ಲೋಕಸಭಾ ಚುನಾವಣೆಯ ಕಾರ್ಯಗಳನ್ನು ಅಧಿಕಾರಿಗಳು ಜವಾಬ್ದಾರಿಯುತವಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಮಾ.04: ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲೆಯ ನೋಡೆಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ […]

ಕಡಬ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ

ಕಡಬ: ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇಂದು ಬೆಳಿಗ್ಗೆ ನಡೆದ ವಿದ್ಯಾರ್ಥಿನಿಯರ ಮೇಲಿನ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ವಶದಲ್ಲಿರುವಾತನನ್ನು ಕೇರಳದ ಮಲಪ್ಪುರಂ ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (23) ಎಂದು ಗುರುತಿಸಲಾಗಿದೆ. ಆಸಿಡ್ ದಾಳಿಗೊಳಗಾದ ಯುವತಿ ಹಾಗೂ ಆರೋಪಿ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಪ್ರೇಮ ಪ್ರಸಂಗಕ್ಕೆ ಸಂಬಂಧಿಸಿ ನಡೆದ ಕೃತ್ಯ ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಯುವತಿಯ ಜೊತೆಗಿದ್ದ […]

ಮತದಾನ ಯಾ ಭಾಷಣಕ್ಕಾಗಿ ಲಂಚ; ಜನಪ್ರತಿನಿಧಿಗಳಿಗೆ ಕಾನೂನು ವಿನಾಯಿತಿ ಇಲ್ಲ: ಸುಪ್ರೀಂ ತೀರ್ಪು

ನವದೆಹಲಿ: ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಜನಪ್ರತಿನಿಧಿಗಳಿಗೆ ಕಾನೂನು ಕ್ರಮದಿಂದ ಯಾವುದೇ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಸೋಮವಾರ ಹೇಳಿದೆ. ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ಏಳು ಮಂದಿ ಇದ್ದ ಸಾಂವಿಧಾನಿಕ ಪೀಠವು, 1998ರಲ್ಲಿ ಜೆಎಂಎಂ ಲಂಚ ಪ್ರಕರಣದಲ್ಲಿ ಪಂಚ ಸದಸ್ಯ ಪೀಠ ನೀಡಿದ್ದ ತೀರ್ಪನ್ನು ಸರ್ವಾನುಮತದಿಂದ ರದ್ದು ಮಾಡಿದೆ. ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಶಾಸಕರಿಗೆ ಆ ತೀರ್ಪಿನಲ್ಲಿ ಕಾನೂನು […]

ವಾಲಿಬಾಲ್ ಪಟು ದೀಕ್ಷಿತ್ ನಾಯಕ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿ ಇದರ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಕೀರ್ತಿ ನಾಯಕ್ ಇವರ ಪುತ್ರ ದೀಕ್ಷಿತ್ ನಾಯಕ್ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿ ಉಡುಪಿ ತಂಡ ರನ್ನರ್ ಅಪ್ ಆಗಿ ಮೂಡಿ ಬರುವಂತೆ ಮಾಡಿದ್ದಾರೆ. ಇವರ ಈ ಸಾಧನೆಯಿಂದಾಗಿ ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯ ಹೆಮ್ಮೆಯ ಹಳೆ ವಿದ್ಯಾರ್ಥಿಯಾಗಿರುವ ದೀಕ್ಷಿತ್ ನಾಯಕ್, ಪ್ರಸ್ತುತ ಹಿರಿಯಡ್ಕ ಕೆ ಪಿ ಎಸ್ ಶಾಲೆಯಲ್ಲಿಹತ್ತನೇ […]

ಕಾರ್ಕಳ: ಹೊಟೇಲ್‌ ಕಟ್ಟಡದಲ್ಲಿ ಅಗ್ನಿ ಅವಘಡ; 1.20 ಲಕ್ಷ ರೂ ನಷ್ಟ

ಕಾರ್ಕಳ: ಕಸಬಾ ಗ್ರಾಮದ ಕರಿಯಕಲ್ಲು ಜಂಕ್ಷನ್‌ ಬಳಿ ನಿರ್ಮಲ ರಾವ್‌ ಮಾಲಕತ್ವದ ಹೊಟೇಲ್‌ ಕಟ್ಟಡಕ್ಕೆ ಬೆಂಕಿ ತಗಲಿ ಅಪಾರ ಹಾನಿ ಸಂಭವಿಸಿದ ಘಟನೆ ಮಾ.3ರಂದು ಬೆಳಗಿನ ಜಾವ 4 ಗಂಟೆಗೆ ಸಂಭವಿಸಿದೆ. ಘಟನೆಯಿಂದ ಫ್ರಿಡ್ಜ್, ಗ್ರೈಂಡರ್, ಮಿಕ್ಸಿ, ಅಡುಗೆ ಪಾತ್ರೆ, ದಿನಸಿ ಸಾಮಗ್ರಿ, ವಿದ್ಯುತ್‌ ಸಂಪರ್ಕ ಇತ್ಯಾದಿ ಸುಟ್ಟು ಹೋಗಿವೆ. ಕಟ್ಟಡದ ಮೇಲ್ಛಾವಣಿ ಭಾಗಶಃ ಸುಟ್ಟು ಹೋಗಿದೆ. ಸ್ಥಳೀಯರ ಸಹಕಾರದಿಂದ ಅಗ್ನಿಶಾಮಕದಳದವರು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಸುಮಾರು 1.20 ಲಕ್ಷ ರೂ ನಷ್ಟ ಅಂದಾಜಿಸಲಾಗಿದೆ.