ಆಳ್ವಾಸ್’ನಲ್ಲಿ ವರ್ಷಪೂರ್ತಿ ಉಚಿತ ನೇತ್ರ ತಪಾಸಣಾ ಶಿಬಿರ.

ಮೂಡುಬಿದಿರೆ: ಈ ಪ್ರಕೃತಿಯ ಸೌಂದರ್ಯವನ್ನು ಎಲ್ಲರೂ ಜೀವನಪೂರ್ತಿ ತಮ್ಮ ಕಣ್ಣುಗಳಿಂದ ಸವಿಯಬೇಕು ಎಂಬ ಉದ್ದೇಶವಿಟ್ಟುಕೊಂಡು ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮೂಖಾಂತರ ಈ ವರ್ಷಪೂರ್ತಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ವಿದ್ಯಾಗಿರಿಯಲ್ಲಿ ಆಯೋಜಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ನುಡಿದರು. ಮಾ. 15ರಂದು ವಿದ್ಯಾಗಿರಿಯ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ಆವರಣದಲ್ಲಿ ಬಂಟರ ಸಂಘ ಮೂಡುಬಿದಿರೆಯ ಮಹಿಳಾ ಘಟಕ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ […]

ಸದೃಢ ಭಾರತ ನಿರ್ಮಾಣ ಮಾಡಲು ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಮಾಡಬೇಕು: ಜಿ.ಪಂ ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಪ್ರತಿಯೊಬ್ಬ ಅರ್ಹ ಮತದಾರರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದರೊಂದಿಗೆ ಮತದಾನ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್ ಹೇಳಿದರು ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಏಪ್ರಿಲ್ 26 ರಂದು ನಡೆಯಲಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ಅರ್ಹ ಪ್ರತಿಯೊಬ್ಬ ಮತದಾರರು […]

ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

ಮಲ್ಪೆ: ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಮಾ. 19ರಿಂದ 29ರವರೆಗೆ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಂಗಳವಾರ ಬೆಳಗ್ಗೆ ದೇಗುಲ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಣ ಮುಹೂರ್ತ ಮೊದಲಾದವರು ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಬೆಳಗ್ಗೆ 7-30ರ ವೇಳೆ ದೇಗುಲದ ಮುಂಭಾಗದಲ್ಲಿ ದೇವಸ್ಥಾನ ಮತ್ತು ಸಮಿತಿಯ ವತಿಯಿಂದ ಋತ್ವಿಜರನ್ನು ಸ್ವಾಗತಿಸಲಾಯಿತು. ಬಳಿಕ ಋತ್ವಿಗ್ವರಣೆ, ಶಿಲ್ಪಿ ಮರ್ಯಾದೆ, ಗೇಹ ಪ್ರತಿಗ್ರಹ, ಸಾಮೂಹಿಕ ದೇವತಾ ಪ್ರಾರ್ಥನೆಯನ್ನು ನಡೆಸಲಾಯಿತು. ದೇವಸ್ಥಾನ ಮುಂಭಾಗ ಸೇರಿದಂತೆ […]

ಮಾ. 22- 27: ಶ್ರೀ ವಡಭಾಂಡ ಬಲರಾಮ ದೇವಸ್ಥಾನ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮ ಕಲಶೋತ್ಸವ, ಮನ್ಮಹಾರಥೋತ್ಸವ

ಉಡುಪಿ: ಇತಿಹಾಸ ಪ್ರಸಿದ್ದ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮ ಕಲಶೋತ್ಸವ, ಮನ್ಮಹಾರಥೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಮಾ.22 ರಿಂದ 27 ರವರೆಗೆ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಅನುಗ್ರಹದೊಂದಿಗೆ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. ಮಾ.19 ರಂದು ಸಂಜೆ 4 ರಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ ಮಹತೋಭಾರ ಶ್ರೀ ಶಂಕರನಾರಾಯಣ ದೇವಳದಿಂದ ಪ್ರಾರಂಭ. ಮಾ. 22 ರಂದು ಶ್ರೀ ದೇವರ ಪುನಃ ಪ್ರತಿಷ್ಠೆಮಾ.25 ರಂದು ಅಷ್ಟಬಂಧ ಬ್ರಹ್ಮಕಲಶೋತ್ಸವಮಾ. 27 […]

ದೇಶದ ಅತ್ಯಂತ ಕಿರಿಯ ಮಿಲಿಯನೇರ್!! ನಾಲ್ಕು ತಿಂಗಳ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಷೇರು ಉಡುಗೊರೆಯಾಗಿ ನೀಡಿದ ನಾರಾಯಣ ಮೂರ್ತಿ

ಬೆಂಗಳೂರು: ಇನ್ಫೋಸಿಸ್ (Infosys) ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಲೇಖಕಿ ಸುಧಾ ಮೂರ್ತಿ ಅವರ ಮಗ ರೋಹನ್ ಮೂರ್ತಿ ಮತ್ತು ಸೊಸೆ ಅಪರ್ಣಾ ಕೃಷ್ಣನ್ ಅವರಿಗೆ ನವೆಂಬರ್ 10, 2023 ರಂದು ಜನಿಸಿದ ಏಕಾಗ್ರಹ ರೋಹನ್ ಮೂರ್ತಿ ದೇಶದ ಅತ್ಯಂತ ಕಿರಿಯ ಮಿಲಿಯನೇರ್ ಆಗಿ ಹೊರಹೊಮ್ಮಿದ್ದಾನೆ. ನಾಲ್ಕು ತಿಂಗಳ ಮಗುವೀಗ ಇನ್ಫೋಸಿಸ್‌ನಲ್ಲಿ 0.04 ರಷ್ಟು ಷೇರುಗಳ ಮಾಲೀಕನಾಗಿದ್ದಾನೆ. ಏಕೆಂದರೆ, 240 ಕೋಟಿ ಮೌಲ್ಯದ ಷೇರುಗಳನ್ನು ನಾರಾಯಣ ಮೂರ್ತಿ ಮೊಮ್ಮಗನಿಗೆ ಉಡುಗೊರೆಯಾಗಿ ನೀಡಿದ್ದಾರೆ.