ಹಿರಿಯಡಕ: ಓಂತಿಬೆಟ್ಟುವಿನಲ್ಲಿ ಖಾಸಗಿ ಬಸ್, ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ.
ಉಡುಪಿ: ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಟಿಪ್ಪರ್ ವೊಂದು ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಚಾಲಕ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯಡಕ ಸಮೀಪದ ಓಂತಿಬೆಟ್ಟು ಎಂಬಲ್ಲಿ ಇಂದು ಸಂಜೆ ನಡೆದಿದೆ. ಅಪಘಾತದ ತೀವ್ರತೆಗೆ ಟಿಪ್ಪರ್ ಚಾಲಕ ಸಿಲುಕಿಕೊಂಡಿದ್ದು, ಆತನನ್ನು ಸ್ಥಳೀಯರು ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ. ಮಾತ್ರವಲ್ಲದೆ ಬಸ್ ಪ್ರಯಾಣಿಕರಿಗೂ ಸಣ್ಣಪುಟ್ಟಗಾಯವಾಗಿದೆ ಎಂದು ತಿಳಿದುಬಂದಿದೆ.
ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ
ಕುಂದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಶಾ ಎಸ್ (52) ಬುಧವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿದ್ದ ಆಶಾ ಅವರು ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು ಬಳಿಕ ಅಪರಾಹ್ನ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ಮೂಲಗಳ ಪ್ರಕಾರ ಲಾಕರ್ ನಲ್ಲಿಟ್ಟಿದ್ದ ಚಿನ್ನ ಕಂಡುಬರದ ಹಿನ್ನೆಲೆ […]
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸಾಮಾಜಿಕ ಸಮ್ಮೇಳನ ಮತ್ತು ಜಿಲ್ಲಾ ಪದಾಧಿಕಾರಿ ಗಳ ಪದಗ್ರಹಣ ಕಾರ್ಯಕ್ರಮ
ಕೊಡವೂರು: ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಸಾಮಾಜಿಕ ಸಮ್ಮೇಳನ ಮತ್ತು ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಕೊಡವೂರು ರವರು ಉದ್ಘಾಟಿಸಿದರು. ಸಭೆಯನ್ನು ಉದ್ಧೇಶಿಸಿ ಮಾತನಾಡಿದ ವಿಜಯ್ ಕೊಡವೂರು, ಹಿಂದುಳಿದ ವರ್ಗಕ್ಕೆ ಭಾರತೀಯ ಜನತಾ ಪಕ್ಷ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರವು ಹಿಂದುಳಿದ ವರ್ಗಗಳಿಗೆ ನೀಡಿದ ಕೊಡುಗೆಗಳ ಕುರಿತು ಮಾಹಿತಿಯನ್ನು ನೀಡಿದರು.ಉಡುಪಿ ಲೋಕ ಸಭಾ ಕ್ಷೇತ್ರದ ಅಭಿವೃದ್ಧಿ ಜೊತೆಗೆ ಚತುಷ್ಪಥ ಹೆದ್ದಾರಿ ಮೆಟ್ರೋ ರೈಲು ಇತ್ಯಾದಿ […]
ಕುಂದಾಪುರ: ಪ್ರವಾಹಕ್ಕೆ ಸಿಲುಕಿದ ದೋಣಿಯಿಂದ ಎಂಟು ಮಂದಿಯನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್
ಕುಂದಾಪುರ: ಭಾರತೀಯ ಕೋಸ್ಟ್ ಗಾರ್ಡ್ (Indian Coast Guard) ಬುಧವಾರ ಕುಂದಾಪುರದ ಕರಾವಳಿಯಲ್ಲಿ ಪ್ರವಾಹಕ್ಕೆ ಸಿಲುಕಿದ ದೋಣಿಯಿಂದ ಎಂಟು ಸಿಬ್ಬಂದಿಗಳ ರಕ್ಷಣಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. “ಕ್ಷಿಪ್ರ ಕಾರ್ಯಾಚರಣೆಯಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಶಿಪ್ ರಾಜ್ದೂತ್ ಮಾರ್ಚ್ 20 ರಂದು ಕುಂದಾಪುರದ ಪಶ್ಚಿಮಕ್ಕೆ 10 NM ದೂರದಲ್ಲಿ ಸಮುದ್ರದಲ್ಲಿ ಭಾರಿ ಪ್ರವಾಹಕ್ಕೆ ಸಿಲುಕಿದ IFB ಅಜ್ಮೀರ್-I (IND-KA-02-MM-4882) 08 ಸಿಬ್ಬಂದಿಯನ್ನು ರಕ್ಷಿಸಿದೆ. ಭಾರತೀಯ ಕೋಸ್ಟ್ ಗಾರ್ಡ್ ಶಿಪ್ ರಾಜ್ದೂತ್ ಬೋಟ್ ನಲ್ಲಿದ್ದ ಸಿಬ್ಬಂದಿಗೆ ಧೈರ್ಯ ತುಂಬಿದರು ಮತ್ತು […]
ದೊಡ್ಡಣ್ಣಗುಡ್ಡೆ: ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ
ದೊಡ್ಡಣ್ಣಗುಡ್ಡೆ: ಇಲ್ಲಿನ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ದೇವಿ ಅನುಗ್ರಹಿತ ಭಕ್ತ ಶ್ರೀ ರಮಾನಂದ ಗುರೂಜಿ ಮಾ. 23 ಶನಿವಾರದಿಂದ 24ರ ಭಾನುವಾರ ತನಕ ಹಾಗೂ 27ರ ಬುಧವಾರ ಮುಂಬೈನ ಲೋವರ್ ಪರೇಲಿನಲ್ಲಿರುವ ಸೈಂಟ್ ರಿಜಿಸ್(St. Regis) ಪಂಚತಾರಾ ಹೊಟೇಲಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾ.26ರಂದು ಇಂದೋರಿಗೆ ಭೇಟಿ ನೀಡಲಿದ್ದು, ಅಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ತನ್ನ ಸೂಕ್ತ ಮಾರ್ಗದರ್ಶನದಿಂದ ಸಂಕಷ್ಟಕೊಳಗಾದವರ ಸಂಕಷ್ಟ ನಿವಾರಿಸಿ ಭಕ್ತ ಜನರ […]