ರಸ್ತೆ ಸ್ವಚ್ಛತಾ ಯಂತ್ರಕ್ಕೆ ಚಾಲನೆ

ಉಡುಪಿ: ನಗರಸಭೆಯ ರಸ್ತೆಗಳನ್ನು ಸ್ವಚ್ಛಗೊಳಿಸಲು ನೂತನವಾಗಿ ಖರೀದಿಸಲಾದ ನಗರಸಭಾ ರಸ್ತೆಸ್ವಚ್ಛಗೊಳಿಸುವ ಯಂತ್ರಕ್ಕೆ ಮಂಗಳವಾರ ಶಾಸಕ ಯಶ್‌ಪಾಲ್ ಸುವರ್ಣ ವಾಹನವನ್ನು ಚಲಾಯಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪೌರಾಯುಕ್ತ ರಾಯಪ್ಪ, ಸ್ಥಾಯಿ ಸಮೀತಿ ಅಧ್ಯಕ್ಷ ಶ್ರೀಶ ಭಟ್ ಕೊಡವೂರು, ನಿಟ್ಟೂರು ವಾರ್ಡ್ನ ಕೌನ್ಸಿಲರ್ ಸಂತೋಷ್ ಜತ್ತನ್ನ, ಗುಂಡಿಬೈಲು ವಾರ್ಡ್ನ ಕೌನ್ಸಿಲರ್ ಪ್ರಭಾಕರ ಪೂಜಾರಿ, ಕಕ್ಕುಂಜೆ ವಾರ್ಡ್ನ ಕೌನ್ಸಿಲರ್ ಬಾಲಕೃಷ್ಣ ಶೆಟ್ಟಿ, ಇಂದಿರಾನಗರ ವಾರ್ಡ್ನ ಕೌನ್ಸಿಲರ್ ಚಂದ್ರಶೇಖರ, ಕಿನ್ನಿಮುಲ್ಕಿ ವಾರ್ಡ್ನ ಕೌನ್ಸಿಲರ್ ಅಮೃತಾ ಕೃಷ್ಣಮೂರ್ತಿ, ಒಳಕಾಡು ವಾರ್ಡ್ನ ಕೌನ್ಸಿಲರ್ […]

ಉಡುಪಿ –ಚಿಕ್ಕಮಗಳೂರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಘಟಕದ ಅಧ್ಯಕ್ಷರು ನನ್ನ ಮೇಲೆ ವಿಶ್ವಾಸವಿಟ್ಟು ಲೋಕಸಭೆ ಚುನಾವಣೆಗೆ ಟಿಕೆಟ್‌ ನೀಡಿದ್ದಾರೆ. ಉಡುಪಿ –ಚಿಕ್ಕಮಗಳೂರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ಮಾಡಿದ್ದೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಹಿಂದುತ್ವ, ರಾಷ್ಟ್ರೀಯತೆ ಹಾಗೂ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮತದಾರರ ಮುಂದಿಟ್ಟು ಮತಯಾಚನೆ ಮಾಡುತ್ತೇನೆ. ಮೋದಿ ಅವರ 10 ವರ್ಷಗಳ ಆಡಳಿತ ವಿಶ್ವದ ಮೆಚ್ಚುಗೆ ಪಡೆದಿದ್ದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಮತದಾರರ ವಿಶ್ವಾಸ ಪಡೆಯುವಲ್ಲಿ ಸಂಶಯವಿಲ್ಲ ಎಂದರು. ಕೋಟ […]

ಅಭಿವೃದ್ಧಿಗೆ ಮೊದಲ ಆದ್ಯತೆ: ಕ್ಯಾಪ್ಟನ್ ಬೃಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ನಳಿನ್‌ಕುಮಾರ್ ಕಟೀಲ್ ಅವರನ್ನು ಕೈಬಿಟ್ಟ ಬಿಜೆಪಿ, ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಬೃಜೇಶ್ ಚೌಟ (42) ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು ಎಲ್ಲ ಕುತೂಹಲಗಳಿಗೆ ತೆರೆ ಬಿದ್ದಿದೆ. ಬಾಲ್ಯದಿಂದ ಆರ್‌ಎಸ್‌ಎಸ್‌ ನಂಟು ಹೊಂದಿರುವ ಚೌಟ, ನಂತರ ಭೂಸೇನೆಗೆ ಸೇರಿ, ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್‌ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು. ಸ್ವಯಂ ನಿವೃತ್ತಿಯ ಬಳಿಕ ಮಂಗಳೂರಿಗೆ ಬಂದು ಸಂಘ ಪರಿವಾರದ […]

ದಶಕಗಳ ಬಳಿಕ ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಲೈಮ್ ಡಿಸೀಸ್: ಬ್ಯಾಕ್ಟೀರಿಯಾದಿಂದ ಹರಡುವ ರೋಗದ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ

ತಿರುವನಂತಪುರ: ಬರೋಬ್ಬರಿ ಹತ್ತು ವರ್ಷದ ಬಳಿಕ ಕೇರಳ ರಾಜ್ಯದ ಎರ್ನಾಕುಳಂನಲ್ಲಿ ಲೈಮ್ ಡಿಸೀಸ್ (Lyme Disease) ಪತ್ತೆಯಾಗಿದೆ. ಅತ್ಯಂತ ಅಪರೂಪದ ಈ ಕಾಯಿಲೆ ಬೊರೆಲಿಯಾ ಬರ್ಗ್‌ಡೋರ್‍ಫೆರಿ ಎಂಬ ಬ್ಯಾಕ್ಟೀರಿಯಾ ಮೂಲಕ ಹರಡುತ್ತಿದ್ದು, ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ 56 ವರ್ಷದ ವ್ಯಕ್ತಿಯೊಬ್ಬರಲ್ಲಿ ಈ ರೋಗವನ್ನು ವೈದ್ಯರು ದೃಢಪಡಿಸಿದ್ದಾರೆ. ತೀವ್ರ ರೀತಿಯ ಜ್ವರ, ಮೊಣಕಾಲಿನ ಊತದಿಂದ ಡಿಸೆಂಬರ್ ತಿಂಗಳಿನಲ್ಲಿ ಈ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕದ ದಿನಗಳಲ್ಲಿ ಅವರಿಗೆ ಅಪಸ್ಮಾರದ ಲಕ್ಷಣ ಕಾಣಿಸಿಕೊಂಡಿತ್ತು. ಬಹಳಷ್ಟು ಚಿಕಿತ್ಸೆ ಬಳಿಕವೂ ಗುಣಮುಖವಾಗದ […]

ಅಸಂಘಟಿತ ಕಾರ್ಮಿಕರಿಗಾಗಿ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ನೋಂದಾಯಿಸಲಾಗುತ್ತಿದ್ದು, 2022 ರ ಮಾರ್ಚ್ 31 ರ ವರೆಗೆ ನೋಂದಣಿಯಾದ ಮತ್ತು ಸದರಿ ದಿನಾಂಕದೊಳಗೆ ಅಪಘಾತಗೊಂಡ ಫಲಾನುಭವಿಗಳು ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಅಪಘಾತದಿಂದ ಮರಣ ಹೊಂದಿದ್ದಲ್ಲಿ ಹಾಗೂ ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಕಾರ್ಮಿಕ ಅಧಿಕಾರಿಗಳ […]