ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲಾ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಫಿಸಿಯೋ ಥೆರಪಿಸ್ಟ್ ಹಾಗೂ ಆಕ್ಯುಪೇಶನಲ್ ಥೆರಪಿಸ್ಟ್-1 ಹುದ್ದೆಗೆ ಫಿಸಿಯೋ ಥೆರಪಿಸ್ಟ್ ಹಾಗೂ ಆಕ್ಯುಪೇಶನಲ್ ಪದವಿ ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 02 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ […]

ಎಕರೆಗೆ 100 ರೂನಂತೆ 14 ಎಕರೆ ಭೂಮಿ ಚರ್ಚಿಗೆ ಹಸ್ತಾಂತರ: ಕೇರಳ ಸರ್ಕಾರದ ಕ್ರಮವನ್ನು ರದ್ದುಗೊಳಿಸಿದ ಕೇರಳ ಹೈಕೋರ್ಟ್

ಕೊಚ್ಚಿ: ವಯನಾಡು ಜಿಲ್ಲೆಯ ಮನಂತವಾಡಿ ತಾಲೂಕಿನ ಕಲ್ಲೋಡಿಯ ಸೇಂಟ್ ಜಾರ್ಜ್ ಫೊರೇನ್ ಚರ್ಚ್‌ಗೆ ಅಂದಾಜು 5.5358 ಹೆಕ್ಟೇರ್ (ಸುಮಾರು 14 ಎಕರೆ) ಭೂಮಿಯನ್ನು ಎಕರೆಗೆ 100 ರೂನಂತೆ ಮಂಜೂರು ಮಾಡಿದ ರಾಜ್ಯ ಸರ್ಕಾರದ ವಿವಾದಾತ್ಮಕ ಕ್ರಮವನ್ನು ಕೇರಳ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. 2015 ರಲ್ಲಿ ಆಗಿನ ಯುಡಿಎಫ್ ಸರ್ಕಾರವು ತೆಗೆದುಕೊಂಡ ಈ ನಿರ್ಧಾರವು ಆಕ್ರೋಶವನ್ನು ಹುಟ್ಟುಹಾಕಿದೆ. ವಿಶೇಷವಾಗಿ ಕೃಷಿ ಮತ್ತು ವಸತಿ ಭೂಮಿಗಾಗಿ ಕಾಯುತ್ತಿರುವ ಹಲವಾರು ಬುಡಕಟ್ಟು ಸಮುದಾಯಗಳ ತುರ್ತು ಅಗತ್ಯಗಳ ಸಂದರ್ಭದಲ್ಲಿ ಸರ್ಕಾರದ ಈ ನಡೆ […]

ಮಂಗನಕಾಯಿಲೆ: ಉಡುಪಿಯಲ್ಲಿ ಒಂದು ಪ್ರಕರಣ ಪತ್ತೆ

ಉಡುಪಿ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗಳೂರು 4, ಉಡುಪಿಯಲ್ಲಿ 1 ಪಾಸಿಟಿವ್‌ ಪ್ರಕರಣ ಕಂಡು ಬಂದಿದೆ. ಉಡುಪಿಯಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಈವರೆಗೆ 117 ಮಂದಿಗೆ ಪಾಸಿಟಿವ್‌ ಬಂದಿದ್ದು, 82 ಮಂದಿ ಗುಣಮುಖರಾಗಿ ಮೂವರು ಮೃತ ಪಟ್ಟಿದ್ದಾರೆ. 19 ಸಕ್ರಿಯ ಪ್ರಕರಣಗಳಿವೆ. ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಹೇಗೆ […]

ಎಂಜಿಎಂ ಕಾಲೇಜು ಮೈದಾನದಲ್ಲಿ ‘ಬಿಲ್ಡ್ ಟೆಕ್’ -2024: ಕಟ್ಟಡ ಸಾಮಗ್ರಿಗಳ ಬೃಹತ್ ವಸ್ತು ಪ್ರದರ್ಶನಕ್ಕೆ ಚಾಲನೆ

ಉಡುಪಿ: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಆ್ಯಂಡ್ ಆರ್ಕಿಟೆಕ್ಟ್ಸ್ ಮತ್ತು ಬೆಂಗಳೂರಿನ ಯು.ಎಸ್ ಕಮ್ಯೂನಿಕೇಶನ್ಸ್ ವತಿಯಿಂದ ಎಂಜಿಎಂ ಕಾಲೇಜು ಮೈದಾನದಲ್ಲಿ ‘ಬಿಲ್ಡ್ ಟೆಕ್-2024’ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಕ್ರೆಡೈ ಉಡುಪಿ ಅಧ್ಯಕ್ಷ ಮನೋಹರ ಎಸ್. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದೆ ಮನೆ, ಕಟ್ಟಡಗಳನ್ನು ನಿರ್ಮಿಸಲು ಸಾಕಷ್ಟು ಕಷ್ಟ ಎದುರಿಸುವುದರೊಂದಿಗೆ ಸಮಯದ ಅಭಾವವೂ ಎದುರಾಗುತ್ತಿತ್ತು. ಆದರೆ ಪ್ರಸ್ತುತ ಆಧುನಿಕ ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಕಟ್ಟಡ, ಮನೆಗಳ ನಿರ್ಮಾಣ ಅತ್ಯಂತ ಸುಲಭವಾಗಿದೆ. ಕಟ್ಟಡ […]

ದೇವಾಲಯಗಳ ಆದಾಯದ ಮೇಲೆ ಶೇ 10 ತೆರಿಗೆ ಕಡ್ಡಾಯಗೊಳಿಸುವ ಮಸೂದೆಗೆ ರಾಜ್ಯವಿಧಾನ ಪರಿಷತ್ತಿನಲ್ಲಿ ಸೋಲು

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, 1 ಕೋಟಿ ರೂಗಿಂತ ಹೆಚ್ಚು ಆದಾಯ ಹೊಂದಿರುವ ದೇವಾಲಯಗಳ ಆದಾಯದ ಮೇಲೆ ಶೇ 10 ರಷ್ಟು ತೆರಿಗೆಯನ್ನು ಕಡ್ಡಾಯಗೊಳಿಸುವ ಮಸೂದೆಯನ್ನು ಶುಕ್ರವಾರ ಸಂಜೆ ರಾಜ್ಯ ವಿಧಾನ ಪರಿಷತ್ತಿನಲ್ಲಿ ಸೋಲಿಸಲಾಯಿತು. ರಾಜ್ಯ ವಿಧಾನಸಭೆಯಲ್ಲಿ ಈ ಮಸೂದೆಯನ್ನು ಅಂಗೀಕರಿಸಿದ ಎರಡು ದಿನಗಳ ನಂತರ ವಿಧಾನಪರಿಷತ್ತಿನಲ್ಲಿ ಮಸೂದೆಗೆ ಬಹುಮತ ದೊರೆಯಲಿಲ್ಲ. ಈ ಮಸೂದೆಯು ದೇಶಾದ್ಯಂತ ಭಾರೀ ವಿವಾದವನ್ನು ಹುಟ್ಟುಹಾಕಿತ್ತು ಮತ್ತು ಕಾಂಗ್ರೆಸ್ ‘ಹಿಂದೂ ವಿರೋಧಿ’ ನೀತಿಗಳನ್ನು ಜಾರಿಗೆ ತಂದಿದೆ ಎಂದು ಪ್ರತಿಪಕ್ಷ ಬಿಜೆಪಿ […]