ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಜ್ಜು: ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಜಿಲ್ಲಾಧಿಕಾರಿ ತಾಕೀತು
ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲೆಯ ನೋಡೆಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ […]
ಮಾರ್ಚ್ 6: ಆತ್ರಾಡಿ ಗ್ರಾ.ಪಂ.ಆವರಣದಲ್ಲಿ ಉಚಿತ ಕಿಡ್ನಿ ತಪಾಸಣಾ ಶಿಬಿರ ಹಾಗೂ ಆರೋಗ್ಯ ಜಾಗೃತಿ ಶಿಕ್ಷಣ
ಉಡುಪಿ: ಆತ್ರಾಡಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮೂತ್ರಪಿಂಡ ಶಾಸ್ತ್ರ ವಿಭಾಗ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ರೀನಲ್ ರಿಪ್ಲೇಸ್ಮೆಂಟ್ ಥೆರಪಿ ಹಾಗೂ ಡಯಾಲಿಸಿಸ್ ಟೆಕ್ನಾಲಜಿ, ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ , ಮಾಹೆ ಮಣಿಪಾಲ ಇದರ ಸಹಯೋಗದೊಂದಿಗೆ ವಿಶ್ವ ಮೂತ್ರಪಿಂಡ ದಿನದ ಅಂಗವಾಗಿ ಮಾರ್ಚ್ 06 ರಂದು ಮೂತ್ರಪಿಂಡ (ಕಿಡ್ನಿ) ಆರೋಗ್ಯದ ಜಾಗೃತಿ ಶಿಕ್ಷಣ ಮತ್ತು ಉಚಿತ ಕಿಡ್ನಿ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಶಿಬಿರವು ಬೆಳಿಗ್ಗೆ 10.30ರಿಂದ ಮದ್ಯಾಹ್ನ 12.30 ರ ವರೆಗೆ ಆತ್ರಾಡಿ ಗ್ರಾಮ […]
ಚೆನ್ನೈನಲ್ಲಿ ಎನ್‌ಐಎ ತಂಡ ದಾಳಿ: ಬೆಂಗಳೂರು ಸ್ಪೋಟ ಪ್ರಕರಣದ ಐವರು ಶಂಕಿತರು ವಶಕ್ಕೆ
ಚೆನ್ನೈ: ಎನ್‌ಐಎ ತಂಡ ಚೆನ್ನೈನಲ್ಲಿ ದಾಳಿ ನಡೆಸಿದ್ದು, ರಾಮೇಶ್ವರಂನ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಚೆನ್ನೈ ನಗರದ ಐವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ರಾತ್ರಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಚೆನ್ನೈ ನಗರದ ದೇವಸ್ಥಾನವೊಂದರ ಬಳಿ ಐವರನ್ನು ಎನ್‌ಐಎ ವಶಕೆ ಪಡೆದಿದೆ. ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಬೆಂಗಳೂರು ಜೈಲಿನಲ್ಲಿ ಮೂಲಭೂತವಾದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 7 ರಾಜ್ಯಗಳ ವಿವಿಧ […]
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ: ಬಿಜೆಪಿ ಶಾಸಕರ ನಿಯೋಗದಿಂದ ಡಿಜಿ&ಐಜಿಪಿ ಕಚೇರಿಗೆ ಭೇಟಿ; ಮೂವರ ಬಂಧನ
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ಎಫ್ಎಸ್ಎಲ್(FSL) ವರದಿ ಬಹಿರಂಗಪಡಿಸಲು ಬಿಜೆಪಿ ಒತ್ತಾಯಿಸಿದ್ದು,, ಈ ವಿಚಾರವಾಗಿ ಬಿಜೆಪಿ ಶಾಸಕರ ನಿಯೋಗ ಡಿಜಿ&ಐಜಿಪಿ ಕಚೇರಿಗೆ ಭೇಟಿ ನೀಡಿದೆ. ಮೊದಲು FSL ಕಚೇರಿಗೆ ತೆರಳಲು ನಿರ್ಧರಿಸಿದ್ದ ಬಿಜೆಪಿ ನಿಯೋಗ ನಂತರ ಡಿಜಿ&ಐಜಿಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದೆ. ಬಿಜೆಪಿ ಶಾಸಕರಾದ ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ಸಿ.ಕೆ.ರಾಮಮೂರ್ತಿ, ಧೀರಜ್ ಮುನಿರಾಜುರಿಂದ ಬೆಂಗಳೂರಿನ ನೃಪತುಂಗರಸ್ತೆಯಲ್ಲಿರುವ ಡಿಜಿ&ಐಜಿಪಿ ಕಚೇರಿ ಭೇಟಿ ನೀಡಿ ಶೀಘ್ರದಲ್ಲೇ FSL ವರದಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಲ್ಲಿ […]