ಬಂಟ್ವಾಳ “ಮೂಡೂರು-ಪಡೂರು” ಜೋಡುಕರೆ ಕಂಬಳ ಕೂಟದ ಫಲಿತಾಂಶ.

ಬಂಟ್ವಾಳ: ಬಂಟ್ವಾಳದಲ್ಲಿ ಮಾ.02 ರಂದು ನಡೆದ “ಮೂಡೂರು – ಪಡೂರು” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 09 ಜೊತೆಅಡ್ಡಹಲಗೆ: 04 ಜೊತೆಹಗ್ಗ ಹಿರಿಯ: 15 ಜೊತೆನೇಗಿಲು ಹಿರಿಯ: 29 ಜೊತೆಹಗ್ಗ ಕಿರಿಯ: 20ಜೊತೆನೇಗಿಲು ಕಿರಿಯ: 105 ಜೊತೆಒಟ್ಟು ಕೋಣಗಳ ಸಂಖ್ಯೆ: 182 ಜೊತೆ••••••••••••••••••••••••••••••••••••••••••••••ಕನೆಹಲಗೆ:( ನೀರು ನೋಡಿ ಬಹುಮಾನ ) ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೊಹಲಗೆ […]

ಬ್ರಹ್ಮಾವರ: ಶೂಟೌಟ್ ಮಾಡಿ ಯುವಕನ ಹತ್ಯೆ.

ಬ್ರಹ್ಮಾವರ: ದುಷ್ಕರ್ಮಿಗಳ ತಂಡವೊಂದು ಶೂಟೌಟ್ ಮಾಡಿ ಯುವಕನನ್ನು ಹತ್ಯೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ 9:30 ಸುಮಾರಿಗೆ ಕೃಷ್ಣ ಅವರು ಮನೆಯಲ್ಲಿ ಊಟ ಮಾಡುತ್ತಿದ್ದರು. ಈ ವೇಳೆ ಏಕಾಏಕಿಯಾಗಿ ಮನೆಗೆ ದಾಳಿ ನಡೆಸಿದ ದುಷ್ಕರ್ಮಿಗಳ ತಂಡವು ಕೃಷ್ಣ ಅವರ ಮೇಲೆ ಫೈರಿಂಗ್ ನಡೆಸಿದೆ. ಬಳಿಕ ಅಲ್ಲಿಂದ ಪರಾರಿಯಾಗಿದೆ. ಎಂದು ತಿಳಿದುಬಂದಿದೆ. ಮಣಿಪಾಲದಲ್ಲಿ ಕೆಲಸ […]

ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ ಪಿ ಇವರಿಗೆ ಬೀಳ್ಕೊಡುಗೆ ಸಮಾರಂಭ

ಉಡುಪಿ: ಸುಮಾರು ಮೂವತ್ತೆರಡು ವರ್ಷ ಸುಧೀರ್ಘವಾಗಿ ಸಾರಿಗೆ ಇಲಾಖೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ರವಿಶಂಕರ ಪಿ. ಅವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸಾರಿಗೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಯಿತು. ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಸರಕಾರಿ ನೌಕರರ ಜೀವನದಲ್ಲಿ ನಿವೃತ್ತಿಯು ಒಂದು ಅನಿವಾರ್ಯ ಕಾಲಘಟ್ಟ, ದೇವರ ದಯೆಯಿಂದ ಯಾವ ಕಪ್ಪು ಚುಕ್ಕೆ ಇಲ್ಲದೇ ನಿವೃತ್ತಿ ಹೊಂದಿರುವುದು ಸಂತಸದ ವಿಚಾರವಾಗಿದೆ ಎಂದರು. ಹಿರಿಯ ಅಧಿಕಾರಿಗಳ […]

ಚುನಾವಣಾ ಜಾಹಿರಾತಿಗೆ ಎಂ.ಸಿ.ಎಂ.ಸಿ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ

ಉಡುಪಿ: ಚುನಾವಣಾ ಆಯೋಗ ಸೂಚಿಸಿರುವ ನಿಯಮಾನುಸಾರ ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಕರಪತ್ರ ಹಾಗೂ ಜಾಹೀರಾತು ಮೂಲಕ ಚುನಾವಣೆ ಪ್ರಚಾರ ಪಡಿಸುವ ಮುನ್ನ ಎಂ.ಸಿ.ಎಂ.ಸಿ ಪ್ರಾಧಿಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಯುವುದಕ್ಕಾಗಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸ್ಥಳೀಯ ಕೇಬಲ್ ಆಪರೇಟರ್ ಗಳು ಮತ್ತು ನೆಟ್‌ವರ್ಕ್ ಸರ್ವೀಸ್ […]

ಮಂಗಳೂರು: ವೃದ್ಧ ದಂಪತಿ ಮೇಲೆ ಹಲ್ಲೆ; ಕ್ರೈಸ್ತ ಧರ್ಮಗುರು ಸಹಿತ ಇಬ್ಬರ ಮೇಲೆ ದೂರು ದಾಖಲು

ಮಂಗಳೂರು: ತಮ್ಮದೇ ಸಮುದಾಯದ ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕ್ರೈಸ್ತ ಧರ್ಮಗುರು ಸಹಿತ ಇಬ್ಬರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಗ್ರಾಮದ ಮನೇಲ ಪರಿಯಾಲ್ತಡ್ಕದ ಕ್ರೈಸ್ಟ್ ಕಿಂಗ್ ಪ್ಯಾರಿಷ್ ನ ಪಾದ್ರಿ ನೆಲ್ಸನ್ ಒಲಿವೆರಾ ಹಲ್ಲೆ ಆರೋಪಿ ಎನ್ನಲಾಗಿದೆ. ಇನ್ನು ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ ಗ್ರೆಗರಿ ಮೊಂತೇರೊ (79) ಹಲ್ಲೆಗೊಳಗಾದವರಾಗಿದ್ದಾರೆ. ಫೆ.29ರಂದು ಈ ಘಟನೆ ನಡೆದಿರುವುದು ವೈರಲ್ ಆಗಿರುವ ಸಿಸಿಟಿವಿ […]