ಬಿಜೆಪಿ ಬಾಯಿ ಚಪಲಕ್ಕಾಗಿ ಸಜ್ಜನ ರಾಜಕಾರಣಿ ಜೆಪಿ ಹೆಗ್ಡೆ ತೇಜೋವಧೆ ಮಾಡುವುದನ್ನು ನಿಲ್ಲಿಸಲಿ : ವೆರೋನಿಕಾ ಕಾರ್ನೇಲಿಯೋ

ಉಡುಪಿ: ಬಿಜೆಪಿ ಅಭ್ಯರ್ಥಿಯ ಭಾಷಾ ಜ್ಞಾನದ ಕುರಿತು ಕಾಂಗ್ರೆಸ್ ಅಭ್ಯರ್ಥಿ ಮಾತನಾಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಬಂದ ತಪ್ಪಾದ ಹೇಳಿಕೆಯನ್ನೇ ಸತ್ಯವೆಂದು ತಮಟೆ ಬಾರಿಸುವಂತಹ ರೀತಿಯಲ್ಲಿ ಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರು ಮೊದಲು ತಮ್ಮ ಕಿವಿಯನ್ನು ಸರಿಯಾಗಿಸಿಕೊಂಡು ಕಣ್ಣಾರೆ ಕಂಡರೂ ಪರಾಂಬರಿಸಿ ನೋಡುವ ಕೆಲಸ ಮಾಡಲಿ ಅದನ್ನು ಬಿಟ್ಟು ಬಾಯಿ ಚಪಲಕ್ಕಾಗಿ ಸಜ್ಜನ ರಾಜಕಾರಣಿಯೋರ್ವರ ತೇಜೊವಧೆ ಮಾಡುವುದನ್ನು ನಿಲ್ಲಿಸಲಿ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೊ ಹೇಳಿದ್ದಾರೆ. ಬ್ರಹ್ಮಾವರದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ […]

ಮಂಗಳೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಇದು 80 ಪರ್ಸೆಂಟ್ ಸರ್ಕಾರ: ವಿ ಸುನಿಲ್ ಕುಮಾರ್

ಮಂಗಳೂರು : 25 ಲಕ್ಷ ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಮುಡಾ ಆಯುಕ್ತ ಮನ್ಸೂರ್ ಅಲಿ ಹಾಡ ಹಗಲೇ ಇಷ್ಟೊಂದು ಪ್ರಮಾಣದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದರೆ ಅವರಿಗೆ ಸರ್ಕಾರದ ಕೃಪಾಶೀರ್ವಾದ ಇರುವುದು ಸ್ಪಷ್ಟವಾಗುತ್ತದೆ. ಇದು 80 ಪರ್ಸೆಂಟ್ ಸರ್ಕಾರ. ಈ ಹಗರಣದಲ್ಲಿ ಸಿಎಂ, ಡಿಸಿಎಂ ಹಾಗೂ ನಗರಾಭಿವೃದ್ಧಿ […]

ನಾಳೆಯಿಂದ ಎಸೆಸೆಲ್ಸಿ ಪರೀಕ್ಷೆ ಪ್ರಾರಂಭ..

2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯು ಮಾ.25ರಿಂದ ಪ್ರಾರಂಭವಾಗುತ್ತಿದ್ದು, ರಾಜ್ಯಾದ್ಯಂತ 2,750 ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು ಹಾಗೂ 18,225 ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ. 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದು, ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.