ಮಲ್ಪೆ: ಸಮುದ್ರದಲ್ಲಿ ಈಜಲು ತೆರಳಿದ್ದ ಬೆಂಗಳೂರು ಮೂಲದ ಮಕ್ಕಳ ರಕ್ಷಣೆ
ಮಲ್ಪೆ: ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಪರಿಸರದ ಸಮುದ್ರದಲ್ಲಿ ಈಜಲು ಇಳಿದು ನೀರುಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯಲ್ಲಿದ್ದವರು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ. ಈ ಇಬ್ಬರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದ್ದು, ಮೂವರು ಯುವತಿಯರ ಸಹಿತ ವಿಹಾರಕ್ಕಾಗಿ ಬಂದಿದ್ದರು. ಈ ಪೈಕಿ ಇಬ್ಬರು ಕಡಲಿನಲ್ಲಿ ಈಜಲು ನೀರಿಗಿಳಿದಿದ್ದು, ಅಲೆಯ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗುತ್ತಿದ್ದರು. ಇದನ್ನು ಕಂಡ ಮೀನುಗಾರಿಕಾ ದೋಣಿಯಲ್ಲಿದ್ದವರು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗಿಳಿದಿದ್ದು ಇಬ್ಬರನ್ನು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಕೃಷಿ ಭೂಮಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ
ಉಡುಪಿ: ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ಕಾಯ್ದೆಯ ಕಲಂ 4(4)(b)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರ್ಕಾರದಿಂದ ಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್ https://landrecords.karnataka.gov.in/service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದ್ದು, ಜಿಲ್ಲೆಯ ರೈತರು […]
ಮಾನವ ಕಳ್ಳಸಾಗಣಿಕೆ ತಡೆಗಟ್ಟಲು ಸೂಕ್ತ ಕ್ರಮವಹಿಸಿ: ಶರ್ಮಿಳಾ ಎಸ್
ಉಡುಪಿ: ಮಾನವ ಕಳ್ಳತನ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದ್ದು, ಇದನ್ನು ತಡೆಗಟ್ಟುವಲ್ಲಿ ಸೂಕ್ತ ಕಾನೂನಿನ ಕ್ರಮವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು. ಅವರು ಸೋಮವಾರ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ […]
ಕೊಡವೂರು: ಸೂರಿಲ್ಲದವರಿಗೆ ಮನೆ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ
ಕೊಡವೂರು: ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಿ ಮತ್ತಷ್ಟು ಸೇವಾ ಕಾರ್ಯ ಮಾಡಿ ದೀನ ದುರ್ಬಲ ಬಡವರಿಗೆ ಬೆಳಕು ನೀಡುವ ಉದ್ದೇಶದಿಂದ ಕೊಡವೂರು ವಾರ್ಡಿನಲ್ಲಿ ನಗರಸಭಾ ಸದಸ್ಯ ಕೆ.ವಿಜಯ್ ಕೊಡವೂರು ಇವರ ನೇತೃತ್ವದಲ್ಲಿ 30 ದಿನಗಳ ರಾಮೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕೊಡವೂರು ವಾರ್ಡಿನ ನಾಗರಿಕರು ಈ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಮನೆ ಇಲ್ಲದವರಿಗೆ ಹಾಗೂ ತುಂಬಾ ಹಳೆಯದಾದ ಮನೆ ಹೊಂದಿದವರಿಗೆ ಹೊಸ ಮನೆ ನಿರ್ಮಾಣವನ್ನು ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರದ […]
ಛತ್ರಪತಿ ಶಿವಾಜಿಯ ಜೀವನಾದರ್ಶಗಳನ್ನು ಮೈಗೂಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಕರೆ
ಉಡುಪಿ: ಛತ್ರಪತಿ ಶಿವಾಜಿಯ ಆದರ್ಶ, ಶಿಸ್ತು ಹಾಗೂ ದೇಶಾಭಿಮಾನವನ್ನು ವಿದ್ಯಾರ್ಥಿಗಳು ಮೈಗೂಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರೆ ನೀಡಿದರು. ಅವರು ಸೋಮವಾರದಂದು ನಗರದ ಸರಕಾರಿ ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತು (ರಿ) ಹಾಗೂ ಛತ್ರಪತಿ ಶಿವಾಜಿ ವಿವಿದ್ದೋದೇಶ ಸಹಕಾರ ಸಂಘ (ರಿ.) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ತಾಯಿಯ ಪ್ರೇರಣೆಯಿಂದ ಉತ್ತಮ ವ್ಯಕ್ತಿತ್ವವನ್ನು ಮೈಗೊಡಿಸಿಕೊಂಡ ಶಿವಾಜಿಯು […]