ವಿದ್ಯಾರ್ಥಿಗಳು ಜಂಕ್ ಫುಡ್ ದಾಸರಾಗದೆ ಉತ್ತಮ ಆಹಾರ ಪದ್ದತಿ ಅಳವಡಿಸಿಕೊಳ್ಳಿ: ಡಾ. ಮಮತಾ ದೇವಿ

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಉದ್ದೇಶದಿಂದ ಸರಕಾರ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ. ಇದನ್ನು ಸದುಪಯೋಗಪಡಿಸಿಕೊಂಡು ಜಂಕ್ ಫುಡ್ ನಂತಹ ಸತ್ವರಹಿತ ಆಹಾರದ ದಾಸರಾಗದೇ ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಡಾ. ಮಮತಾ ದೇವಿಯವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.  ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಗಿ ಹೆಲ್ತ್ ಮಿಕ್ಸ್  ಹಾಲಿನ ವಿತರಣೆಯ ಪ್ರಾರಂಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.  ಕಳೆದು ಹೋದ ಸಮಯ ಮತ್ತೆ ಬರಲಾರದು. ಉಡುಪಿ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಕೇವಲ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕ್ಷೇತ್ರದತ್ತ ಮಾತ್ರ ಆಕರ್ಷಿತರಾಗದೇ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಒಲವು ತೋರಬೇಕು. ಸರಕಾರ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಾ ಈಗಿನಿಂದಲೇ ದೃಢನಿರ್ಧಾರ ಮಾಡಿಕೊಂಡು ಸಾಧಕರಾಗುವಂತೆ ಕರೆ ನೀಡಿದರು.  ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷೆ ವಿನೋದಾ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.  ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ರಶ್ಮಿ ಸಿ. ಭಟ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಜಿಲ್ಲಾ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಗೋವಿಂದ ಮಡಿವಾಳ, ನಗರಸಭಾ ಪೌರಾಯುಕ್ತ ರಾಯಪ್ಪ, ಕ್ಷೇತ್ರಶಿಕ್ಷಣಾಧಿಕಾರಿ ಡಾ| ಯಲ್ಲಮ್ಮ, ಪ್ರಾಂಶುಪಾಲೆ ಡಾ| ಸುಮಾ ಅತಿಥಿಗಳಾಗಿ ಭಾಗವಹಿಸಿದ್ದರು.  ಜಿಲ್ಲಾ ಅಕ್ಷರದಾಸೋಹ- ಪಿ ಎಮ್ ಪೋಷಣ್ ನ ಶಿಕ್ಷಣಾಧಿಕಾರಿ ರುದ್ರೇಶ್ ಟಿ. ಆರ್. ಪ್ರಸ್ತಾವನೆಗೈದರು. ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿದರು. ತಾಲ್ಲೂಕು ಅಕ್ಷರದಾಸೋಹ ಅಧಿಕಾರಿ ವಿವೇಕ ಗಾಂವ್ಕರ್ ಧನ್ಯವಾದಗೈದರು. ಶಿಕ್ಷಕ ರಾಮಚಂದ್ರ ಭಟ್ ನಿರೂಪಿಸಿದರು.

ಮಂಗಳೂರು: 24 ರಂದು ಫಾತಿಮಾ ರಲಿಯಾ ಅವರ ಕವನ ಸಂಕಲನ ಬಿಡುಗಡೆ 

ಮಂಗಳೂರು: ಶನಿವಾರ 24 ರ ಸಂಜೆ‌ ಮೂರು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಫಾತಿಮಾ ರಲಿಯಾ ಅವರ ಕವನ ಸಂಕಲನ ‘ಅವಳ ಕಾಲು ಸೋಲದಿರಲಿ’ ಬಿಡುಗಡೆಯಾಗಲಿದೆ. ಖ್ಯಾತ ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆಯವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ಸುಧಾ ಆಡುಕಳ ಮಾತಾಡಲಿದ್ದಾರೆ. ವಿಲ್ಸನ್ ಕಟೀಲ್ ಮತ್ತು ಮುಆದ್ ಜಿ.ಎಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಪುಸ್ತಕವನ್ನು ‘ಉಡುಗೊರೆ ಪ್ರಕಾಶನ’ ಪ್ರಕಟಿಸಿದ್ದು ಇದು ಫಾತಿಮಾ ರಲಿಯಾರಚರ ಮೂರನೇ ಕೃತಿಯಾಗಿದೆ. ಹಿಂದಿನ ಎರಡು […]

ಕನ್ನರ್ಪಾಡಿ: ಶ್ರೀಮದ್ ಭಾಗವತ ಕಥಾಮೃತ ಸಪ್ತಾಹ ಆರಂಭ

ಕನ್ನರ್ಪಾಡಿ: ಶ್ರೀ ಜಯ ದುರ್ಗಾ ಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ, ಬ್ರಾಹ್ಮಣ ಸಭಾ ಉಡುಪಿ ಆಶ್ರಯದಲ್ಲಿ ಕುತ್ಪಾಡಿ ಬೈಲೂರು ದಿವಂಗತ ರಾಮಚಂದ್ರ ಭಟ್ ಮಕ್ಕಳ ಸಹಕಾರದೊಂದಿಗೆ ಶ್ರೀಮದ್ ಭಾಗವತ ಕಥಾಮೃತ ಸಪ್ತಾಹ – ಪ್ರವಚನಕಾರದ ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಇವರಿಂದ ಸಂಜೆ 5.15 ರಿಂದ 7.30 ವರೆಗೆ ನಡೆಯುತ್ತಿದ್ದು, ದೇವಳದ ಅಧ್ಯಕ್ಷ ರಾಘವೇಂದ್ರ ಭಟ್ , ಮುರಳೀಧರ್ ಭಟ್, ಬ್ರಾಹ್ಮಣ ಸಭಾದ ಅಧ್ಯಕ್ಷ ರಾಜೇಂದ್ರ ಭಟ್ ಹಾಗೂ ನೂರಾರು ಭಕ್ತರೂ ಉಪಸ್ಥಿತರಿದ್ದರು.

ಭಾರತ್ ರಾಷ್ಟ್ರ ಸಮಿತಿ ಶಾಸಕಿ ಲಾಸ್ಯ ನಂದಿತಾ ಅಫಘಾತದಲ್ಲಿ ನಿಧನ

ನವದೆಹಲಿ: ಭಾರತ್ ರಾಷ್ಟ್ರ ಸಮಿತಿ ಶಾಸಕಿ ಲಾಸ್ಯ ನಂದಿತಾ ಹೈದರಾಬಾದ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೊದಲ ಬಾರಿಗೆ ಶಾಸಕಿಯಾಗಿದ್ದ 37 ವರ್ಷದ ಅವರು ತಮ್ಮ ವಾಹನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಲಾಸ್ಯ ನಂದಿತಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಸಿಲುಕಿರುವ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ರಾಜಕೀಯ ಕ್ಷೇತ್ರದ ಪ್ರಮುಖ […]

ರಾಜ್ಯಮಟ್ಟದ ಕಡಲ ತೀರದ ಚಾರಣ ಹಾಗೂ ಪ್ರಕೃತಿ ಅಧ್ಯಯನ ಶಿಬಿರಕ್ಕೆ ಚಾಲನೆ

ಪಡುಬಿದ್ರಿ: ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆ ಆಯೋಜಿಸುತ್ತಿರುವ ರಾಜ್ಯಮಟ್ಟದ ಕಡಲ ತೀರದ ಚಾರಣ ಹಾಗೂ ಪ್ರಕೃತಿ ಅಧ್ಯಯನ ಶಿಬಿರದ ಅಂಗವಾಗಿ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ನಿಂದ ಕಾಪು ಕಡಲ ತೀರದವರೆಗೆ ನಡೆದ ಕಡಲ ತೀರದ ಚಾರಣಕ್ಕೆ ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ಮತ್ತು ಉತ್ತಮ ನಾಗರಿಕರಾಗುವಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಚಳುವಳಿಗಳು ಮಹತ್ತರ ಪಾತ್ರ ವಹಿಸುತ್ತವೆ. ಚಾರಣದ ಪೂರ್ಣ ಅನುಭವವನ್ನು ಪಡೆದುಕೊಳ್ಳುವಂತೆ […]