ಜಿಲ್ಲೆಯ 203 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವದ ಭೀತಿ
ಉಡುಪಿ: ಪ್ರಸ್ತುತ ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಬೇಸಿಗೆ ಬಿಸಿಲಿಗೆ ಕುಡಿಯುವ ನೀರಿನಮೂಲಗಳು ಕಡಿಮೆಯಾಗುತ್ತಿರುವ ಹಿನ್ನೆಲೆ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹಲವು ಮುಂಜಾಗ್ರತಾ ಕ್ರಮಗಳನ್ನು ಗ್ರಾಮೀಣ ಭಾಗದಲ್ಲಿ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ 155 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಒಟ್ಟು 247 ಗ್ರಾಮಗಳಿದ್ದು, ಇವುಗಳಲ್ಲಿ ಬ್ರಹ್ಮಾವರ ತಾಲೂಕಿನ 25 ಗ್ರಾಮ ಪಂಚಾಯತ್‌ಗಳ 42 ಗ್ರಾಮಗಳ 337 ಜನವಸತಿ ಪ್ರದೇಶ, ಕಾಪು ತಾಲೂಕಿನ 10 ಗ್ರಾಮ ಪಂಚಾಯತ್‌ಗಳಲ್ಲಿ 16 ಗ್ರಾಮಗಳ 100 ಜನವಸತಿ ಪ್ರದೇಶ, ಉಡುಪಿ ತಾಲೂಕಿನ 12 ಗ್ರಾಮ […]
ಹಿರಿಯಡ್ಕ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವಿಗಾಗಿ ಮಾ.29 ರಂದು ಕಾರ್ಯಕರ್ತರ ಸಭೆ
ಹಿರಿಯಡ್ಕ: ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ನಡೆಯುವ ಚುನಾವಣೆ ಎಂದೇ ಬಿಂಬಿತವಾಗಿರುವ 2024ರ ಲೋಕಸಭಾ ಚುನಾವಣೆಯ ತಯಾರಿಯ ಪೂರ್ವಭಾವಿಯಾಗಿ, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಮರ್ಥ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ಭೇಟಿಯಾಗಿ ಚುನಾವಣಾ ಸಿದ್ಧತೆ ಮತ್ತು ರೂಪುರೇಷೆಗಳ ಬಗ್ಗೆ ಸಮಾಲೋಚಿಸುವ ಸಲುವಾಗಿ ಮಾ. 29 ರಂದು ಹಿರಿಯಡ್ಕ ದೇವಾಡಿಗರ ಸಭಾಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಪಕ್ಷದ ರಾಜ್ಯ, ಜಿಲ್ಲಾ ಮತ್ತು […]
ಮಾ. 28 ರಿಂದ ಏ.8: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ
ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ (Loksabha Elections) ಸಂಬಂಧಿಸಿದಂತೆ ಉಡುಪಿ ಲೋಕಸಭಾ ಚುನಾವಣೆಗೆ ಮಾರ್ಚ್ 28 ರಿಂದ ಏಪ್ರಿಲ್ 4 ರ ವರೆಗೆ ನಾಮಪತ್ರ ಸಲ್ಲಿಕೆ, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಸದರಿ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವುದರಿಂದ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ನಾಮಪತ್ರಗಳನ್ನು ಹಿಂಪಡೆಯುವ ಕಾರ್ಯಗಳು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ […]