ಫೆ.27: ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಅಸೋಸಿಯೇಷನ್ ಉದ್ಘಾಟನೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇರುವ ವಿವಿಧ ಕ್ಯಾಟರಿಂಗ್ ಮಾಲೀಕರು ಒಗ್ಗೂಡಿಸಿ ನೂತನವಾಗಿ ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಅಸೋಸಿಯೇಷನ್ ಸ್ಥಾಪಿಸಿದ್ದು, ಇದರ ಉದ್ಘಾಟನೆ ಸಮಾರಂಭವು ಇದೇ ಫೆ. 27ರಂದು ಉಡುಪಿ ಸಂತೆಕಟ್ಟೆಯ ಗ್ರೀನ್ ಎಕ್ರೆಸ್ ಒಪನ್ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ ತಿಳಿಸಿದರು. ಈ ಬಗ್ಗೆ ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದ ಅವರು, ಈಗಾಗಲೇ ಜಿಲ್ಲೆಯಾದ್ಯಂತ ಸುಮಾರು ಒಂದು ಸಾವಿರಕ್ಕೂ ಅಧಿಕ ಕ್ಯಾಟರಿಂಗ್ ಉದ್ಯಮ ನಡೆಸುತ್ತಿರುವ ಮಾಲೀಕರನ್ನು […]
ಮಾನವನು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಕ್ರಿಯಾಶೀಲರಾಗಿರಲು ಸಾಧ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ, ಫೆಬ್ರವರಿ 23: ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನವನು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿ ಲವಲವಿಕೆಯಿಂದ ದೈನಂದಿನ ಕೆಲಸ ಕಾರ್ಯಗಳಲ್ಲಿ ಕ್ರಿಯಾಶೀಲರಾಗಿ ತೊಡಗಲು ಸಾಧ್ಯ. ಸರಕಾರಿ ನೌಕರರು ಪ್ರತಿದಿನ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಜಿಲ್ಲೆ ಇವರ […]
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ: ಅರ್ಜಿ ಆಹ್ವಾನ
ಉಡುಪಿ, ಫೆಬ್ರವರಿ 23: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಾರ್ಕಳ ಮತ್ತು ಕಾಪುವಿನ ಅಲ್ಪಸಂಖ್ಯಾತರ ಮೌಲಾನ ಅಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಯಲ್ಲಿ 6 ರಿಂದ 9ನೇ ತರಗತಿಗೆ ಉಚಿತ ಪ್ರವೇಶ ಪಡೆಯಲು ಅಲ್ಪಸಂಖ್ಯಾತ ಜನಾಂಗದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ಧರು, ಸಿಖ್ಖರು, ಪಾರ್ಸಿ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ದೂ.ಸಂ:0820-2573596, ಕಾರ್ಕಳ ಮೌಲಾನಾ ಆಜಾದ್ ಮಾದರಿ ಶಾಲೆ ಮುಖ್ಯೋಪಾಧ್ಯಾಯರ […]
ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿರಿಸುವ ಅನುದಾನದಲ್ಲಿ ಶೀಘ್ರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ
ಉಡುಪಿ, ಫೆಬ್ರವರಿ 23: ಸರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಶ್ರೇಯೋಭಿವೃದ್ಧಿಗೆ ಮಿಸಲಿರಿಸಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ನಿಗದಿತ ಕಾಲಾವಧಿಯಲ್ಲಿ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿ ಯ ಜಿಲ್ಲಾಧಿಕಾರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಿತರಕ್ಷಣೆ ಹಾಗೂ ಕುಂದು ಕೊರತೆ ಸಭೆಯ ಅಧ್ಯಕ್ಷತೆ […]
ಎಂಜಿಎಂ ಕಾಲೇಜು ಮೈದಾನದಲ್ಲಿ ‘ಬಿಲ್ಡ್ ಟೆಕ್’ -2024: ಕಟ್ಟಡ ಸಾಮಗ್ರಿಗಳ ಬೃಹತ್ ವಸ್ತು ಪ್ರದರ್ಶನ
ಉಡುಪಿ: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಆ್ಯಂಡ್ ಆರ್ಕಿಟೆಕ್ಟ್ಸ್ ಮತ್ತು ಬೆಂಗಳೂರಿನ ಯು.ಎಸ್ ಕಮ್ಯೂನಿಕೇಶನ್ಸ್ ವತಿಯಿಂದ ಎಂಜಿಎಂ ಕಾಲೇಜು ಮೈದಾನದಲ್ಲಿ ‘ಬಿಲ್ಡ್ ಟೆಕ್-2024’ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ದೊರಕಿದ್ದು, ಫೆ. 25ರ ವರೆಗೆ ನಡೆಯಲಿದೆ. ವಿವಿಧ ಕಂಪೆನಿಗಳ ಬಾಗಿಲುಗಳು, ಕಿಟಕಿಗಳು, ಬಾತ್‌ರೂಂ ಫಿಟ್ಟಿಂಗ್, ಗ್ಲಾಸ್ ಆ್ಯಂಡ್ ಗ್ಲಾಸ್ ಫಿಟ್ಟಿಂಗ್, ಟೈಲ್ ಗಳು, ಸ್ಯಾಾನಿಟರಿ ಆ್ಯಂಡ್ ಪ್ಲಂಬಿಂಗ್, ಸ್ವಿಚ್ಚು ಗಳು, ಎಲೆಕ್ಟ್ರಿಕಲ್ ಫಿಟ್ಟಿಂಗ್, ಕನ್‌ಸ್ಟ್ರಕ್ಷನ್ ಟೆಕ್ನಾಲಜೀಸ್, ಸೋಲಾರ್ ಉತ್ಪನ್ನಗಳು, ಫ್ಲೋರಿಂಗ್ ಮತ್ತು ರೂಫಿಂಗ್‌ಗೆ […]