ಉಡುಪಿ: ನ್ಯಾಶನಲ್ ಇಕ್ವಿಪ್ಮೆಂಟ್ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಉಡುಪಿ: ಇಲ್ಲಿನ ಕಿನ್ನಿಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66 ನಲ್ಲಿರುವ ನ್ಯಾಶನಲ್ ಇಕ್ವಿಪ್ಮೆಂಟ್ ಸಂಸ್ಥೆಗೆ ಮಿಗ್ ವೆಲ್ಡರ್, ಆರ್ಚ್ ವೆಲ್ಡರ್, ಶೀಟ್ ಮೆಟಲ್ ಫ್ಯಾಬ್ರಿಕೇಟರ್ ಗಳು ಬೇಕಾಗಿದ್ದಾರೆ. ಆಸಕ್ತರು ಸಂಪರ್ಕಿಸಿ: 9880348563
ಕನ್ನಡ ಚಿತರಂಗಕ್ಕೆ ಕಾಲಿಟ್ಟ ತುಳುನಾಡ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್: ಚೊಚ್ಚಲ ಕನ್ನಡ ಚಿತ್ರ ‘ಪುರುಷೋತ್ತಮನ ಪ್ರಸಂಗ’ ತೆರೆಗೆ

ಬೆಂಗಳೂರು: ತುಳುನಾಡಿನ ಚಿರಪರಿಚಿತ ಮತ್ತು ಅತ್ಯಪೂರ್ವ ನಿರ್ದೇಶಕ-ನಟ ತೆಲಿಕೆದ ಬೊಳ್ಳಿ, ದೇವದಾಸ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಕನ್ನಡ ಚಿತ್ರ “ಪುರುಷೋತ್ತಮನ ಪ್ರಸಂಗ” ಚಿತ್ರ ಇಂದು ತೆರೆಕಾಣುತ್ತಿದೆ. ಅದಾಗಲೇ ತುಳು ನಾಟಕ ಮತ್ತು ಚಲನಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ದೇವದಾಸ್ ಕಾಪಿಕಾಡ್ ಕನ್ನಡ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಲು ಅಣಿಯಾಗಿದ್ದಾರೆ. ರಾಷ್ಟ್ರಕೂಟ ಪಿಕ್ಚರ್ ಬ್ಯಾನರ್‌ನಡಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಅಜಯ್ ಹಾಗೂ ರಿಷಿಕಾ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಅರ್ಜುನ್ ಕಾಪಿಕಾಡ್ ಸಹ ನಿರ್ದೇಶಕರಾಗಿ ಸಹಕರಿಸಿದ್ದಾರೆ. ನವೀನ್ ಡಿ ಪಡೀಲ್, ಅರವಿಂದ್ […]
ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ದಿಯೂ ನಡೆಯಬೇಕು: ಸುನಿಲ್ ಕುಮಾರ್

ಹೆಬ್ರಿ: ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಿಂದ ಜನರ ಬದುಕು ಸದೃಢವಾಗುತ್ತಿದೆ. ಅರ್ಹರೆಲ್ಲರಿಗೂ ಯೋಜನೆಗಳ ಲಾಭ ತಲುಪಬೇಕು, ಈ ನಿಟ್ಟಿನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಬಡವರಿಗೆ ಗ್ಯಾರಂಟಿ ಯೋಜನೆಯು ಶಕ್ತಿ ನೀಡಿದೆ. ಗ್ಯಾರಂಟಿ ಯೋಜನೆಗಳು ಮಾತ್ರ ಸರ್ಕಾರದ ಸಾಧನೆಯಾಗಬಾರದು, ಅಭಿವೃದ್ಧಿ ಕಾರ್ಯಗಳು ಕೂಡ ನಡೆಯಬೇಕು. ಅಭಿವೃದ್ಧಿಗೆ ಅನುದಾನ ನೀಡಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಹೆಬ್ರಿ ತಾಲ್ಲೂಕು ಆಡಳಿತದ ವತಿಯಿಂದ ಸಮಾಜ ಮಂದಿರದಲ್ಲಿ ಗುರುವಾರ ನಡೆದ ಹೆಬ್ರಿ ಹೋಬಳಿ ಮಟ್ಟದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ […]
‘ಗೋವಿಗಾಗಿ ಮೇವು’ ಅಭಿಯಾನದ ಸಂಘಟಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಆಯ್ಕೆ

ಕೋಟ: ಭಾರತೀಯ ಜನತಾ ಪಕ್ಷದ ಉಡುಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿ ಜೀವನದಿಂದಲೇ ವಿದ್ಯಾರ್ಥಿ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಇವರು ಹಲವಾರು ಯಶಸ್ವಿ ವಿದ್ಯಾರ್ಥಿ ಹೋರಾಟಗಳನ್ನು ಸಂಘಟಿಸಿ, ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಅನಂತರ ರಾಜಕೀಯ ಪ್ರವೇಶಿಸಿ ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ‘ಗೋವಿಗಾಗಿ ಮೇವು’ ಎನ್ನುವ ಯಶಸ್ವಿ ಅಭಿಯಾನವನ್ನು ಸಂಘಟಿಸಿ, ಗೋ ಶಾಲೆಗಳಿಗೆ ವಿವಿಧ ಸಂಘಟನೆಗಳಿಂದ ಮೇವು ಒದಗಿಸುವುದರ ಮೂಲಕ ರಾಜ್ಯ […]
15ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15 ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ. ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. ಸಿನಿಮಾಗಳ […]