ಮಂಗಳೂರು: ಮಾ.24ರಂದು ಸಂಗೀತ ಭಾರತಿ ಪ್ರತಿಷ್ಠಾನ ಪ್ರಸ್ತುತ ಪಡಿಸುವ ಉತ್ಕೃಷ್ಟ ಮಟ್ಟದ ‘ಸ್ತ್ರೀ ಶಕ್ತಿ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ
ಮಂಗಳೂರು: ಮಂಗಳೂರಿನ ಸಂಗೀತ ಭಾರತಿ ಪ್ರತಿಷ್ಠಾನದ ಆಶ್ರಯದಲ್ಲಿ ‘ಸ್ತ್ರೀ ಶಕ್ತಿ’ ಎಂಬ ಪರಿಕಲ್ಪನೆಯಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಮಾರ್ಚ್ 24 ರಂದು ಭಾನುವಾರ ಸಂಜೆ 5.30ಕ್ಕೆ ನಗರದ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ. ಉತ್ಕೃಷ್ಟ ಮಟ್ಟದ ಶಾಸ್ತ್ರೀಯ ಗಾಯನ ಮತ್ತು ‘ಸಿತಾರ್- ಸಂತೂರ್’ ಜುಗಲ್‍ಬಂಧಿ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇದ್ದು, ಸಂಗೀತಪ್ರಿಯರಿಗೆ ಇದೊಂದು ಸಂಗೀತದ ರಸದೌತಣವಾಗಲಿದೆ. ಪೂರ್ವಾರ್ಧದಲ್ಲಿ ಬೆಂಗಳೂರಿನ ಶ್ರೀಲಕ್ಷ್ಮಿ ಬೆಳ್ಮಣ್ಣು ಇವರು‘ಶಾಸ್ತ್ರೀಯ ಗಾಯನ’ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು ಇದಕ್ಕೆ ಹಾರ್ಮೋನಿಯಂನಲ್ಲಿ ಬೆಂಗಳೂರಿನ […]
ವಿದೇಶದಿಂದ 25 ಸಾವಿರ ಕೋಟಿ ರೂ ಕಪ್ಪುಹಣ ಭಾರತಕ್ಕೆ ವಾಪಸ್: ಕ್ಯಾ. ಗಣೇಶ್ ಕಾರ್ಣಿಕ್
ಮಂಗಳೂರು: ವಿದೇಶಿ ಬ್ಯಾಂಕ್‌ಗಳಲ್ಲಿ ಭಾರತೀಯರು ಠೇವಣಿ ಇಟ್ಟಿದ್ದ 25 ಸಾವಿರ ಕೋಟಿ ರೂ.ಗಳಷ್ಟು ಕಪ್ಪು ಹಣ ಬೇರೆ ಬೇರೆ ರೂಪಗಳಲ್ಲಿ ದೇಶಕ್ಕೆ ವಾಪಾಸ್ ಬಂದಿದೆ ಎಂದು ಬಿಜೆಪಿ ಮುಖಂಡ ಕ್ಯಾ. ಗಣೇಶ ಕಾರ್ಣಿಕ್ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ವಿದೇಶಿ ಬ್ಯಾಂಕ್‌ಗಳಿಂದ ಹಣವನ್ನು ಹೊತ್ತುಕೊಂಡು ತರಲಾಗದು. ಕಪ್ಪುಹಣ ಠೇವಣಿ ಇಟ್ಟವರ ವಿವರ ಪಡೆದು, ಆಸ್ತಿ ಜಪ್ತಿ ಮಾಡುವಂತಹ ಪ್ರಕ್ರಿಯೆಗಳು ನಡೆದಿವೆ. ಕಪ್ಪು ಹಣ ಠೇವಣಿ ಕುರಿತು ಮಾಹಿತಿ ಹಂಚಿಕೊಳ್ಳುವ ಕುರಿತು ಕೆಲ ದೇಶಗಳೊಂದಿಗೆ ಒಪ್ಪಂದ […]
ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗಾಗಿ ಸಹಾಯವಾಣಿ ಪ್ರಾರಂಭ
ಉಡುಪಿ: ಬೇಸಿಗೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ 24*7 ಕಂಟ್ರೋಲ್ ರೂಮ್ ಅನ್ನು ಪ್ರಾರಂಭಿಸಲಾಗಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ: 18004257049 ಗೆ ಕರೆಮಾಡಬಹುದಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನ್ಯೆರ್ಮಲ್ಯ ವಿಭಾಗದ ಕಛೇರಿ ಪ್ರಕಟಣೆ ತಿಳಿಸಿದೆ.
ಮಾರ್ಚ್ 25-27 ನೀರು ಸರಬರಾಜಿನಲ್ಲಿ ವ್ಯತ್ಯಯ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಸ್ವರ್ಣಾ ನದಿಯ ಬಜೆ ಪಂಪ್‌ಹೌಸ್‌ನಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ದುರಸ್ಥಿ ಕಾರ್ಯ ಕೈಗೊಳ್ಳಲಾಗುವುದರಿಂದ ಮಾರ್ಚ್ 25 ರಂದು ಬೆಳಗ್ಗೆ 9 ಗಂಟೆಯಿಂದ ಮಾ. 26 ರ ಬೆಳಗ್ಗೆ 9 ಗಂಟೆಯವರೆಗೆ ಉಡುಪಿ ನಗರಕ್ಕೆ ನೀರು ಸರಬರಾಜು ಇರುವುದಿಲ್ಲ ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿನ ಎತ್ತರದ ಪ್ರದೇಶಗಳಿಗೆ ಮಾ. 26 ಮತ್ತು 27 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.
ವೈಭವದಿಂದ ವೈಭವದ ಹಸಿರು ಹೊರೆಕಾಣಿಕೆ ಮೆರವಣಿಗೆಯೊಂದಿಗೆ ಜನಸಾಗರ
ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಪ್ರತಿಷ್ಟಾ ಬ್ರಹ್ಮಕಲಶ: ಮಲ್ಪೆ: ಇಲ್ಲಿನ ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಮಾ.19ರಿಂದ 29ರವರೆಗೆ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಂಗಳವಾರ ಸಂಜೆ 4ರಿಂದ ಹಸಿರು ಹೊರೆ ಕಾಣಿಕೆ ಮೆರವಣಿಗೆಯು ಕೊಡವೂರು ಶಂಕರನಾರಾಯಣ ದೇವಸ್ಥಾನದಿಂದ ಆರಂಭಗೊಂಡು ವಡಭಾಂಡ ಬಲರಾಮ ದೇವಸ್ಥಾನಕ್ಕೆ ಬಹಳ ವೈಭವಯುತವಾಗಿ ಸಾಗಿ ಬಂತು. ಭಕ್ತವೃಂದ ವಡಭಾಂಡೇಶ್ವರ ವತಿಯಿಂದ ರಜತ ದೇವರಿಗೆ ರಜತ ಪ್ರಭಾವಳಿ, ಪಾಣಿಪೀಠ ಹಾಗೂ ಗರ್ಭಗುಡಿ ದ್ವಾರ ಬಾಗಿಲಿಗೆ ರಜತ ಕವಚವನ್ನು ಕೊಡುಗೆಯಾಗಿ ನೀಡಿದ್ದಾರೆ. […]