ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಮುಖ್ಯ ಸಂಚುಕೋರನ ಬಂಧನ
ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣದ ಆರೋಪಿ ಎನ್ನಲಾದ ಮುಜಾಮೀಲ್ ಶರೀಫ್ನನ್ನು ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಗುರುವಾರ ಬಂಧಿಸಿದ್ದು, ಪ್ರಕರಣದಲ್ಲಿ ಮೊದಲ ವ್ಯಕ್ತಿ ಬಂಧನ ಇದಾಗಿದೆ. ಮಾರ್ಚ್ 1ರಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಸಂಚಿನಲ್ಲಿ ಮುಜಾಮಿಲ್ ಶರೀಫ್ ಭಾಗಿಯಾಗಿದ್ದ. ಬಾಂಬ್ ಇರಿಸಿದ್ದಾನೆ ಎನ್ನಲಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾಗೆ ಸಹಕಾರ ನೀಡಿದ್ದ ಎಂದು ಎನ್ಐಎ ಮೂಲಗಳು ಹೇಳಿವೆ. 18 ಪ್ರಮುಖ ಸ್ಥಳಗಳ ಮೇಲೆ […]
ಬೆಳ್ತಂಗಡಿ: ರಕ್ಷಿತ್ ಶಿವರಾಂ ಸೋದರ ಮಾವ ಅಪಘಾತದಲ್ಲಿ ನಿಧನ
ಬೆಳ್ತಂಗಡಿ: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಂ ಸೋದರ ಮಾವ ಸ್ಕೂಟರ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಶೇಖರ್ ಬಂಗೇರ ಹೇರಾಜೆ (65)ಮೃತರಾದವರು. ಗುರುವಾರ ರಾತ್ರಿ ಪಟ್ಟಣದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದ ಹೋಟೆಲ್ನಿಂದ ಪಾರ್ಸಲ್ ಖರೀದಿಸಿದ್ದ ಅವರು, ರಸ್ತೆ ದಾಟುವಾಗ ಸ್ಕೂಟರ್ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಕೊನೆಯುಸಿರೆಳೆದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶೇಖರ್ ಬಂಗೇರ ಹೇರಾಜೆ ವಿಜಯ ಬ್ಯಾಂಕಿನ […]
ಉಡುಪಿ: ಮೊದಲ ದಿನ 1 ನಾಮಪತ್ರ ಸಲ್ಲಿಕೆ
ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಬಹುಜನ ಸಮಾಜ ಪಾರ್ಟಿಯ ಕೆ.ಟಿ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.
ಯುವ ಸಬಲೀಕರಣ ಇಲಾಖೆ ವತಿಯಿಂದ ಮಕ್ಕಳಿಗಾಗಿ ಬೇಸಿಗೆ ತರಬೇತಿ ಶಿಬಿರ
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 5 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 1 ರಿಂದ 21 ರ ವರೆಗೆ ಹಾಗೂ ಏಪ್ರಿಲ್ 22 ರಿಂದ ಮೇ 12 ರ ವರೆಗೆ ಎರಡು ಹಂತದಲ್ಲಿ ಈಜು, ಶಟ್ಲ್ ಬ್ಯಾಡ್ಮಿಂಟನ್, ಲಾನ್ ಟೆನ್ನಿಸ್, ಅಥ್ಲೆಟಿಕ್ಸ್ ಹಾಗೂ ಬಾಸ್ಕೆಟ್ ಬಾಲ್ ಕ್ರೀಡಾ ವಿಭಾಗದಲ್ಲಿ ಬೇಸಿಗೆ ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ […]
ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾ ಕೂಟ
ಉಡುಪಿ : ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಹಾಗು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟವು ಮಾರ್ಚ್ 28 ಗುರುವಾರದಂದು ಎಸ್.ವಿ.ಎಸ್ ಮೈದಾನ ಪಳ್ಳಿಗುಡ್ಡೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕೆ.ಎಂ.ಸಿ ಮಾಹೆ ಮಣಿಪಾಲದ ದೈಹಿಕ ಶಿಕ್ಷಣ ಉಪ ನಿರ್ದೇಶಕ ಡಾ. ದೀಪಕ್ ರಾಮ್ ಬಾಯರಿ, ಧ್ವಜಾರೋಹಣದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಆರೋಗ್ಯಪೂರ್ಣ ದೇಹಸ್ಥಿತಿಯನ್ನು ಹೊಂದಿರುವುದು ಅತಿ ಮುಖ್ಯ. ದಿನದಲ್ಲಿ ಸರಿಯಾದ ನಿದ್ದೆ ಮತ್ತು ಆರೋಗ್ಯಪೂರ್ಣ ಆಹಾರ ಪದ್ಧತಿಯಿಂದ ಸದೃಢ ಮನಸ್ಸು […]