ಬೈಂದೂರು: ಮಾರ್ಚ್ 25 ರಿಂದ ಏಪ್ರಿಲ್ 06 ರ ವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ
ಬೈಂದೂರು: 2024ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 06 ರ ವರೆಗೆ ನಡೆಯಲಿದ್ದು, ಸದ್ರಿ ಪರೀಕ್ಷೆಯ ಬೈಂದೂರು ವಲಯದ ಪರೀಕ್ಷಾ ಕೇಂದ್ರವಾದ ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜು, ಬೈಂದೂರು ವಲಯ (ಜಿ.ಎ.049) ಈ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಬೋಳಂಬಳ್ಳಿ, ಕಾಲೋಡು ಕಡೆಯಿಂದ ಬರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪರೀಕ್ಷಾ ಕೇಂದ್ರನ್ನು ತಲುಪಲು ಬಸ್‌ನ ಅವಶ್ಯಕತೆ ಇರವುದರಿಂದ ಸದ್ರಿ ಮಾರ್ಗದಲ್ಲಿ ಬಸ್ ವ್ಯವಸ್ಥೆಯನ್ನು ಮಾಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿರುತ್ತಾರೆ. ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ […]
ಲೋಕಸಭಾ ಚುನಾವಣೆ ಹಿನ್ನೆಲೆ ಮತದಾನ ಹಾಗೂ ಎಣಿಕೆಯಂದ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಜಿಲ್ಲೆಯಲ್ಲಿ ಏಪ್ರಿಲ್ 26 ರಂದು ಮತದಾನ ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ […]
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಕ್ಯಾಪ್ ನಿಂದ ದೊರೆಯಿತೇ ಆರೋಪಿಯ ಸುಳಿವು?
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಗೆ (NIA) ಸ್ಫೋಟಕ ಮಾಹಿತಿ ದೊರೆತಿದ್ದು, ಆರೋಪಿಗೂ ಚೆನ್ನೈಗೂ ಸಂಬಂಧ ಇದೆ ಎನ್ನಲಾಗಿದೆ. ಸ್ಫೋಟದಿಂದ ಕೆಲ ದೂರದಲ್ಲಿ ಶಂಕಿತ ಆರೋಪಿ ತನ್ನ ಕ್ಯಾಪ್ ಬಿಟ್ಟು ಹೋಗಿದ್ದು, ಪೊಲೀಸರು ಈ ಕ್ಯಾಪ್ ಮೂಲವನ್ನು ಬೇಧಿಸಿದ್ದಾರೆ. ಇದನ್ನು ಆತ ಚೆನ್ನೈನ ಮಾಲ್ ಒಂದರಲ್ಲಿ ಖರೀದಿ ಮಾಡಿದ್ದ ಎನ್ನುವ ಮಾಹಿತಿ ತನಿಖಾ ಸಂಸ್ಥೆಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ. ಚೆನ್ನೈನ ಮಾಲ್‌ನಲ್ಲಿ ಶಂಕಿತ ಟೋಪಿ ಖರೀದಿಸುತ್ತಿದ್ದ ವೇಳೆ ಆತನ ಜೊತೆ ಮತ್ತೊಬ್ಬ […]
ರಷ್ಯಾದಲ್ಲಿ ಐಸಿಸ್ ಭಯೋತ್ಪಾದಕ ದಾಳಿ: ಕನಿಷ್ಠ 60 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ
ಮಾಸ್ಕೋ: ಇಲ್ಲಿನ ಕ್ರೋಕಸ್ ಸಿಟಿ ಹಾಲ್‌ನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮವೊಂದಕ್ಕೆ ನುಗ್ಗಿದ ಅಪರಿಚಿತ ಶಸ್ತ್ರಧಾರಿಗಳ ಗುಂಪೊಂದು ಏಕಾಏಕಿ ಗುಂಡಿನ ಮಳೆಗರೆದಿದ್ದು, ಈ ಘಟನೆಯಲ್ಲಿ ಕನಿಷ್ಟ 60 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, 100 ಕ್ಕೂ ಅಧಿಕ ಮಂದಿ ತೀವ್ರ ಗಾಯಗೊಂಡಿದ್ದಾರೆ. ಐದು ಮಕ್ಕಳು ಸೇರಿದಂತೆ 115 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ರಷ್ಯಾದ ಆರೋಗ್ಯ ಸಚಿವ ಮಿಖಾಯಿಲ್ ಮುರಾಶ್ಕೊ ಹೇಳಿದ್ದಾರೆ. 110 ವಯಸ್ಕ ರೋಗಿಗಳಲ್ಲಿ 60 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಅವರು […]
IPL-2024: ಚೆನ್ನೈ ಸೂಪರ್ ಕಿಂಗ್ಸ್ ಶುಭಾರಂಭ; ಆರಂಭದಲ್ಲೇ ಎಡವಿದ ಆರ್.ಸಿ.ಬಿ
ಶುಕ್ರವಾರ ಮಾರ್ಚ್ 22 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2024 ರ 17 ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಆರು ವಿಕೆಟ್‌ಗಳಿಂದ ಜಯಗಳಿಸಿತು. ಗೆಲುವಿಗೆ 174 ರನ್‌ಗಳ ಗುರಿಯನ್ನು ಬೆನ್ನತ್ತಿದ ಸೂಪರ್ ಕಿಂಗ್ಸ್‌ನ ಎಲ್ಲಾ ಬ್ಯಾಟ್ಸ್‌ಮನ್‌ಗಳು ರಚಿನ್ ರವೀಂದ್ರ ಜೊತೆಯಾಟ ಆಡಿದರು. ಎಡಗೈ ಆಟಗಾರ ಕ್ವಿ 15 ಎಸೆತಗಳಲ್ಲಿ 37 ರನ್ ಗಳಿಸಿದರು. ತಂಡವು 110ಕ್ಕೆ […]