ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರದ ನೇಮಕಾತಿ ಪ್ರಾಧಿಕಾರವು ದೆಹಲಿ ಪೋಲೀಸ್ ಮತ್ತು ಸಶಸ್ತ್ರ ಪಡೆಗಳಲ್ಲಿ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ www.ssckkr.kar.nic.in ಮತ್ತು https://ssc.gov.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 29 ರ ಒಳಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಕಾರ್ಯಾಗಾರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ “ಚೈನ್” ಮಕ್ಕಳ ಸುಧಾರಿತ ಪೌಷ್ಠಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಶ್ರೀ ಕೃಷ್ಣ ಸಭಾಂಗಣದಲ್ಲಿ ಶನಿವಾರ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ ಮಾತನಾಡಿ, ಮಕ್ಕಳಲ್ಲಿನ ಅಪೌಷ್ಠಿಕತೆ ಮತ್ತು ರಕ್ತಹೀನತೆಯನ್ನು […]

ಲೋಕಸಭಾ ಚುನಾವಣೆ ಹಿನ್ನೆಲೆ: ಶಸ್ತ್ರಾಸ್ತ್ರಗಳ ಠೇವಣಿಗೆ ಸೂಚನೆ

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಚುನಾವಣಾ ನೀತಿ ಸಂಹಿತೆ ಜ್ಯಾರಿಯಲ್ಲಿದ್ದು, ಏಪ್ರಿಲ್ 26 ರಂದು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಶಸ್ತ್ರಾಸ್ತ್ರಗಳ ಠೇವಣಿ ಕಾರ್ಯಕ್ಕೆ ಸ್ಕ್ರೀನಿಂಗ್ ಕಮಿಟಿ ರಚನೆಯಾಗಿರುತ್ತದೆ. ಮುಕ್ತ ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದನ್ನು ಖಾತರಿಪಡಿಸುವ ಸಲುವಾಗಿ ಆಯುಧ ಪರವಾನಿಗೆ ಹೊಂದಿರುವ ಪರವಾನಿಗೆದಾರರನ್ನು ಪೂರ್ವಭಾವಿ ಪರಿಶೀಲನೆ ಮಾಡಿ ಚುನಾವಣೆಯ ಅವಧಿಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಆಯುಧ, ಶಸ್ತ್ರಾಸ್ತ್ರ, ಮಾರಕಾಯುಧಗಳು ಹಾಗೂ ಮದ್ದುಗುಂಡುಗಳನ್ನು ಹೊಂದುವುದು, ಸಾಗಿಸುವುದು […]

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ನೇಮಕ

ಉಡುಪಿ: ಯಕ್ಷಗಾನ ಕಲಾರಂಗದ ಅಧ್ಯಕ್ಷರಾಗಿ, 60ನೇ ವಯಸ್ಸಿನಲ್ಲಿ ಯಕ್ಷಗಾನ ಕಲಿತ ಯಕ್ಷ ಸಂಘಟಕ, ಸಮಾಜ ಸೇವಕಡಾ। ತಲ್ಲೂರು ಶಿವರಾಮ ಶೆಟ್ಟಿ ಇವರನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಕರ್ನಾಟಕ ಸರಕಾರ ನೇಮಕಗೊಳಿಸಿದೆ. ಸದಸ್ಯರಾಗಿ ಎಚ್‌. ರಾಘವ, ಕೃಷ್ಣಪ್ಪ ಪೂಜಾರಿ, ಗುರುರಾಜ್ ಭಟ್, ವಿನಯ್ ಕುಮಾರ್ ಶೆಟ್ಟಿ, ವಿಜಯ್ ಕುಮಾರ್ ಶೆಟ್ಟಿ (ಮೂಲ್ಕಿ), ಮೋಹನ್ ಕೊಪ್ಪಾಳ್, ಸತೀಶ್ ಅಡ್ಡಪ್ಪ ಸಂಕಬೈಲ್, ರಾಜೇಶ್ ಕಳೆ, ದಯಾನಂದ ಪಿ, ಜಿ.ವಿ.ಎಸ್. ಉಳ್ಳಾಲ ಆಯ್ಕೆಯಾಗಿದ್ದಾರೆ.