ಉಡುಪಿ: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ – ಸವಾರ ಮೃತ್ಯು.
ಉಡುಪಿ: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಉಡುಪಿ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಇಂದು ಮುಂಜಾನೆ ನಡೆದಿದೆ. ಮೃತ ಸವಾರನನ್ನು 21 ವರ್ಷದ ಸ್ವಸ್ತಿಕ್ ಎಂದು ಗುರುತಿಸಲಾಗಿದೆ. ಇವರು ಇಂದು ಮುಂಜಾನೆ ತನ್ನ ಬೈಕ್ ನಲ್ಲಿ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ವಸ್ತಿಕ್ ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ […]
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಹಿ ಸುದ್ದಿ..
ಉಡುಪಿ: ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ಇಳಿಕೆ ಮಾಡುವುದಾಗಿ ಘೋಷಣೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿ ಸುದ್ದಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಅವರು ‘ಇಂದು ಅಂತಾರಾಷ್ಟ್ರೀಯ ಮಹಿಳಾ ದಿನ, ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸುವಲ್ಲಿ ಹೆಚ್ಚಿನ ಪಾತ್ರ ವಹಿಸಲಿದೆ, ವಿಶೇಷವಾಗಿ ನಮ್ಮ ನಾರಿ […]
ರಾಜ್ಯಸಭೆಗೆ ಸುಧಾ ಮೂರ್ತಿ; ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನಾಮನಿರ್ದೇಶನ
ನವದೆಹಲಿ: ಸುಧಾ ಮೂರ್ತಿ (Sudha Murthy) ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (President Of India) ಅವರು ರಾಜ್ಯಸಭೆಗೆ (Rajya Sabha) ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 8 ರಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶ್ರೀಮತಿ ಸುಧಾಮೂರ್ತಿ ಜಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜಿಯವರ ಕೊಡುಗೆ ಅಪಾರ […]
ಹಾರಾಡಿ: ಮಾ.8 ರಿಂದ 12 ರವರೆಗೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು
ಹಾರಾಡಿ: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವವು ಮಾ.8 ರಿಂದ 12 ರವರೆಗೆ ನಡೆಯಲಿದ್ದು, ವಿವಿಧ ದಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಮಾ. 8 ರಂದು ಬೆಳಿಗ್ಗೆ ಧ್ವಜಾರೋಹಣ ಮತ್ತು ರಾತ್ರಿ ಶಿವರಾತ್ರಿಯ ಮಹಾರಂಗಪೂಜೆ ನಡೆಯಲಿದೆ. ಮಾ.9 ರಂದು ಬೆಳಿಗ್ಗೆ ದೇವತಾ ಕಾರ್ಯಕ್ರಮ ರಾತ್ರಿ ರಂಗಪೂಜೆ ನಡೆಯಲಿದೆ. ಮಾ.10 ರಂದು ಮಧ್ಯಾಹ್ನ 12 ರಿಂದ ಮಹಾ ಅನ್ನಸಂತರ್ಪಣೆ, ಸಂಜೆ 5 ಗಂಟೆಗೆ ಮನ್ಮಹಾರಥೋತ್ಸವ ಜರುಗಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ. ರಥೋತ್ಸವ ನಿಮಿತ್ತ ಭಜನಾ ಕಾರ್ಯಕ್ರಮಗಳು, […]
5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗುರುವಾರ ಅನುಮತಿ ನೀಡಿದೆ. 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ. 2023-24ನೇ ಸಾಲಿನಿಂದ […]