ಭಟ್ಕಳ: ಮೀನುಗಾರರನ್ನು ಅಪಹರಿಸಿ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್‌ ದರೋಡೆ

ಭಟ್ಕಳ : ಮೀನುಗಾರಿಕೆ ಮುಗಿಸಿ ವಾಪಸು ಬರುತ್ತಿದ್ದ ಆಳಸಮುದ್ರ ಬೋಟನ್ನು ತಡೆದು ನಿಲ್ಲಿಸಿ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್‌ ಸಹಿತ 7 ಮಂದಿ ಮೀನುಗಾರರನ್ನು 25 ಜನರ ತಂಡ ಅಪಹರಿಸಿದ ಘಟನೆ ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ನಡೆದಿದೆ. ಮಲ್ಪೆಯ ಚೇತನ್‌ ಸಾಲ್ಯಾನ್‌ ಅವರಿಗೆ ಸೇರಿದ ಕೃಷ್ಣನಂದನ ಆಳಸಮುದ್ರ ಬೋಟಿನಲ್ಲಿ ಈ ಘಟನೆ ನಡೆದಿದ್ದು ಅದರಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಗರಾಜ್‌ ಹರಿಕಾಂತ್‌, ನಾಗರಾಜ್‌ ಎಚ್‌., ಅರುಣ್‌ ಹರಿಕಾಂತ ಅಂಕೋಲ, ಅಶೋಕ ಕುಮಟಾ, ಕಾರ್ತಿಕ ಹರಿಕಾಂತ ಮಂಕಿ, […]

ಪತಂಜಲಿ ಕಟಪಾಡಿ ಕಕ್ಷೆ ವತಿಯಿಂದ ಮನೋಹರ್ ಕಾಮತ್ ಮುಂಬೈ ಇವರಿಗೆ ಸನ್ಮಾನ

ಕಟಪಾಡಿ: ಪ್ರಸ್ತುತ ಮುಂಬೈಯಲ್ಲಿ ನೆಲೆಸಿರುವ ನಿವೃತ್ತ ಬ್ಯಾಂಕ್ ಉದ್ಯೋಗಿ ಮನೋಹರ್ ಕಾಮತ್ (78ವರ್ಷ) ಇವರು ತಮ್ಮ ಇಳಿ ವಯಸ್ಸಿನಲ್ಲೂ ಕಳೆದ 30 ವರ್ಷಗಳಿಂದ, ಯೋಗ ಸಾಧನೆಯನ್ನು ಮಾಡುತ್ತಿದ್ದು, ಇವರ ಯೋಗ ಶ್ರದ್ಧೆ, ಜೀವನೋತ್ಸಾಹ, ಹಾಗೂ ಶ್ವಾನಪ್ರಿಯತೆಯನ್ನು ಮನಗಂಡು ಕಟಪಾಡಿ ಪತಂಜಲಿ ಯೋಗ ಕಕ್ಷೆಯ ವತಿಯಿಂದ ಸನ್ಮಾನಿಸಲಾಯಿತು.

ಎರಡನೇ ರಾಜ್ಯ ಭಾಷೆಯಾಗಿ ತುಳು; ಮಾಹಿತಿ ಸಂಗ್ರಹಕ್ಕಾಗಿ ಅಧಿಕಾರಿಗಳ ತಂಡ ರಚನೆ: ಶಿವರಾಜ ತಂಗಡಗಿ

ಬೆಂಗಳೂರು: ಕರ್ನಾಟಕದ ಎರಡನೇ ರಾಜ್ಯ ಭಾಷೆಯಾಗಿ ತುಳುವನ್ನು ಪರಿಗಣಿಸಲು ಅಗತ್ಯ ಮಾಹಿತಿ ಸಂಗ್ರಹಕ್ಕಾಗಿ ಅಧಿಕಾರಿಗಳ ತಂಡ ರಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು. ಪರಿಷತ್ತಿನಲ್ಲಿ ಜೆಡಿಎಸ್‌ನ ಬಿ.ಎಂ.ಫಾರೂಕ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ, ವರದಿ ನೀಡಲು ಮೋಹನ್‌ ಆಳ್ವ ಅವರ ಅಧ್ಯಕ್ಷತೆಯಲ್ಲಿ ಹಿಂದೆ ಸಮಿತಿ ರಚಿಸಲಾಗಿತ್ತು. ತುಳು ಭಾಷೆಯ ಸ್ವರೂಪ, ಇತಿಹಾಸ, ಸಾಹಿತ್ಯ, ಪರಂಪರೆ, ಲಿಪಿ, ಶಾಸನಗಳ […]

ಚುನಾವಣಾ ಬೂತ್ ಗಳಲ್ಲಿ ವೀಡಿಯೊ ರೆಕಾರ್ಡಿಂಗ್ ಶೇ 100 ಕ್ಕೆ ಹೆಚ್ಚಿಸಲು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯ (Loksabha Election) ವೇಳೆ ಎಲ್ಲಾ ಮತಗಟ್ಟೆಗಳಲ್ಲಿ ನಡೆಯುವ ಮತದಾನ ಪ್ರಕ್ರಿಯೆಯನ್ನು ವಿಡಿಯೋಗ್ರಾಫ್ ಮಾಡುವಂತೆ ಬಿಜೆಪಿಯು ಚುನಾವಣಾ ಆಯೋಗವನ್ನು(ECI) ಒತ್ತಾಯಿಸಿದೆ. ಬುಧವಾರದಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ನೇತೃತ್ವದ ಪಕ್ಷದ ನಿಯೋಗವು ಈ ವಿಚಾರವಾಗಿ ನವದೆಹಲಿಯಲ್ಲಿ ಆಯೋಗವನ್ನು ಭೇಟಿ ಮಾಡಿದೆ. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ವೈಷ್ಣವ್, ಮುಂಬರುವ ಚುನಾವಣೆಯಲ್ಲಿ ಬೂತ್‌ಗಳಲ್ಲಿ ಮಾಡುವ ವೀಡಿಯೊ ರೆಕಾರ್ಡಿಂಗ್ ಪ್ರಮಾಣವನ್ನು ಶೇಕಡಾ 50 ರಿಂದ 100 ಕ್ಕೆ ಹೆಚ್ಚಿಸಬೇಕು ಎಂದು ಚುನಾವಣಾ ಸಂಸ್ಥೆಯನ್ನು ಒತ್ತಾಯಿಸಿದ್ದೇವೆ. ಮತಗಟ್ಟೆಗಳಲ್ಲಿ […]

ಸಂದೇಶಖಾಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಟಿಎಂಸಿ ನಾಯಕ ಶೇಖ್ ಷಹಜಹಾನ್ ಬಂಧನ

ಕೋಲ್ಕತ್ತಾ: ಸಂದೇಶಖಾಲಿ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೇಖ್ ಷಹಜಹಾನ್ ಮತ್ತು ಆತನ ಸಹಚರರು ಸಂದೇಶಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆಯ ಆರೋಪ ಹೊಂದಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ ಶೇಖ್ ಷಹಜಹಾನ್ ನನ್ನು ಬಂಗಾಳದ ವಿಶೇಷ ಪೊಲೀಸ್ ತಂಡವು ಮಧ್ಯರಾತ್ರಿ ಬಂಧಿಸಿದೆ ಎಂದು ಮಾಧ್ಯಮ ವರದಿ ಹೇಳಿದೆ. ಈತ ಕಳೆದ 55 ದಿನಗಳಿಂದ ಪರಾರಿಯಾಗಿದ್ದ. ಬಂಧನದ ನಂತರ, ಈತನನ್ನು ಬಸಿರ್ಹತ್ […]