ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ.
ಉಡುಪಿ: ರಾತ್ರಿ ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಬೆಳಿಗ್ಗೆ ಮನೆಯವರು ಎದ್ದು ನೋಡುವಾಗ ನಾಪತ್ತೆಯಾಗಿರುವ ಘಟನೆ ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್. ನಗರದಲ್ಲಿ ನಡೆದಿದೆ. ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್. ನಗರದ ನಿವಾಸಿ ಶೈನಾಜ್ (20) ನಾಪತ್ತೆಯಾದ ವಿದ್ಯಾರ್ಥಿನಿ. ಇವರು ಉಡುಪಿ ಅಜ್ಜರಕಾಡು ಸರಕಾರಿ ಕಾಲೇಜಿನಲ್ಲಿ 2ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಫೆಬ್ರವರಿ 25 ರಂದು ರಾತ್ರಿ ತನ್ನ ಅಜ್ಜಿಯೊಂದಿಗೆ ಮಲಗಿದ್ದು, ಮರುದಿನ ಬೆಳಿಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಈ ಬಗ್ಗೆ ಸಂಬಂಧಿಕರಲ್ಲಿ, […]
ಕಾಪು ಲೈಟ್ ಹೌಸ್‌ನಲ್ಲಿ ಪ್ರವಾಸಿ ಸೌಲಭ್ಯಗಳನ್ನು 1.40 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ: ಸಚಿವೆ ಶೋಭಾ ಕರಂದ್ಲಾಜೆ
ಉಡುಪಿ, ಫೆಬ್ರವರಿ 28: ಕಾಪು ಲೈಟ್‌ಹೌಸ್‌ನಲ್ಲಿ ಪ್ರವಾಸಿ ಸೌಲಭ್ಯಗಳನ್ನು 1.40 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಕೇಂದ್ರ ಸರ್ಕಾರದ ಪೋರ್ಟ್ಸ್ ಶಿಪ್ಪಿಂಗ್ ಅಂಡ್ ವಾಟರ್ ವೇಸ್, ಡೈರೆಕ್ಟರೇಟ್ ಜನರಲ್ ಆಫ್ ಲೈಟ್ ಹೌಸಸ್ ಅಂಡ್ ಲೈಟ್ ಶಿಪ್ಸ್ ಇಲಾಖೆಯ ವತಿಯಿಂದ ಕಾಪು ದೀಪಸ್ತಂಭಗಳನ್ನು ಉಳಿಸಿಕೊಂಡು ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇದರ ಉದ್ಘಾಟನೆಯನ್ನು ತಮಿಳುನಾಡಿನ […]
ಕಾರ್ಕಳ: ಎಳ್ಳಾರೆ ಗ್ರಾಮದ ಯುವತಿ ನಾಪತ್ತೆ
ಉಡುಪಿ, ಫೆಬ್ರವರಿ 28: ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂಖ್ಯೆ: 08253-271100, ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805470, 9480805471, ಕಾರ್ಕಳ […]
ಪಾಕಿಸ್ತಾನ ಪರ ಘೋಷಣೆ; ಉಭಯ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ
ಉಡುಪಿ: ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಸಿರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಜ಼ಿಂದಾಬಾದ್’ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಉಭಯ ಜಿಲ್ಲೆಗಳಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಗಿರಿ ಸರ್ಕಲ್ ಬಳಿ ಇರುವ ಕಚೇರಿಗೆ ಬಿಜೆಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಆದರೆ ಕಾರ್ಯಕರ್ತರನ್ನು ಬ್ರಹ್ಮಗಿರಿ ಸರ್ಕಲ್ ನಲ್ಲಿ ಪೊಲೀಸರು ತಡೆದಿದ್ದಾರೆ. ಬ್ಯಾರಿಕೇಡ್ […]
“ಇನ್ಕ್ರಿಡಿಯಾ-24”: ಶ್ರೀ ಮಧ್ವ ವಾದಿರಾಜ ಇನ್‌ಸ್ಟಿಟ್ಯೂಟ್ ಗೆ ರನ್ನರ್ ಅಪ್ ಟ್ರೋಫಿ
ಬಂಟಕಲ್: NMAM ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಿಟ್ಟೆ ಇಲ್ಲಿ ಫೆ. 22 ರಿಂದ 24 ರವರೆಗೆ ನಡೆದ “ಇನ್ಕ್ರಿಡಿಯಾ-24” ನಲ್ಲಿ ಶ್ರೀ ಮಧ್ವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಡ್ ಮ್ಯಾನೇಜ್ಮೆಂಟ್ ನ ವಿದ್ಯಾರ್ಥಿಗಳು ರನ್ನರ್ ಅಪ್ ಟ್ರೋಫಿ ಹಾಗೂ ರೂಪಾಯಿ 20000 ನಗದುಬಹುಮಾನವನ್ನು ಪಡೆದಿರುತ್ತಾರೆ. “ಇನ್ಕ್ರಿಡಿಯಾ-24” ಇದರ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಾದ ಕೋಡ್ 45, ವೆಬೆಡ್, ಮೂವಿಡಿಯಾ- ಫೋಟೋಗ್ರಫಿ ಮತ್ತು ಲೈನ್ ಫಾಲೋವರ್ ಸ್ಫರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಿದರೆ, ಶೆರ್ಲಾಕ್ಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಮತ್ತು […]