ಲೋಕಸಭಾ ಚುನಾವಣೆ: ನೀತಿ ಸಂಹಿತೆ ಉಲ್ಲಂಘನೆ – ನಗದು ವಶ

ಉಡುಪಿ, ಮಾರ್ಚ್ 30: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 29 ರಂದು ಹೆಜಮಾಡಿ ಚೆಕ್‌ಪೋಸ್ಟ್ನಲ್ಲಿ 97,000 ರೂ. ದಾಖಲೆ ರಹಿತ ನಗದನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಹೆಬ್ರಿ: ಲಾರಿ ಡಿಕ್ಕಿ; ಬೈಕ್ ಸವಾರರಿಗೆ ಗಾಯ

ಹೆಬ್ರಿ: ಲಾರಿ ಡಿಕ್ಕಿಯಾಗಿ ಬೈಕ್ ಸವಾರರು ಗಾಯಗೊಂಡ ಘಟನೆ ಇಲ್ಲಿನ ಹೊರೊಣಮಕ್ಕಿ ಪಂಜುರ್ಲಿ ದೇವಸ್ಥಾನದ ಬಳಿ ಇರುವ ತಿರುವು ರಸ್ತೆಯ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಹೆಬ್ರಿ ಸಂತೆಕಟ್ಟೆಯಿಂದ ಮದ್ದೂರು ಕಡೆಗೆ ವೇಗವಾಗಿ ಚಲಿಸುತ್ತಿದ್ದ ಲಾರಿಯ ಹಿಂಬದಿಯು ಬೈಕ್ ಗೆ ಡಿಕ್ಕಿ ಹೊಡೆದು, ಚಾಲಕ ಸಾಗರ್ (24) ಕೈ ಮೂಳೆಮುರಿದೆ ಮತ್ತು ಸಹಸವಾರ ಸುಧೀರ್ ಎಂಬವರ ತಲೆ ಹಾಗೂ ಬಲಕೈಗೆ ತೀವ್ರ ಪೆಟ್ಟು ಬಿದ್ದಿದೆ. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಭತ್ತದ ಗದ್ದೆಗೆ ನೀರು ಬಿಡಲು ಹೋದ ವ್ಯಕ್ತಿ ಸಾವು

ಕಾರ್ಕಳ: ಭತ್ತದ ಗದ್ದೆಗೆ ನೀರು ಬಿಡಲು ಹೋದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.ಕಾರ್ಕಳ ನಿವಾಸಿ ರೂಪಾ (49) ಎಂಬವರ ಪತಿ ಸತೀಶ್ (53)ಮೃತಪಟ್ಟ ವ್ಯಕ್ತಿ. ಇವರು ಭತ್ತದ ಗದ್ದೆಗೆ ನೀರು ಬಿಡಲು ಹೋದಾಗ ಅರಂತೋಟು ಎಂಬಲ್ಲಿ ನೀರಿನ ತೋಡಿಗೆ ಹಾಕಿದ ಸೇತುವೆಯಿಂದ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ರಿಕ್ಷಾ ಚಾಲಕ ನಾಪತ್ತೆ..!

ಉಡುಪಿ, ಮಾರ್ಚ್ 30: ರಿಕ್ಷಾ ಚಾಲಕ ವೃತ್ತಿ ಹಾಗೂ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಮಲ್ಪೆಯ ಮಹಮ್ಮದ್ ಪೈಜಲ್ (36) ಎಂಬ ವ್ಯಕ್ತಿಯು ಮಾರ್ಚ್ 27 ರಂದು ರಾತ್ರಿ 11 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪ್ತತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆಯ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ:9480805447, ಉಡುಪಿ ವೃತ್ತ […]

ಮಂಗಳೂರು: ತಾಯಿ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ..!

ಮಂಗಳೂರು: ನಗರದ ಮುಡಿಪು ಸಮೀಪ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನಬಳಿ ಸಮೀಪದ ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ರಾತ್ರಿ ಪತ್ತೆಯಾಗಿದೆ.‌ ತಾಯಿಯು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯನ್ನು ನಾಗರಾಜ್ ಎಂಬವರ ಪತ್ನಿ ಚೈತ್ರಾ (30) ಎಂದು ತಿಳಿಯಲಾಗಿದೆ. ಅಡ್ಯಾರ್ ನಿವಾಸಿಯಾಗಿರುವ ಇವರು ತನ್ನ ಒಂದು ವರ್ಷದ ಮಗು ದಿಯಾಂಶ್ ಜತೆ ಮಧ್ಯಾಹ್ನ ಸೇತುವೆಯ ಮೂಲಕ ನಡೆದುಕೊಂಡು ಬಂದು ಹರೇಕಳ ಕಡವಿನಬಳಿ ಬಂದಿದ್ದರು ಎನ್ನಲಾಗಿದೆ. […]