ಹೆಬ್ರಿ ಚಾಣಕ್ಯ ಸಂಸ್ಥೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ
ಹೆಬ್ರಿ: ಮಕ್ಕಳ ಪ್ರತಿಭೆಗಳು ಅನಾವರಣಗೊಳ್ಳಲು ಪಠ್ಯೇತರ ಚಟುವಟಿಕೆಯಲ್ಲಿ ತಮ್ಮ ಮಕ್ಕಳನ್ನು ತೊಡಗಿಸಿಬೇಕು. ಭಾರತೀಯ ರಂಗ ಕಲೆಗಳನ್ನು ಅಧ್ಯಯನ ಮಾಡಿದರೆ ಮಾನಸಿಕವಾಗಿ ಸದೃಡರಾಗಲು ಸಾಧ್ಯ ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಎಲ್ಲಾ ಕಲಾಪ್ರಕಾರಗಳನ್ನು ಒಂದೇ ಸೂರಿನಡಿ ತರಬೇತಿ ನೀಡುವುದರ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆಗಳನ್ನು ಹೊರತರಲು ಸಹಕಾರಿಯಾಗಿದೆ ಎಂದು ಯಕ್ಷಗಾನ ಗುರು ಸುಬ್ರಹ್ಮಣ್ಯ ಪ್ರಸಾದ್ ಹೇಳಿದರು. ಅವರು ಹೆಬ್ರಿ ಎಸ್.ಆರ್.ಬಳಿ ಇರುವ ಚಾಣಕ್ಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆರಂಭಗೊಂಡ ಯಕ್ಷಗಾನ ತರಗತಿಯನ್ನು ಭಾಗವತಿಗೆಯ ಮೂಲಕ ಚಾಲನೆ ನೀಡಿ […]
ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ: ಅರ್ಜಿ ಆಹ್ವಾನ
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಉಳಿಕೆಯಾಗಿರುವ ಸೀಟುಗಳನ್ನು ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ. 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅಥವಾ […]
ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ.
ಮೂಡುಬಿದಿರೆ: ಮೂಡುಬಿದಿರೆಯ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಶುಕ್ರವಾರದಿಂದ ಕಾಣೆಯಾಗಿದ್ದಾಳೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ನಾಪತ್ತೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು, ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿದ್ದಾಳೆ. ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಠಾಣೆಯಲ್ಲಿ […]
ನಟ ರಕ್ಷಿತ್ ಶೆಟ್ಟಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ
ಉಡುಪಿ: ಕನ್ನಡದ ಖ್ಯಾತ ಚಲನಚಿತ್ರ ನಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು.
ಮದುವೆಯಾಗಲು ಖ್ಯಾತ ಟಿವಿ ನಿರೂಪಕನನ್ನು ಅಪಹರಿಸಿದ ಯುವತಿ..!
ಹೈದರಾಬಾದ್: ಮಹಿಳಾ ಉದ್ಯಮಿಯೊಬ್ಬಳು ಮದುವೆಯಾಗಲು ಖ್ಯಾತ ಟಿವಿ ನಿರೂಪಕನನ್ನು ಅಪಹರಿಸಿ ಜೈಲು ಸೇರಿದ ಘಟನೆ ಶುಕ್ರವಾರ ಹೈದರಾಬಾದ್ ನಲ್ಲಿ ನಡೆದಿದೆ. ಬಂಧಿತ ಭೋಗಿರೆಡ್ಡಿ ತ್ರಿಶಾ ಐದು ಸ್ಟಾರ್ಟಪ್ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕಿ ಎಂದು ತಿಳಿದು ಬಂದಿದೆ. ತ್ರಿಶಾ ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ನಲ್ಲಿ ಟಿವಿ ಆಂಕರ್ ಪ್ರಣವ್ ಎಂಬವರ ಪ್ರೊಫೈಲ್ ನೋಡಿ ಮದುವೆ ಪ್ರಸ್ತಾಪ ಮಾಡಿದ್ದಳು. ಈ ಪ್ರಸ್ತಾಪಕ್ಕೆ ಪ್ರಣವ್ ಕಡೆಯಿಂದಲೂ ಒಪ್ಪಿಗೆ ಸಿಕ್ಕಿತ್ತು. ಇದಾದ ಬಳಿಕ ಚಾಟಿಂಗ್ ಆರಂಭಿಸಿ ಹಲವು ತಿಂಗಳ ಬಳಿಕ ಅದು ನಕಲಿ […]