ವಡಭಾಂಡ ಬಲರಾಮನಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ
ಮಲ್ಪೆ: ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರರಾಮ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು. ದೇಗುಲದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ದೇಗುಲದ ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿದಿ ವಿಧಾನಗಳು ಜರಗಿತು. ಬೆಳಗ್ಗೆ 6.45ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನಡೆಯಲಿರುವುದು. ಬಳಿಕ ನ್ಯಾಸಪೂಜೆ ಪ್ರಸನ್ನಪೂಜೆ ಅವಸೃತಬಲಿ, ಮಹಾ ಮಂತ್ರಕ್ಷತೆ, ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಪಲ್ಲಪೂಜೆಯಾಗಿ ಮಹಾಅನ್ನಸಂತರ್ಪಣೆ ನಡೆಯಿತು. ಸುಮಾರು ೧೫ ಸಾವಿರ ಮಂದಿ […]
ರಾಮನ ಅಸ್ತಿತ್ವ ಪ್ರಶ್ನಿಸಿದ ಡಿಎಂಕೆ ನಾಯಕ ಎಂ ಕರುಣಾನಿಧಿ ತವರೂರಿನಲ್ಲೇ ಶತಮಾನ ಹಳೆಯ ಕೋದಂಡ ರಾಮನ ವಿಗ್ರಹ ಪತ್ತೆ!!
ಚೆನ್ನೈ: ಡಿಎಂಕೆ ನಾಯಕ ಎಂ ಕರುಣಾನಿಧಿ ಅವರ ತವರೂರು ತಿರುವರೂರಿನಲ್ಲಿ ಮನೆ ನಿರ್ಮಾಣ ಕಾಮಗಾರಿಗಾಗಿ ಉತ್ಖನನದ ಸಂದರ್ಭದಲ್ಲಿ ಪತ್ತೆಯಾದ ಶತಮಾನಗಳಷ್ಟು ಹಳೆಯದಾದ ಕೋದಂಡ ರಾಮನ ವಿಗ್ರಹದ ದೃಶ್ಯಗಳು ಹೊರಹೊಮ್ಮಿವೆ. ಈ ಉತ್ಖನನವು ದ್ರಾವಿಡ, ಎಡಪಂಥೀಯ ಮತ್ತು ಇತರ ರಾಜಕೀಯ ಬಣಗಳ ರಾಮ ಕೇವಲ ಉತ್ತರ ಭಾರತಕ್ಕೆ ಸಂಬಂಧಿಸಿದ ಪೌರಾಣಿಕ ವ್ಯಕ್ತಿ ಎನ್ನುವ ನಿರಂತರ ಪ್ರತಿಪಾದನೆಗಳನ್ನು ಪ್ರಶ್ನಿಸುತ್ತಿದೆ. ಈ ಘಟನೆಯ ನಂತರ ತಿರುವರೂರು ಜಿಲ್ಲೆಯ ಪೆರುಮಾಲಕರಂ ಗ್ರಾಮವು ಇದ್ದಕ್ಕಿದ್ದಂತೆ ಜನರ ಗಮನ ಸೆಳೆದಿದೆ. ಸ್ಥಳೀಯ ಹೂವಿನ ಅಂಗಡಿ ಮಾಲೀಕ […]
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ ಇಬ್ಬರನ್ನು ವಶಕ್ಕೆ ಪಡೆದ ಎನ್‌ಐಎ
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಬ್ಬರು ಶಂಕಿತರನ್ನು ಬಂಧಿಸಿದೆ ಎಂದು ಮೂಲಗಳು ಮಂಗಳವಾರ ಖಚಿತಪಡಿಸಿವೆ. ಈ ಇಬ್ಬರು ಶಂಕಿತರು ಶಂಕಿತ ಬಾಂಬರ್‌ನೊಂದಿಗೆ ನೇರ ಸಂಪರ್ಕದಲ್ಲಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಎನ್‌ಐಎ ಅಧಿಕಾರಿಗಳು ಶಂಕಿತರನ್ನು ರಾಜ್ಯ ರಾಜಧಾನಿ ಬೆಂಗಳೂರಿನಿಂದ ಕರೆದೊಯ್ದಿದ್ದಾರೆ. ಆದರೆ, ಈ ಬಗ್ಗೆ ಎನ್‌ಐಎ ಇನ್ನಷ್ಟೇ ಹೇಳಿಕೆ ನೀಡಬೇಕಿದೆ. ತನಿಖಾ ಸಂಸ್ಥೆಗಳು, ಎನ್‌ಐಎ ಮತ್ತು ರಾಜ್ಯ ವಿಶೇಷ ವಿಭಾಗದ ಸಿಸಿಬಿ ತಂಡಗಳು ವಿವಿಧ ರಾಜ್ಯಗಳಲ್ಲಿ ವ್ಯಾಪಕ ಶೋಧ […]
ನೀರಿನ ಸಮಸ್ಯೆ ತಡೆಗಟ್ಟಲು ಗಿಡ ಮರಗಳನ್ನು ನೆಟ್ಟು ಪೋಷಿಸಿ: ಶರ್ಮಿಳಾ ಎಸ್
ಉಡುಪಿ: ಅಭಿವೃದ್ಧಿ ಹೆಸರಲ್ಲಿ ಮರಗಳನ್ನು ಕಡಿಯುತ್ತಿರುವುದರಿಂದ ಇತ್ತೀಚಿನ ವರುಷಗಳಲ್ಲಿ ಮಳೆಯಪ್ರಮಾಣ ಕಡಿಮೆಯಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಭವಿಷ್ಯದಲ್ಲಿ ಉದ್ಭವಿಸುವ ನೀರಿನ ಸಮಸ್ಯೆ ತಡೆಗಟ್ಟಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು. ಅವರು ಇತ್ತೀಚೆಗೆ ನಗರದ ಪೂರ್ಣ ಪ್ರಜ್ಞಾ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ನಗರಸಭೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೂರ್ಣ ಪ್ರಜ್ಞ ಕಾಲೇಜು ಉಡುಪಿ ಇವರ […]
ಉಡುಪಿ: ಯುವತಿ ನಾಪತ್ತೆ
ಉಡುಪಿ: ಹನುಮಂತನಗರ ನಿವಾಸಿ ಕಾಶಿಬಾಯಿ(20) ಎಂಬ ಯುವತಿಯು ಮಾರ್ಚ್ 3 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 122 ಸೆ.ಮೀ ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.