ಸೆಪ್ಟೆಂಬರ್ 17 ಅನ್ನು ‘ಹೈದರಾಬಾದ್ ವಿಮೋಚನಾ ದಿನ’ವನ್ನಾಗಿ ಆಚರಿಸಲು ಕೇಂದ್ರದ ನಿರ್ಧಾರ: ಆಪರೇಷನ್ ಪೊಲೋ ಹುತಾತ್ಮರಿಗೆ ನಮನ

ನವದೆಹಲಿ: ಪ್ರತಿ ವರ್ಷ ಸೆಪ್ಟೆಂಬರ್ 17 ಅನ್ನು ‘ಹೈದರಾಬಾದ್ ವಿಮೋಚನಾ ದಿನ’ ಎಂದು ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಪ್ರಕಟಿಸಿದೆ. ಭಾರತವು ಆಗಸ್ಟ್ 15, 1947 ರಂದು ಸ್ವಾತಂತ್ರ್ಯ ಪಡೆದ ನಂತರವೂ ಹೈದರಾಬಾದ್ 13 ತಿಂಗಳ ಕಾಲ ನಿಜಾಮರ ಆಳ್ವಿಕೆಯಲ್ಲಿತ್ತು ಮತ್ತು ನಂತರದವರೆಗೂ ಸ್ವಾತಂತ್ರ್ಯವನ್ನು ಪಡೆಯಲಿಲ್ಲ ಎಂದು ಸಚಿವಾಲಯ ಬಿಡುಗಡೆ ಮಾಡಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸೆಪ್ಟೆಂಬರ್ 17, 1948 ರಂದು ‘ಆಪರೇಷನ್ ಪೋಲೋ’ ಎಂದು ಕರೆಯಲ್ಪಡುವ ಪೊಲೀಸ್ ಕಾರ್ಯಾಚರಣೆ ಬಳಿಕ ಈ ಪ್ರದೇಶವನ್ನು ನಿಜಾಮರ […]

ಅಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನಕ್ಕೆ ಹೋಗುವವರಿಗೆ ಸಲಹೆ ಸೂಚನೆ ಬಿಡುಗಡೆಗೊಳಿಸಿದ ಟ್ರಸ್ಟ್: ಹೋಗುವ ಮುನ್ನ ಇವುಗಳನ್ನು ಗಮನದಲ್ಲಿಡಿ

ಅಯೋಧ್ಯೆ: ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ಭೇಟಿ ನೀಡುವ ಎಲ್ಲಾ ಭಕ್ತರ ಗಮನಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಲಹೆ ಸೂಚನೆಗಳನ್ನು ಹೊರಡಿಸಿದೆ. ಅವು ಇಂತಿವೆ

ಮಂಗಳೂರು ಸೆಂಟ್ರಲ್‌– ತಿರುವನಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ವೇಳಾಪಟ್ಟಿ ಇಂತಿದೆ

ಮಂಗಳೂರು: ತಿರುವನಂತಪುರ– ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್‌ ರೈಲನ್ನು (ಸಂಖ್ಯೆ 20631/20632) ಮಂಗಳೂರು ಸೆಂಟ್ರಲ್‌ ನಿಲ್ದಾಣದವರೆಗೆ ವಿಸ್ತರಿಸಲಾಗಿದ್ದು, ಈ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಸಿರು ನಿಶಾನೆ ತೋರಿ ಮಂಗಳವಾರ ಬೆಳಿಗ್ಗೆ 9.35ಕ್ಕೆ ಚಾಲನೆ ನೀಡಿದ್ದಾರೆ. ಮಂಗಳೂರು ಸೆಂಟ್ರಲ್‌– ತಿರುವನಂತಪುರ ನಡುವೆ ವಂದೇ ಭಾರತ್‌ ರೈಲಿನ ದೈನಂದಿನ ಸೇವೆ ಬುಧವಾರದಿಂದ (ಮಾ.13) ಆರಂಭವಾಗಲಿದೆ. ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಬೆಳಿಗ್ಗೆ 6.25ಕ್ಕೆ ಹೊರಡುವ ರೈಲು ತಿರುವನಂತಪುರವನ್ನು ಮಧ್ಯಾಹ್ನ 3.05ಕ್ಕೆ ತಲುಪಲಿದೆ. ಅಲ್ಲಿಂದ […]

ನಗರಸಭೆ ವತಿಯಿಂದ ಮಹಿಳಾ ದಿನಾಚರಣೆ; ಮಹಿಳಾ ಸಿಬ್ಬಂದಿಗಳಿಗೆ ಸನ್ಮಾನ

ಉಡುಪಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರಸಭಾ ಕಚೇರಿಯಲ್ಲಿ ನಗರ ಸಭಾವ್ಯಾಪ್ತಿಯ ತ್ಯಾಜ್ಯ ನಿರ್ವಹಣೆಯಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ಸನ್ಮಾನಿಸುವ ಮೂಲಕ ಅರ್ಥ ಪೂರ್ಣವಾಗಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಪೌರಾಯುಕ್ತ ರಾಯಪ್ಪ ಮಾತನಾಡಿ, ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲಿ ಪುರುಷರಿಗೆ ಸರಿ ಸಮಾನವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತೀ ಪುರುಷನ ಯಶಸ್ಸಿನ ಹಿಂದೆ ಮಹಿಳೆ ಇರುತ್ತಾಳೆ ಎಂಬುದು ಸತ್ಯವಾದ ಮಾತು. ಮಹಿಳೆಯನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ನಗರಸಭೆಯ ಘನತ್ಯಾಜ್ಯ ನಿರ್ವಹಣೆಯಲ್ಲಿ ಪ್ರತಿ ದಿನ 1000 […]

ವಾಣಿಜ್ಯ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ, ತಪ್ಪಿದ್ದಲ್ಲಿ ಪರವಾನಿಗೆ ರದ್ದು: ಜಿಲ್ಲಾಧಿಕಾರಿ

ಉಡುಪಿ: ಸರಕಾರದ ಆದೇಶದ ಅನ್ವಯ ಸ್ಥಳೀಯ ಪ್ರಾಧಿಕಾರ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗಳಿಂದ ಅನುಮತಿ ಪಡೆದು ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ ಕಟ್ಟಡ, ಕೈಗಾರಿಕೆ, ಆಸ್ಪತ್ರೆ, ಪ್ರಯೋಗಾಲಯಗಳು, ಹೋಟೆಲ್ ಸೇರಿದಂತೆ ಮತ್ತಿತರ ವಾಣಜ್ಯ ಸಂಸ್ಥೆಗಳು ಅನಾವರಣಗೊಳಿಸಿರುವ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡದ ಭಾಷೆ ಬಳಕೆ ಕಡ್ಡಾಯವಾಗಿರಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಅಧಿಕೃತ ಭಾಷೆಯ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ […]