ಪೋಷಕರು ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆಯನ್ನು ಹಾಕಿಸಲು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರೆ.
ಉಡುಪಿ: ಮಾರ್ಚ್ 3 ರಂದು ಸಮೀಪದ ಪಲ್ಸ್ ಪೊಲಿಯೋ ಲಸಿಕಾ ಕೇಂದ್ರಗಳೀಗೆ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಕರೆದೊಯ್ದು ಪೊಲಿಯೋ ಲಸಿಕೆಯನ್ನು ಹಾಕಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಹಾಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಷ್ಟ್ರೀಯ ಪಲ್ಸ್ […]
ಬೇಸಿಗೆಯಲ್ಲಿ ನೀರಿನ ಅಭಾವವಾಗದಂತೆ ಕ್ರಮವಹಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು
ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕವಾಗುವಂತಹ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆಗಳನ್ನು ಈಗಲೇ ರೂಪಿಸಿಕೊಂಡು ಯಾವುದೇ ನೀರಿನ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗ್ರಾಮೀಣ […]
ಹೆಬ್ರಿ ಚಾಣಕ್ಯ ಸಂಸ್ಥೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ
ಹೆಬ್ರಿ: ದೈಹಿಕ ಹಾಗೂ ಮಾನಸಿಕ ಸದೃಡತೆಯ ಜತೆ ನಮ್ಮ ಆತ್ಮರಕ್ಷಣೆಗೆ ಕರಾಟೆ ಸಹಕಾರಿ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಉಡುಪಿ ಜಿಲ್ಲೆಯಲ್ಲಿಯೇ ಶಿಕ್ಷಣ ಮಾತ್ರವಲ್ಲದೆ ಎಲ್ಲಾ ಕಲಾ ಪ್ರಕಾರಗಳನ್ನು ಒಂದೆ ಸೂರಿನ ನೀಡಿ ಇದೀಗ ಕರಾಟೆ ತರಗತಿಯನ್ನು ಅಂತಾರಾಷ್ಟ್ರೀಯ ಮಟ್ಟದ ತರಬೇತುದಾರರಿಂದ ನೀಡುತ್ತಿರುವುದು ಶ್ಲಾಘನೀಯ ಎಂದು ಮೂಡುಬಿದಿರೆ ತಾ| ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಹೇಳಿದರು. ಅವರು ಹೆಬ್ರಿ ಎಸ್‌ಆರ್‌ಬಳಿ ಇರುವ ಚಾಣಕ್ಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆರಂಭಗೊಂಡ ಕರಾಟೆ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು. ಕರಾಟೆ […]
ಈ ಬಾರಿ ಕೌಂಟ್ ಡೌನ್ ಸಮಯ ಮತ್ತು ರಾಕೆಟ್ ಕೂಡಾ ನಮ್ಮದು!! ಚೊಚ್ಚಲ ಗಗನಯಾನದ ಗಗನಯಾತ್ರಿಗಳನ್ನು ದೇಶಕ್ಕೆ ಪರಿಚಯಿಸಿದ ಪ್ರಧಾನಿ ಮೋದಿ
ತಿರುವನಂತಪುರ: ದೇಶದ ಚೊಚ್ಚಲ ಮಾನವ ಸಹಿತ ಬಾಹ್ಯಾಕಾಶ ಯಾನ ಗಗನಯಾನಗೆ ತರಬೇತಿ ಪಡೆಯುತ್ತಿರುವ ನಾಲ್ವರು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರಕಟಿಸಿದ್ದಾರೆ. ಪ್ರಧಾನಮಂತ್ರಿ ಮೋದಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ದ ಮೂರು ಪ್ರಮುಖ ತಾಂತ್ರಿಕ ಸೌಲಭ್ಯಗಳನ್ನು ಉದ್ಘಾಟಿಸಲು VSSC ಗೆ ಬಂದಿದ್ದರು. ತುಂಬಾದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಭೇಟಿ ನೀಡಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಗಗನಯಾನ ಮಿಷನ್ ಗೆ ಆಯ್ಕೆಯಾಗಿರುವ ನಾಲ್ಕು ಮಂದಿ ಗಗನಯಾನಿಗಳ ಹೆಸರನ್ನು ಘೋಷಣೆ ಮಾಡಿದ್ದಾರೆ. […]
ಹಿಮ್ಮಡಿ ಶಸ್ತ್ರಚಿಕಿತ್ಸೆಗೆ ಒಳಗಾದ ವೇಗಿ ಮೊಹಮ್ಮದ್ ಶಮಿ
ಭಾರತೀಯ ಕ್ರಿಕೆಟ್ ನ ಸ್ಟಾರ್ ವೇಗಿ ಮೊಹಮ್ಮದ್ ಶಮಿ, ಸೋಮವಾರ ತಾನು ಹಿಮ್ಮಡಿಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ ಎಂದು X ನಲ್ಲಿ ಬಹಿರಂಗಪಡಿಸಿದ್ದಾರೆ. “ನನ್ನ ಅಕಿಲ್ಸ್ ಸ್ನಾಯುರಜ್ಜು ಮೇಲೆ ಯಶಸ್ವಿ ಹೀಲ್ ಆಪರೇಷನ್ ನಡೆದಿದೆ! ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ, ಆದರೆ ನನ್ನ ಕಾಲ ಮೇಲೆ ನಿಲ್ಲಲು ಎದುರು ನೋಡುತ್ತಿದ್ದೇನೆ” ಎಂದು ಅವರು ಪೋಸ್ಟ್ ನಲ್ಲಿ ಹೇಳಿದ್ದಾರೆ. ಅಕಿಲ್ಸ್ ಸ್ನಾಯುರಜ್ಜು ಕಾಲಿನ ಹಿಂಭಾಗದಲ್ಲಿರುವ ದಪ್ಪ ಸ್ನಾಯುರಜ್ಜು ಮತ್ತು ಇದು ಹಿಮ್ಮಡಿಗೆ ಸಂಪರ್ಕವನ್ನು ಒದಗಿಸುತ್ತದೆ. ICC ಕಾರ್ಯಕ್ರಮದ ಬಳಿಕ ಆಸ್ಟ್ರೇಲಿಯಾ […]