ಕಾಪು ಸಮುದ್ರತೀರದಲ್ಲಿ ‘ಆನಂದ ಲಹರಿ’: ರವಿಶಂಕರ್ ಗುರೂಜಿ ಸತ್ಸಂಗದಲ್ಲಿ ಪುಳಕಗೊಂಡ ಭಕ್ತರು
ಕಾಪು: ಆರ್ಟ್ ಆಫ್ ಲಿವಿಂಗ್ (Art Of Living) ಸಂಸ್ಥಾಪಕ ರವಿಶಂಕರ್ ಗುರೂಜಿ (Ravishanakar Guruji) ಮಂಗಳವಾರದಂದು ಇಲ್ಲಿನ ಸಮುದ್ರ ತೀರದಲ್ಲಿ ‘ಆನಂದ ಲಹರಿ’ ಮಹಾಸತ್ಸಂಗ ಕಾರ್ಯಕ್ರಮ ನಡೆಸಿಕೊಟ್ಟರು. ರವಿಶಂಕರ್ ಗುರೂಜಿ ಅವರು ವೇದಿಕೆ ಮೇಲೆರುತ್ತಿದ್ದಂತೆಯೇ ನೆರೆದವರು ಜಯ ಘೋಷ ಮೊಳಗಿಸಿದರು. ಪಾಲ್ಗೊಂಡ ಸಹಸ್ರಾರು ಜನರಿಗೆ ಬೆಲ್ಲದ ಶೀರ, ಅವಲಕ್ಕಿ- ಕಡಲೆಯುಕ್ತ ವಿಶೇಷ ಪ್ರಸಾದ ವಿತರಿಸಲಾಯಿತು. ಜನಸಾಗರದ ನಡುವೆ ವೇದಿಕೆಯಲ್ಲಿ ಸಂಚರಿಸಿದ ರವಿಶಂಕರ್ ಗುರೂಜಿ ಅವರು ಜನರ ಭಕ್ತಿ ಭಾವದ ಗೌರವ ಪಡೆದುಕೊಂಡು ಹಾರೈಸಿ, ಪುಷ್ಪದಳ ಪ್ರಸಾದವಾಗಿ […]
ಕೊಲ್ಲೂರು ದೇವಳದ ಪಕ್ಕ ರಾ.ಹೆ ನಿರ್ಮಾಣ: ಭೂ ಸ್ವಾಧೀನ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ
ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಾಲಯದ (Kolluru Mookambika Temple) ಪಕ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ (National Highway) ನಿರ್ಮಾಣಕ್ಕಾಗಿ ಕೈಗೊಂಡಿರುವ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ದೇವಾಲಯ ಸುತ್ತಲಿನ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು ಎಂದು ಕೋರಿ ಸ್ಥಳೀಯ ನಿವಾಸಿ ಗುರುಪ್ರಸಾದ್ ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ […]
ತಿರುವನಂತರಪುರ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೆ ವಿಸ್ತರಣೆ
ಮಂಗಳೂರು: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲನ್ನು ಮಂಗಳೂರಿನವರೆಗೆ (Mangaluru) ವಿಸ್ತರಣೆ ಮಾಡಿ ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ. ಹೊಸ ವೇಳಾ ಪಟ್ಟಿಯ ಪ್ರಕಾರ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಮಧ್ಯಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ತಿರುವನಂತಪುರದಿಂದ ಸಂಜೆ 4.05 ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರನ್ನು ತಲುಪಲಿದೆ. ಬುಧವಾರ ಹೊರತು ಪಡಿಸಿ ವಾರದ ಆರು ದಿನಗಳೂ ಈ ರೈಲು ಸಂಚರಿಸಲಿದೆ. “ನನ್ನ ಕೋರಿಕೆಯನ್ನು ಪುರಸ್ಕರಿಸಿ […]
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ಚಿತ್ರಕಲಾ ಸ್ಪರ್ಧೆ
ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ Indigenous technologies for societal development ವಿಷಯದ ಕುರಿತು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆಬ್ರವರಿ 28 ರಂದ ಬೆಂಗಳೂರಿನ ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಹಾಗೂ ಪೇಯ್ಟಿಂಗ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ನಗದು ಬಹುಮಾನ ವಿತರಿಸಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಗೂಗಲ್ ಫಾರ್ಮ್https://forms.gle/e5UbmGWkkaC1utgLA ಮೂಲಕ ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ […]