ಮಾರ್ಚ್ 13: ಎಂಜಿಎಂ ಕ್ರೀಡಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ
ಉಡುಪಿ: ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮವು ಮಾರ್ಚ್ 13 ರಂದು ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಕುಂಜಿಬೆಟ್ಟುವಿನ ಮಹಾತ್ಮ ಗಾಂಧೀ ಮೆಮೋರಿಯಲ್ ಕಾಲೇಜಿನ ಆರೂರು ಲಕ್ಷ್ಮೀ ನಾರಾಯಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 13 ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್, ಆಹಾರ ಮತ್ತು ನಾಗರಿಕ ಸರಬರಾಜು […]
ಮಂಗಳೂರು: ವೃದ್ದ ಮಾವನಿಗೆ ಹಲ್ಲೆ; ಸೊಸೆ ಬಂಧನ
ಮಂಗಳೂರು: ಇಲ್ಲಿನ ಕುಲಶೇಖರದ ಹಾಲಿನ ಡೇರಿ ಬಳಿಯ ಮನೆಯೊಂದರಲ್ಲಿ 87 ವರ್ಷದ ಮಾವನಿಗೆ ಸೊಸೆಯು ವಾಕಿಂಗ್ ಸ್ಟಿಕ್ನಿಂದ ಹಲ್ಲೆ ನಡೆಸಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣದ ಆರೋಪಿಯಾಗಿರುವ ಮೆಸ್ಕಾಂ ಉದ್ಯೋಗಿ ಉಮಾಶಂಕರಿ (47) ಎಂಬುವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಪದ್ಮನಾಭ ಹಲ್ಲೆಗೊಳಗಾದವರು. ಅವರ ಮಗ ಪ್ರೀತಮ್ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಪದ್ಮನಾಭ ಅವರು ಸೊಸೆಯೊಂದಿಗೆ (ಮಗನ ಪತ್ನಿ) ಕುಲಶೇಖರದ ಮನೆಯಲ್ಲಿ ವಾಸವಿದ್ದಾರೆ. ‘ನೀವು ಯಾಕೆ ಈ ಮನೆಯಲ್ಲಿದ್ದೀರಿ’ ಎಂದು ಸೊಸೆ ಆಗಾಗ ನನ್ನ […]
ಪಕ್ಷದ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ಬದ್ದ: ನಳಿನ್ ಕುಮಾರ್ ಕಟೀಲ್
ಮಂಗಳೂರು: ರಾಷ್ಟ್ರೀಯ ನಾಯಕರು ಕೈಗೊಳ್ಳುವ ಯಾವುದೇ ತೀರ್ಮಾನಕ್ಕೂ ನಾನು ಬದ್ದನಾಗಿದ್ದೇನೆ ಎಂದು ಸಂಸದ ನಳಿನ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಸಂಸದ, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಅವರ ಆಯ್ಕೆಯನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ. ಬದಲಾವಣೆ ಜಗದ ನಿಯಮ ಹೊಸಬರು ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ […]
ಬಿಸಿ ಗಾಳಿಯಿಂದ ಹೀಟ್ ಸ್ಟ್ರೋಕ್ ಆಗದಂತೆ ಮುಂಜಾಗ್ರತೆ ವಹಿಸಲು ಸಲಹೆ ಸೂಚನೆಗಳು
ಉಡುಪಿ: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಗಿನಂತೆ ಸಲಹೆಗಳನ್ನು ನೀಡಿದೆ. ಸಾರ್ವಜನಿಕರು ಬಿಸಿಲಿನಲ್ಲಿ ಹೊರಹೋಗುವಾಗ ಕೊಡೆ ಬಳಸಬೇಕು ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಬೇಕು. ಆದಷ್ಟು ಬಿಳಿ […]
ನಾಳೆ ಗ್ಯಾರಂಟಿ ಯೋಜನೆಗಳ ಸಮಾವೇಶ: ಪೂರ್ವಾಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ
ಉಡುಪಿ: ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮವು ಮಾರ್ಚ್ 13 ರಂದು ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಕುಂಜಿಬೆಟ್ಟುವಿನ ಮಹಾತ್ಮ ಗಾಂಧೀ ಮೆಮೋರಿಯಲ್ ಕಾಲೇಜಿನ ಆರೂರು ಲಕ್ಷ್ಮೀ ನಾರಾಯಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ರಜತಾದ್ರಿ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಆಯೋಜನೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಾರ್ಚ್ 13 […]