ಹೆಬ್ರಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಹೆಬ್ರಿ: ಮಹಿಳೆಯೋರ್ವರು ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.19ರಂದು ಹೆಬ್ರಿಯಲ್ಲಿ ಸಂಭವಿಸಿದೆ. ಆತ್ಮಹತ್ಯೆಗೆ ಶರಣಾದವರು ಉಷಾ (30), ಇವರು ಫೆ. 19ರಂದು ಮನೆಯ ಕೊಠಡಿಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡೊದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಗೆ ರಾಜ್ಯದಿಂದ 15 ಲಕ್ಷ ರೂ ಪರಿಹಾರ: ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರ ಹಣದ ರೂಪವಾಗಿ 15 ಲಕ್ಷ ರೂಗಳನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಸಂಸದರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತೆರಿಗೆದಾರರ ಹಣವನ್ನು ಕಾಂಗ್ರೆಸ್‌ ದುರುಪಯೋಗಪಡಿಸಿಕೊಳ್ಳುತ್ತಿದೆ. ಅಲ್ಲದೇ ಕರ್ನಾಟಕದಲ್ಲಿ ಸೆರೆಹಿಡಿಯಲಾದ ಆನೆಯ ತುಳಿತಕ್ಕೊಳಗಾಗಿ ಕೇರಳದ ಅಜೀಶ್‌ ಮೃತಪಟ್ಟಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ‘ಬರಗಾಲದಿಂದ ರಾಜ್ಯದಾದ್ಯಂತ […]

ಫೆ. 22ರಿಂದ ಮಾರ್ಚ್ 1ರವರೆಗೆ ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ

ಉಜಿರೆ: ಫೆ.22ರಿಂದ ಮಾರ್ಚ್ 1ರವರೆಗೆ ವೇಣೂರಿನಲ್ಲಿ ಭಗವಾನ್ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ, ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ.ಪದ್ಮಪ್ರಸಾದ ಅಜಿಲ ಹೇಳಿದರು. ಸೋಮವಾರ ವೇಣೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೈನರ ಸಂಪ್ರದಾಯದಂತೆ ಪ್ರತಿ 12ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನಡೆಸಲಾಗುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷರಾಗಿರುವ ವೇಣೂರಿನ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ, ಮಹಾಮಸ್ತಕಾಭಿಷೇಕ ಸಮಿತಿಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ 30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ […]

ಗೋಕರ್ಣ: ಮಾದಕ ದ್ರವ್ಯ ಸೇವಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಮಹಿಳೆಯರ ಬಂಧನ

ಗೋಕರ್ಣ: ಮಾದಕ ದ್ರವ್ಯ ಸೇವಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್ ಡೆವಲಪರ್‌ಗಳನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರನ್ನು ಬಿಹಾರದ ಮುಂಗೇರ್‌ನ ಜಮಾಲ್‌ಪುರದ ಪಲ್ಲವಿ ಪ್ರಿಯಾ 29 ಮತ್ತು ಜಾರ್ಖಂಡ್‌ನ ಬೆರಾಮೊ, ಬೊಕಾರೊ ಮೂಲದ ಪ್ರಿಯಾ ರಾಯ್ (26) ಎಂದು ಗುರುತಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಾಲನೆ ಮಾಡುತ್ತಿದ್ದ ಅವರು, ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ತಮ್ಮ ಬಾಡಿಗೆ ವಾಹನದಿಂದ ಡಿಕ್ಕಿ ಹೊಡೆದಿದ್ದಾರೆ. ಬಾಡಿಗೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದುದನ್ನು ಕಂಡ […]

ಮಳಲಿ ಮಸೀದಿ ಪ್ರಕರಣ: ಮಾ.14ಕ್ಕೆ ವಿಚಾರಣೆ ಮುಂದೂಡಿದ ಸಿವಿಲ್ ನ್ಯಾಯಾಲಯ

ಮಂಗಳೂರು: ಗುರುಪುರ ಸಮೀಪದ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯವು ಮಾ.14ಕ್ಕೆ ಮುಂದೂಡಿದೆ. ಕೆಲ ತಿಂಗಳುಗಳ ಹಿಂದೆ ಮಸೀದಿ ಕಟ್ಟಡದಲ್ಲಿ ದೇವಸ್ಥಾನದ ಕುರುಹುಗಳು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಜ್ಞಾನವಾಪಿ ಮಸೀದಿ ಮಾದರಿಯಲ್ಲಿ ಉತ್ಖನನ ಹಾಗೂ ಸರ್ವೇ ನಡೆಸುವಂತೆ ವಿಶ್ವಹಿಂದೂ ಪರಿಷತ್‌ ಪರ ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದರು. ಬಳಿಕ ಈ ಪ್ರಕರಣ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿತ್ತು. ಮಸೀದಿ ಇರುವ ಜಾಗ ವಕ್ಫ್ ಆಸ್ತಿ ಹೌದೋ ಅಲ್ಲವೋ ಎಂಬುದನ್ನು ಜಿಲ್ಲಾ ನ್ಯಾಯಾಲಯದಲ್ಲಿ […]