ಕಾಂತಾರ-1 (ಪ್ರೀಕ್ವಲ್) ಚಿತ್ರೀಕರಣ ಆರಂಭ: ರಾಜನ ಪಾತ್ರಧಾರಿಗೆ ದೈವದ ಅಭಯ

ಕುಂದಾಪುರ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಗಳಿಸಿದ್ದ ಕಾಂತಾರ ಚಿತ್ರದ ಪ್ರೀಕ್ವಲ್ ಚಿತ್ರೀಕರಣ ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ನಟ ನಿರ್ದೇಶಕ ರಿಷಬ್ ಶೆಟ್ಟಿ ಸದ್ದಿಲ್ಲದೇ ಕಾಂತಾರ 1 ಚಲನಚಿತ್ರದ ಚಿತ್ರೀಕರಣ ಪ್ರಾರಂಭಿಸಿದ್ದಾರೆ ಎನ್ನಲಾಗಿದ್ದು, ಕುಂದಾಪುರದ ಕೆರಾಡಿಯಲ್ಲಿ ಹಾಕಿರುವ ಸೆಟ್ ನಲ್ಲೇ ಚಿತ್ರೀಕರಣ ನಡೆಯಲಿದೆ. ಈ ಸಿನಿಮಾದಲ್ಲಿ ರಾಜನ ಪಾತ್ರವನ್ನು ಮಾಡುತ್ತಿರುವ ವಿನಯ್ ಬಿದ್ದಪ್ಪ ಪುತ್ತೂರಿನ ಕಲ್ಲುರ್ಟ್ಟಿ ದೈವದ ಸನ್ನಿಧಿಯಲ್ಲಿ ಪ್ರಾರ್ಥಿಸಿದ್ದಾರೆ. ಸಿನಿಮಾ ಕುರಿತಂತೆ ದೈವ ಅವರಿಗೆ ಅಭಯ ನೀಡಿದೆ ಎಂದು ವರದಿ ಹೇಳಿದೆ.

ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

ಉಡುಪಿ‌: ಕನ್ನಡ ಚಿತ್ರ ನಟ ರಕ್ಷಿತ್ ಶೆಟ್ಟಿ ಫೆಬ್ರವರಿ 22ರಂದು ತಮ್ಮ ಹುಟ್ಟೂರಾದ ಉಡುಪಿಯಲ್ಲಿ ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ಕ್ಷೇತ್ರ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು. ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ನಂತರ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿ ಮಾತನಾಡಿದ ರಕ್ಷಿತ್ ಶೆಟ್ಟಿ, ನಾನು ಬಾಲ್ಯದಲ್ಲಿ ಪ್ರತಿವರ್ಷ ತಂದೆಯೊಂದಿಗೆ ಕಾಪುವಿನಲ್ಲಿ ಬಾವನ ಮನೆಗೆ ಬರುವಾಗ ಮಾರಿಗುಡಿಗೆ ಬಂದು ಹೋಗುತ್ತಿದ್ದೆ, ಈಗ ಇದರ ಸಂಪೂರ್ಣ […]

ಉಡುಪಿ: The AdMasters ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಉಡುಪಿ: The AdMasters ಸಂಸ್ಥೆಯಲ್ಲಿ ಗ್ರಾಫಿಕ್ ಡಿಸೈನರ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಡಿಗಿಟಲ್ ಮಾರ್ಕೆಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅನುಭವಸ್ಥರು ತಮ್ಮ ರೆಸ್ಯೂಮ್ ಅನ್ನು [email protected] ಗೆ ಇ-ಮೇಲ್ ಮಾಡಬಹುದು.

ವಿದ್ಯಾಮೃತ – 2024: CET ಪರೀಕ್ಷೆಗೆ ತರಬೇತಿ ಕಾರ್ಯಕ್ರಮ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾಸಂಸ್ಥೆಯು ವಿಕಸನ ಫೌಂಡೇಶನ್ ಜತೆ ಒಪ್ಪಂದ ಮಾಡಿಕೊಂಡು ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದು ಇಂಜಿನಿಯರಿಂಗ್ ಮುಂತಾದ ಕೋರ್ಸ್ಗಳಲ್ಲಿ ಪ್ರವೇಶ ಪಡೆಯಲು ನಡೆಸುವ “ಸಾಮಾನ್ಯ ಪ್ರವೇಶ ಪರೀಕ್ಷೆ 2024” ರಲ್ಲಿ ಉತ್ತಮ ಅಂಕಗಳಿಸಲು “ವಿದ್ಯಾಮೃತ – 2024” ಎಂಬ ತರಬೇತಿ ಕಾರ್ಯಕ್ರಮವನ್ನು ಎಪ್ರೀಲ್ 2024ರಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಪಿಯುಸಿ ಪರೀಕ್ಷೆ ಮುಗಿದ ತಕ್ಷಣ 10 ದಿನಗಳ ತರಬೇತಿ ಕಾರ್ಯಕ್ರಮವನ್ನು ಶ್ರೀ […]

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಫೆ. 23 ರಂದು ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ನಿವೇದಿತಾ ಪ್ರೌಢಶಾಲೆಯ ಶಿಕ್ಷಕ ಪ್ರದೀಪ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಜೀವನದಲ್ಲಿ ಸಂಸ್ಕಾರಗಳನ್ನು ಅಳವಡಿಸಿಕೊಂಡು ತಮ್ಮ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಕ್ರೀಡಾಕ್ಷೇತ್ರದಲ್ಲಿ ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಪೂರ್ವಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ […]