ಕಾರ್ಕಳ: ಬೈಕ್ ಸ್ಕಿಡ್ – ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..

ಕಾರ್ಕಳ: ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಮೃತ ವಿದ್ಯಾರ್ಥಿ. ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿಂಗ್ ಓದುತಿದ್ದ ಇವರು ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಡಗೂಡಿ ಪ್ರತ್ಯೇಕ ಬೈಕ್‌ಗಳಲ್ಲಿ ತೆರಳುತಿದ್ದ ವೇಳೆ ಘಟನೆ ಸಂಭವಿಸಿದೆ. ಘಟನೆಯಲ್ಲಿ ಸವಾರ, ಸಹಸವಾರ ವಿದ್ಯಾರ್ಥಿಗಳಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಆಕಾಶ್ ಗಂಭೀರ ಗಾಯಗೊಂಡು ಮೃತಪಟ್ಟರೆ, ಸಹಸವಾರ ವಿದ್ಯಾರ್ಥಿ […]

ಉಡುಪಿ: Chipsy ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಉಡುಪಿ: ಇಲ್ಲಿನ ಪ್ರಖ್ಯಾತ ಐಟಿ ಕಂಪನಿಯಾದ Chipsy ಸಂಸ್ಥೆಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್( 1 ವರ್ಷಕ್ಕೂ ಹೆಚ್ಚಿನ ಅನುಭವ), ಸೇಲ್ಸ್ ಎಕ್ಸಿಕ್ಯೂಟಿವ್( 6 ತಿಂಗಳು ಅಥವಾ ಅದಕ್ಕಿಂತ ಹೆಚ್ಚಿನ ಅನುಭವ), ವರ್ಡ್ ಪ್ರೆಸ್ ಡೆವೆಲಪರ್( 0-1 ವರ್ಷದ ಅನುಭವ) ಹುದ್ದೆಗಳಿಗಾಗಿ ನುರಿತ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಸಕ್ತರು ತಮ್ಮ ರೆಸ್ಯೂಮ್ ಅನ್ನು jobs@chipsy.in ವಿಳಾಸ: Chipsy IT Services Pvt Ltd, Bhakta Towers, Kalsanka ದೂರವಾಣಿ: 9632224999/9916867888

ಕೌಟುಂಬಿಕ ಹಿಂಸೆಯಿಂದ ನೊಂದ ಮಹಿಳೆಯರಿಗೆ ಕಾನೂನಿನ ನೆರವು ನೀಡಿ: ನ್ಯಾ. ಶಾಂತವೀರ ಶಿವಪ್ಪ

ಉಡುಪಿ: ಕೌಟುಂಬಿಕೆ ಹಿಂಸೆಯಿಂದ ನೊಂದ ಮಹಿಳೆಯರಿಗೆ ಇಲಾಖೆಗಳು ಹಾಗೂ ಸಂಸ್ಥೆಗಳು ಸಾಂತ್ವನಹೇಳುವುದರ ಜೊತೆಗೆ ಕಾನೂನಿನ ನೆರವು, ವೈದ್ಯಕೀಯ ಸೌಲಭ್ಯ ಮತ್ತಿತರ ಸಹಾಯವನ್ನು ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶಾಂತವೀರ ಶಿವಪ್ಪ ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯದ ಕಾನ್ಫರೆನ್ಸ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಆಯೋಜಿಸಿದ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಕಾಯ್ದೆಯ […]

1-19 ವರ್ಷದ ಮಕ್ಕಳಿಗೆ ಜಂತುಹುಳು ನಿವಾರಕ ಮಾತ್ರೆ ವಿತರಣೆ

ಉಡುಪಿ: ಜಂತುಹುಳುಗಳಿಂದ ಮಕ್ಕಳ ದೇಹದಲ್ಲಿ ರಕ್ತಹೀನತೆ ಹಾಗೂ ಅಪೌಷ್ಠಿಕತೆ ಉಂಟಾಗಿ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತದೆ. ಇದರ ನಿವಾರಣೆಗೆ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್ ತಿಳಿಸಿದರು. ಅವರು ಗುರುವಾರ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕುರಿತು ವರ್ಚುವಲ್ ಮೂಲಕ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಿದ್ದರು. ಸಾಮಾನ್ಯವಾಗಿ ಜಂತುಹುಳುವು 1-19 ವರ್ಷದ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ಹೊಟ್ಟೆನೋವು, ಬೇಧಿ, […]

ಉಡುಪಿ ನಗರಸಭೆ: ಪರಿಷ್ಕೃತ ತೆರಿಗೆ ಪ್ರಕಟ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡ ಹಾಗೂ ಖಾಲಿ ನಿವೇಶನದ ಮಾಲೀಕರುಗಳು 2024-25 ನೇ ಸಾಲಿನ ತೆರಿಗೆಯನ್ನು ಪರಿಷ್ಕೃತ ಮಾರ್ಗಸೂಚಿ ಬೆಲೆಯ ಶೇ. 25 ನ್ನು ಪರಿಗಣಿಸಿ, ತೆರಿಗೆಯನ್ನು ನಿರ್ಧರಿಸಿ, ಸಕಾಲದಲ್ಲಿ ತೆರಿಗೆ ಪಾವತಿಸಿ, ಉಡುಪಿ ನಗರಸಭೆಯ ಅಭಿವೃದ್ಧಿಗೆ ಸಹಕರಿಸುವಂತೆ ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.