಕೇರಳ ಪೊಲೀಸರಿಂದ ಕಾರ್ಯಾಚರಣೆ
ಚಿಕ್ಕಮಗಳೂರು/ಉಡುಪಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಅಂಗಡಿ ಗ್ರಾಮದ ಶಂಕಿತ ನಕ್ಸಲ್ ಸುರೇಶ್ ಅಲಿಯಾಸ್ ಪ್ರದೀಪ್‌ನನ್ನು ಕೇರಳದ ಕಣ್ಣೂರಿನ ಕಂಚಿರಕೊಲ್ಲಿ ಅರಣ್ಯದಲ್ಲಿ ಕೇರಳ ಪೊಲೀಸರು ಬಂಧಿಸಿದ್ದಾರೆ. ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್‌ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು, ಉಡುಪಿ ಸೇರಿ ರಾಜ್ಯದ ಹಲವೆಡೆ ಸುರೇಶ್ ವಿರುದ್ಧ 35ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆರೋಪಿ ಚೇತರಿಸಿಕೊಂಡ ಬಳಿಕ ಬಾಡಿ ವಾರೆಂಟ್ ಪಡೆದು ರಾಜ್ಯಕ್ಕೆ ಕರೆತಂದು ವಿಚಾರಣೆ ನಡೆಸಲಾಗುವುದು ಎಂದು ನಕ್ಸಲ್ ನಿಗ್ರಹ ದಳದ ಎಸ್‌ಪಿ […]
ಪ್ರಖ್ಯಾತ ಸಾಹಿತಿ ಕೆ.ಟಿ.ಗಟ್ಟಿ ನಿಧನ
ಮಂಗಳೂರು: ಕಾದಂಬರಿಗಳ ಮೂಲಕ ಪ್ರಸಿದ್ಧರಾಗಿದ್ದ, ಸಾಹಿತ್ಯ, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳ ಕುರಿತ ಲೇಖಕ, ನಿವೃತ್ತ ಪ್ರಾಧ್ಯಾಪಕ ಕೆ.ಟಿ.ಗಟ್ಟಿ (86) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಪತ್ನಿ ನಿವೃತ್ತ ಶಿಕ್ಷಕಿ ಯಶೋದಾ, ಪುತ್ರ ನಿಟ್ಟೆ ವಿವಿಯಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕ ಸತ್ಯಜಿತ್, ಪುತ್ರಿಯರಾದ ಅಮೆರಿಕದಲ್ಲಿ ಪರಿಸರ ವಿಜ್ಞಾನಿಯಾಗಿರುವ ಪ್ರಿಯದರ್ಶಿನಿ, ಆಸ್ಟ್ರಿಯಾದಲ್ಲಿ ಆಂಥ್ರಾಪಾಲಜಿಸ್ಟ್ ಆಗಿರುವ ಚಿತ್ ಪ್ರಭಾ ಅವರನ್ನು ಅಗಲಿದ್ದಾರೆ. ಕಾರ್ಮುಗಿಲು, ಪುನರಪಿ ಜನನಂ, ಬಿಸಿಲುಗುದುರೆ, ಕಾಮರೂಪಿ, ಸನ್ನಿವೇಶ, ಉರಿ, ಶಬ್ದಗಳು, ನಿರಂತರ, ಸ್ವರ್ಣ ಮೃಗ, ಅಬ್ರಾಹ್ಮಣ, ಪರುಷ, […]