ಅಬಕಾರಿ ಅಕ್ರಮ ತಡೆಗಟ್ಟಲು ಕಂಟ್ರೋಲ್ ರೂಂ ಸ್ಥಾಪನೆ.

ಉಡುಪಿ: ಲೋಕಸಭಾ ಚುನಾವಣೆಯು ಮುಂದಿನ ದಿನಗಳಲ್ಲಿ ನಡೆಯಲಿದ್ದು, ಮತದಾರರನ್ನು ಸೆಳೆಯಲು ನಕಲಿ, ಕಳಪೆ ಮಟ್ಟದ ಮದ್ಯೆ, ಕಳ್ಳಭಟ್ಟಿ ತಯಾರಿಸಿ ಸಾಗಾಣಿಕೆ, ಶೇಖರಣೆ ಮಾಡಿ ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಿತರಿಸುವ ಸಾಧ್ಯತೆ ಇದ್ದು, ಇವುಗಳ ಸೇವನೆಯಿಂದ ಪಾನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆ ಹಾಗೂ ಸಮಾಜಘಾತುಕ ಶಕ್ತಿಗಳು ಅಕ್ರಮವಾಗಿ ಆದಾಯ ಗಳಿಸಲು ತೆರಿಗೆ ಪಾವತಿಸಿರುವ ಮದ್ಯವನ್ನು ಖರೀದಿಸಿ, ದಾಸ್ತಾನು ಇಟ್ಟು ಚುನಾವಣೆಯ ಮದ್ಯಮಾರಾಟ ನಿಷೇಧಿಸಿ ಆದೇಶಿಸಿದ ದಿನಗಳಲ್ಲಿ (ಒಣದಿವಸ) ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಾಧ್ಯತೆ ಇದ್ದು, […]

ಸಂದೇಶ್‌ಖಾಲಿ ಜಾರಿ ನಿರ್ದೇಶನಾಲಯ ತಂಡದ ಮೇಲೆ ದಾಳಿ ಪ್ರಕರಣ ಸಿಬಿಐಗೆ ಹಸ್ತಾಂತರಿಸಿದ ಕಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ: ಭ್ರಷ್ಟಾಚಾರ ಪ್ರಕರಣ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌ನ ಮಾಜಿ ನಾಯಕ ಶೇಖ್ ಷಹಜಹಾನ್ ಮನೆಯಲ್ಲಿ ತನಿಖೆ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ED) ತಂಡದ ಮೇಲೆ ದಾಳಿ ನಡೆಸಿದ ಸಂದೇಶ್‌ಖಾಲಿ ಘಟನೆಯ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಕೇಂದ್ರೀಯ ತನಿಖಾ ದಳ (CBI)ಕ್ಕೆ ವಹಿಸಿದೆ ಮತ್ತು ಷಹಜಹಾನ್‌ನನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸುವಂತೆ ಪೊಲೀಸರಿಗೆ ಸೂಚಿಸಿದೆ. ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ ಎಸ್ ಶಿವಜ್ಞಾನಂ ಅವರನ್ನೊಳಗೊಂಡ ವಿಭಾಗೀಯ ಪೀಠವು ನಝತ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 8 […]

ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿಯರನ್ನು ಭೇಟಿಯಾದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

ಕಡಬ: ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಇಲ್ಲಿನ ಎ.ಜೆ.ಆಸ್ಪತ್ರೆಯಲ್ಲಿ ಮಂಗಳವಾರ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆ್ಯಸಿಡ್ ದಾಳಿ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಕ್ಷಣ ತಲಾ 4 ಲಕ್ಷ ರೂಪಾಯಿ ಚಿಕಿತ್ಸೆ ಪರಿಹಾರವಾಗಿ ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ತೀವ್ರ ಗಾಯವಾಗಿದೆ. ಅವರಿಗೆ ವಾರದ […]

ಮಂಗಳೂರು: ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಡ್ರೋನ್ ತಂತ್ರಜ್ಞಾನದಲ್ಲಿ 3 ತಿಂಗಳ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಮಂಗಳೂರು: ಭಾರತದ ಪ್ರತಿಷ್ಠಿತ ಸಂಸ್ಥೆ IIT Mandi iHub(Indian Institute of technology) ಮತ್ತು HCI ಫೌಂಡೇಶನ್ ವತಿಯಿಂದ, ಹೆಚ್ಚಿನ ಬೇಡಿಕೆಯ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI) ಮತ್ತು ಡ್ರೋನ್ ತಂತ್ರಜ್ಞಾನ(Drone technologies) ಇದರಲ್ಲಿ ಉಚಿತವಾಗಿ 3 ತಿಂಗಳ ತರಬೇತಿ ಮತ್ತು ಉದ್ಯೋಗ ನೀಡಿಸುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯ ಭಾರತ ಯೋಜನೆ ಅಡಿಯಲ್ಲಿ IIT Mandi iHub ಮತ್ತು HCI ಫೌಂಡೇಶನ್ ಕಡೆಯಿಂದ ಭಾರತದ ವಿವಿಧ ಭಾಗಗಳಿಂದ ಸುಮಾರು 1000-2000 ಯುವಕ / ಯುವತಿಯರಿಗೆ, ಉಚಿತವಾಗಿ IoT […]

ಇಂದು ಸಂಜೆ ಎಂಜಿಎಂ ಕಾಲೇಜಿನಲ್ಲಿ “ಮಾರ್ನಮಿ” ನಾಟಕ ಪ್ರದರ್ಶನ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಯಕ್ಷ ರಂಗಾಯಣ ಕಾರ್ಕಳ ವತಿಯಿಂದ ಡಾ.ಗೀತಾ.ಪಿ.ಸಿದ್ಧಿ ಅವರ ಕಥೆ ಆಧಾರಿತ ರಂಗಾಯಣ ಶಿವಮೊಗ್ಗ ಪ್ರಸ್ತುತ ಪಡಿಸುವ ನಾಟಕ “ಮಾರ್ನಮಿ” ಅನ್ನು ಮಾರ್ಚ್ 5 ರಂದು ಸಂಜೆ 6 ಗಂಟೆಗೆ ನಗರದ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಕಾರ್ಕಳ ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲೆ ಪ್ರೋ.ಲಕ್ಷ್ಮೀನಾರಾಯಣ ಕಾರಂತ, […]