ಬಸ್ ಮಾಲಕ ಬಸ್ ಚಕ್ರದಡಿ ಸಿಲುಕಿ ಸಾವು

ಮಣಿಪಾಲ: 80 ಬಡಗಬೆಟ್ಟುವಿನ ಗ್ಯಾರೇಜ್‌ ಒಂದರಲ್ಲಿ ಬುಧವಾರ ಸಂಭವಿಸಿದ ಅವಘಡದಲ್ಲಿ ಬಸ್‌ ಮಾಲಕ ಮೃತಪಟ್ಟಿದ್ದಾರೆ. ಖಾಸಗಿ ಬಸ್‌ನ ಮಾಲಕ ದಯಾನಂದ ಶೆಟ್ಟಿ (65) ಮೃತಪಟ್ಟವರು. ಇವರು ತಮ್ಮ ಬಸ್‌ ಅನ್ನು ಗ್ಯಾರೇಜ್‌ನಲ್ಲಿ ರಿಪೇರಿಗೆ ನೀಡಿದ್ದನ್ನು ನೋಡಲು ಬಂದಿದ್ದರು. ಈ ವೇಳೆ ಬಸ್‌ನ ಎದುರು ನಿಂತಿದ್ದ ವೇಳೆ ಚಾಲಕ ಬಸ್‌ ಚಲಾಯಿಸಿದ ಪರಿಣಾಮ ಅವರು ಮುಂಭಾಗದ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದರು. ತತ್‌ಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

ಕೆಎಂಸಿ ಮಣಿಪಾಲದಿಂದ ಮಣಿಪಾಲ್ ಹಾಟ್ಸ್‌-ಹ್ಯಾಂಡ್ಸ್ ಆನ್ ಟ್ರೈನಿಂಗ್ ಸೆಷನ್ಸ್: ಗ್ಲುಕೋಮಾ ಡಯಾಗ್ನೋಸ್ಟಿಕ್ಸ್” ಕುರಿತು ಯಶಸ್ವಿ ಕಾರ್ಯಾಗಾರ

ಮಣಿಪಾಲ: ವಿಶ್ವ ಗ್ಲುಕೋಮಾ ಸಪ್ತಾಹ 2024 ರ ಸಂಭ್ರಮಾಚರಣೆಯಲ್ಲಿ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೇತ್ರಶಾಸ್ತ್ರ ವಿಭಾಗವು ಮಾರ್ಚ್ 10 ರಂದು ‘ಮಣಿಪಾಲ್ ಹಾಟ್ಸ್: ಹ್ಯಾಂಡ್ಸ್ ಆನ್ ಟ್ರೈನಿಂಗ್ ಸೆಷನ್ಸ್ – ಗ್ಲುಕೋಮಾ ಡಯಾಗ್ನೋಸ್ಟಿಕ್ಸ್’ ಎಂಬ ಒಳನೋಟವುಳ್ಳ ಕಾರ್ಯಾಗಾರವನ್ನು ಆಯೋಜಿಸಿತ್ತು. ಉಡುಪಿ ಜಿಲ್ಲಾ ಆಪ್ತಾಲ್ಮಿಕ್ ಸೊಸೈಟಿಯ ಅಧ್ಯಕ್ಷರಾದ ಡಾ. ಶ್ರೀನಾಥ್ ಕಾಮತ್ ಅವರು ಉದ್ಘಾಟಿಸಿದ ಕಾರ್ಯಕ್ರಮವು ಸ್ನಾತಕೋತ್ತರ ವಿದ್ಯಾರ್ಥಿಗಳಲ್ಲಿ ರೋಗನಿರ್ಣಯದ ಕೌಶಲ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿತ್ತು . ಸಂಸ್ಥೆಯ ಸಂಸ್ಥಾಪಕ ಡಾ.ಟಿ.ಎಂ.ಎ.ಪೈ ಅವರ 125ನೇ […]

ಹಿರಿಯ ನಾಗರಿಕರ ಸಹಾಯವಾಣಿಯಲ್ಲಿ ಆಪ್ತ ಸಮಾಲೋಚಕರ ಹುದ್ದೆ ಖಾಲಿ

ಉಡುಪಿ: ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಗೌರವಧನ ಆಧಾರದಲ್ಲಿ ಆಪ್ತ ಸಮಾಲೋಚಕರಾಗಿ ಕಾರ್ಯನಿರ್ವಹಿಸಲು ಎಮ್.ಎಸ್.ಡಬ್ಲ್ಯೂ ವಿದ್ಯಾರ್ಹತೆ ಹೊಂದಿದ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಬನ್ನಂಜೆ, ಉಡುಪಿ ದೂ.ಸಂಖ್ಯೆ: 0820-2526394 ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷರಾಗಿ ಶಾಸಕ ಯಶ್ ಪಾಲ್ ಸುವರ್ಣ ಪುನರಾಯ್ಕೆ

ಮಲ್ಪೆ: ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸಹಕಾರಿ ರಂಗದ ಹಿರಿಯ ಸಂಸ್ಥೆಯಾದ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ನ 2024-29ನೇ ಸಾಲಿನ ಅಧ್ಯಕ್ಷರಾಗಿ ಸತತ 4ನೇ ಬಾರಿಗೆ ಅವಿರೋಧವಾಗಿ ಯಶ್‌ಪಾಲ್‌ ಎ. ಸುವರ್ಣ ಪುನರಾಯ್ಕೆಯಾಗಿದ್ದಾರೆ. ಮಾ. 13ರಂದು ಫೆಡರೇಶನ್‌ನ ಆಡಳಿತ ಮಂಡಳಿಯ ಸಭೆಯಲ್ಲಿ ಮಂಗಳೂರಿನ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಸುಧೀರ್‌ ಕುಮಾರ್‌ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ರಾಜ್ಯ ಸರಕಾರದ ಮತ್ತು ಕೇಂದ್ರ ಸರಕಾರದ ಹಲವಾರು ಯೋಜನೆಗಳನ್ನು ಸಂಸ್ಥೆಗೆ ಪಡೆದು ಅನುಷ್ಠಾನ ಗೊಳಿಸಿ 46 […]

ಎನ್.ಎಸ್.ಎಸ್ ವಾರ್ಷಿಕ ಶಿಬಿರ ಸಮಾರೋಪ ಸಮಾರಂಭ

ಉಡುಪಿ: ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಡಾ.ಜಿ.ಶಂಕರ್ ಸರ್ಕಾರಿಮಹಿಳಾ ಪ್ರಥಮ ದರ್ಜೆ ಕಾಲೇಜು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಗುರುವಾರ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ನಿವೃತ್ತ ರಾಜ್ಯ ಅಧಿಕಾರಿ ಡಾ. ಗಣನಾಥ ಎಕ್ಕಾರು ಮಾತನಾಡಿ, ವಿದ್ಯಾರ್ಥಿ ಜೀವನ ಮುಂದಿನ ಬದುಕಿಗೆ ಪಂಚಾಂಗವಿದ್ದಂತೆ. ಎನ್.ಎಸ್.ಎಸ್. ಚಟುವಟಿಕೆಗಳು ಯುವಜನತೆಯ ಬದುಕನ್ನು ರೂಪಿಸುವಲ್ಲಿ […]