ಮುಖ್ಯಮಂತ್ರಿ ರೈತ ವಿದ್ಯಾನಿಧಿಗಾಗಿ ಅರ್ಜಿ ಆಹ್ವಾನ
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾ ನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರುವ ಸಾಮಾನ್ಯ ವರ್ಗದ ರೈತ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಪಟ್ಟ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಲಾಗಿನ್‌ನಲ್ಲಿ ಅಪ್ಲೋಡ್ ಮಾಡಲು ಫೆಬ್ರವರಿ 29 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು […]
ಬಂಟಕಲ್ಲು ನಿರಾಮಯ ಇನ್ಸ್ಟಿಟ್ಯೂಟ್ ಆಫ಼್ ಹೆಲ್ತ್ ಸೈನ್ಸಸ್ ನಲ್ಲಿ ಬೇಸಿಕ್ ಲೈಫ್ ಸಪೋರ್ಟ್ ಆಂಡ್ ಏರ್ ವೇ ಮ್ಯಾನೇಜ್ ಮೆಂಟ್ ಕಾರ್ಯಾಗಾರ
ಬಂಟಕಲ್ಲು: ಶ್ರೀ ಸೋದೆ ವಾದಿರಾಜ ಮಠದ ಆಡಳಿತಕ್ಕೊಳಪಟ್ಟ ಬಂಟಕಲ್ಲು ನಿರಾಮಯ ಇನ್ಸ್ಟಿಟ್ಯೂಟ್ ಆಫ಼್ ಹೆಲ್ತ್ ಸೈನ್ಸಸ್ ಹಾಗೂ ಡೆಲ್ಟಾ ಹೆಲ್ತ್ ಕೇರ್ ನ ಆಶ್ರಯದಲ್ಲಿ ಫೆಬ್ರವರಿ 22 ರಂದು ಬೇಸಿಕ್ ಲೈಫ್ ಸಪೋರ್ಟ್ ಹಾಗೂ ಏರ್ ವೇ ಮ್ಯಾನೇಜ್ ಮೇಂಟ್ ನ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಎಸ್.ಎಂ.ವಿ.ಐ.ಟಿ.ಎಂ ಬಂಟಕಲ್ ನ ಪ್ರಾಂಶುಪಾಲತಿರುಮಲೇಶ್ವರ ಭಟ್ ರವರು ಮುಖ್ಯ ಅತಿಥಿಯಾಗಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಆರೋಗ್ಯದ ಪ್ರಾಮುಖ್ಯತೆಯ ಬಗ್ಗೆ ವಿವರಿಸಿ, ಜೀವ ರಕ್ಷಣೆಯ ಬಗೆಗಿನಕಾರ್ಯಾಗಾರಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳನ್ನು […]
ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ
ಮಂಗಳೂರು: ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ. ಈ ದೇಶದ ಹಿಂದುಗಳು ಶೇಕಡಾ 24ರಷ್ಟು ಹಿಂದುಳಿದಿದ್ದರೆ ಮುಸ್ಲಿಮರು ಶೇ.38ರಷ್ಟು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅವರು ದೋಚಿದ್ದರೆ ಹಿಂದುಗಳಿಗಿಂತ ಶ್ರೀಮಂತರಾಗಬೇಕಿತ್ತು. ಈ ಕಹಿಸತ್ಯವನ್ನು ಜಗತ್ತಿಗೆ ತಿಳಿಸುವುದಕ್ಕಾಗಿಯಾದರೂ ಮುಸ್ಲಿಮರು ಬರವಣಿಗೆಯಲ್ಲಿ ಸಕ್ರಿಯವಾಗಬೇಕು ಎಂದು ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆಯವರು ಅಭಿಪ್ರಾಯಪಟ್ಟಿದ್ದಾರೆ. ಉಡುಗೊರೆ ಪ್ರಕಾಶನ ಪ್ರಕಟಿಸಿದ ಕವಯಿತ್ರಿ ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ […]
ಉಡುಪಿ: ವ್ಯಕ್ತಿ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಕಾಪು ನಿವಾಸಿ ರವಿ (51) ಎಂಬ ವ್ಯಕ್ತಿಯು ಎರಡು ತಿಂಗಳಿನಿಂದ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಅಪ್ಪ ಅಮ್ಮ ಅನಾಥಾಲಯದಲ್ಲಿ ವಾಸವಿದ್ದು ಫೆಬ್ರವರಿ 22 ರಂದು ಅಲ್ಲಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ. ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಮ್ ದೂ ಸಂ: 0820-2526444, […]
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತದಾನ ಪ್ರಾರಂಭ
ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದೆ. ಅರ್ಧ ಗಂಟೆಯ ಅವಧಿಯೊಳಗೆ 30ಕ್ಕೂ ಹೆಚ್ಚು ಶಾಸಕರು ಮತ ಚಲಾಯಿಸಿದ್ದಾರೆ. ವಿಧಾನಸೌಧದ ಮೊದಲ ಮಹಡಿಯಲ್ಲಿ ಮತಗಟ್ಟೆ ತೆರೆಯಲಾಗಿದೆ. ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಎಲ್ಲರಿಗಿಂತ ಮೊದಲು ಮತಚಲಾಯಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಜಯ್ ಮಾಕನ್, ಸೈಯದ್ ನಾಸಿರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಕಣದಲ್ಲಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳಾಗಿ ಬಿಜೆಪಿಯ ನಾರಾಯಣ ಸಾ ಭಾಂಡಗೆ ಮತ್ತು ಜೆಡಿಎಸ್ ನ ಡಿ. ಕುಪೇಂದ್ರ ರೆಡ್ಡಿ […]